ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ
ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ.8 ರಂದು ಸಂಜೆ 4 ಗಂಟೆಗೆ ನಡೆದಿದೆ. ಸತೀಶ್ ಅಮ್ಮಣ್ಣಾಯ ಎಂಬವರ ಮಕ್ಕಳಾದ ಹಂಷಿತ (14 ವರ್ಷ) ಮತ್ತು ಅವಂತಿಕಾ (10 ವರ್ಷ) ಎಂದು ಗುರುತಿಸಲಾಗಿದೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ, ಸ್ಥಳೀಯರ ಸಹಕಾರದಿಂದ ಇಬ್ಬರ ಮೃತ ದೇಹ ಪತ್ತೆ ಹಚ್ಚಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಮದ್ಯ ಮುಕ್ತ ಮತದಾನ ದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕುರಿತು ದೊಡ್ಡಕೊಪ್ಪ ಒಕ್ಕೂಟದ ಸದಸ್ಶರಿಗೆ ತಿಳುವಳಿಕೆ ನೀಡಿ ಕರಪತ್ರ ಹಂಚಲಾಯಿತು. ವಿಧಾನ ಸಭಾ ಚುನಾವಣಾ ವೇಳೆ ಮದ್ಯಪಾನದ ಆಮಿಷಕ್ಕೆ ಒಳಗಾಗಿ ಮತದಾನವನ್ನು ಮಾಡುವುದು ಹಾಗೂ ಮದ್ಯ ಪಾನದ ಆಸೆಯನ್ನು ತೋರಿಸಿ ಮತಕೇಳುವುದು ಇವೆರಡೂ ಸಮಾಜ ಘಾತುಕ ಚಟುವಟಿಕೆಗಳೇ ಆಗಿದ್ದು, ಇಂತಹ
ಕೊಂಬಾರಿನ ಕೆಂಜಾಳ ಬಗ್ಪುಣಿ ಭಾಗದ ಹೊಳೆಯ ನೀರಿನಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದ ಕಾಡಾನೆ ಗುರುವಾರ ತಡರಾತ್ರಿ ಮೃತಪಟ್ಟಿದೆ.ನಿಶ್ಶಕ್ತಿಯಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಹೊಳೆಯಲ್ಲಿಯೇ ನಿಂತಿದ್ದ ಆನೆಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಕಡಬದ ಪಶು ವೈದ್ಯಾಧಿಕಾರಿ ಡಾ| ಅಜಿತ್ ಹಾಗೂ ಹುಣಸೂರಿನಿಂದ ಅರಣ್ಯ ಇಲಾಖೆಯ ಪಶು ವೈದ್ಯ ಡಾ| ಮುಜೀಬ್ ಅವರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಆನೆಯನ್ನು ಪರಿಶೀಲಿಸಿದ ಅವರು ಅದಕ್ಕೆ ಸುಮಾರು 50 ವರ್ಷ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿ ಅವರಿಗೆ ಹೂ ನೀಡಿ, ಆಶೀರ್ವಾದ ಪಡೆದರು.ಶುಭವಾಗಲಿ ಎಂದು ಸಿಎಂ ಆಶೀರ್ವದಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಭಾಗೀರಥಿ ಮುರುಳ್ಯ ಅವರು, ಸಾಮಾನ್ಯ ಕಾರ್ಯಕರ್ತೆ ಆಗಿರುವ ನನಗೆ ಚುನಾವಣೆ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಿದೆ. ಪಕ್ಷದ ಹಿರಿಯ ಮಾರ್ಗದರ್ಶನದಲ್ಲಿ ಕೆಲಸ
ಕಡಬ: ಗಾಳಿ ಇರುವ ದಿಕ್ಕಿನಲ್ಲಿಯೇ ಹೊಗೆ ಸಾಗುವುದು ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ್ದ ಗಂಧದ ಕಡ್ಡಿಯ ಹೊಗೆಯು ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಈ ಮೂಲಕ ನೆರೆದಿದ್ದ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಈ ಘಟನೆ ನಡೆಸಿದೆ. ವಿಶೇಷ ಪೂಜೆಯ ಸಂದರ್ಭದಲ್ಲಿ ದೇವರಿಗಾಗಿ ಹಚ್ಚಿದ ಗಂಧದ ಕಡ್ಡಿಯಿಂದ ಹೊರಹೊಮ್ಮಿದ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ
ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿದ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಇಚಿಲಂಪಾಡಿಲ್ಲಿ ಕಳೆದ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ರೆನೀಶ್ (27) ವರ್ಷ ಎಂದು ಗುರುತಿಸಲಾಗಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಈತನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ
ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನೊಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ
ಕಡಬ: ಹೃದಯಾಘಾತದಿಂದ ಕೊಯಂಬತ್ತೂರಿನಲ್ಲಿ ನಿಧನರಾದ ಕಡಬ ತಾಲೂಕಿನ ರೆಂಜಿಲಾಡಿಯ ಯೋಧನಿಗೆ ಸಕಲ ಸರಕಾರಿ ಗೌರವಗಳೊಂದಿಗೆ ಮಂಗಳವಾರ ಅಂತಿಮ ಗೌರವ ಸಲ್ಲಿಸಿ ಅಂತಿಮ ಕಾರ್ಯ ನೆರವೇರಿಸಲಾಯಿತು. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತರಪ್ಪೇಳ್ ನಿವಾಸಿ ಮಾಜಿ ಯೋಧ ಜೋನಿ ಟಿ.ಕೆ. ಅವರ ಪುತ್ರ ಚೆನೈ ರಿಜಿಮೆಂಮಟ್ನ ಕೊಲ್ಕತ್ತಾ ಘಟಕದಲ್ಲಿ ಯೋಧರಾಗಿದ್ದ ಲಿಜೇಶ್ ಕುರಿಯನ್ (30) ಮಾ.26 ರಂದು ಚೆನೈನ ಕೊಯಂಬತ್ತೂರುನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ತಂದೆ, ತಾಯಿ,