ಕಡಬದ ನೂತನ ತಾಲೂಕು ಪಂಚಾಯತ್ ಕಟ್ಟಡ, ಮಿನಿ ವಿಧಾನ ಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ಉದ್ಘಾಟನೆ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಗಳು ಮಾ.24ರಂದು ನಡೆಯಲಿದ್ದು ಈ ಬಗ್ಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿಯಾಗಿ ಸಚಿವ ಎಸ್.ಅಂಗಾರ ಅವರು
ಕಡಬ : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಬೀಳುವಾಗ
ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಒಣಹುಲ್ಲುಗಳಿಂದ ಆವೃತ್ತವಾದ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸುಮಾರು 15 ಎಕರೆಯಷ್ಟು ಆವರಿಸಿದ್ದು, ಇದರಿಂದ ಸೃಷ್ಠಿಯಾದ ದಟ್ಟ ಹಿಗೆ ಮುಗಿಲೆತ್ತರಕ್ಕೆ ಚಾಚಿದ್ದು ಭಯಾನಕವಾಗಿತ್ತು. ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ
ಕಡಬ ತಾಲೂಕಿನ ಕೊಹಿಲದಲ್ಲಿರುವ ಪಶುಸಂಗೋಪನಾ ಕ್ಷೇತ್ರ, ಕೊಹಿಲ ಫಾರ್ಮ್ನ ಹುಲ್ಲುಗಾವಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಒಣ ಮುಳಿಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಬುಧವಾರ ನಡೆದಿದೆ.ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮ್ನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ತಹಬಂದಿಗೆ ಬಾರದೆ ಫಾರ್ಮ್ನ ದ್ವಾರದ ತನಕ ಧಾವಿಸಿ ಅಪಾರ ಪ್ರಮಾಣದ ಒಣ ಹುಲ್ಲನ್ನು ಆಹುತಿ
ಆನೆ ದಾಳಿಯಂದ ಮತಪಟ್ಟ ರೆಂಜಲಾಡಿ ಗ್ರಾಮದ ನೈಲ ರಂಜಿತಾ ಹಾಗೂ ರಮೇಶ್ ರೈ ಅವರ ಮನೆಗೆ ಬಂದರು ಮೀನುಗರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಸಚಿವರ ಆಗಮನವಾಗುತ್ತಿದ್ದಂತೆ ಮನೆಯವರು ತೀವ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿ ಕಳೆದ ಕೆಲವು ತಿಂಗಳಿಂದ ಆನೆಗಳ ಹಾವಳಿಯ ಬಗ್ಗೆ ಎಲ್ಲರಿಗೂ ಗೊತ್ತಿತ್ತು. ಆದರೆ ಯಾರೂ ಸರಿಯಾದ ಕ್ರಮ ಕೈಗೊಂಡಿಲ್ಲ. ನೀವು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುತ್ತಿದ್ದರೆ ನನ್ನ ಮಗಳ ಪ್ರಾಣ
ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ. ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ
ಮಂಗಳೂರು.ಫೆ.20. ಭಾರತ ಕಮ್ಯೂನಿಸ್ಟ್ ಪಕ್ಷದ ಕಡಬ ತಾಲೂಕಿನ ಉಪ ಕಾರ್ಯದರ್ಶಿ, ಪುತ್ತೂರು ತಾಲೂಕು ಬೀಡಿ ಲೇಬರ್ ಯೂನಿಯನ್(ಎಐಟಿಯುಸಿ) ನ ಜತೆ ಕಾರ್ಯದರ್ಶಿ ಸುಮಾರು 55 ವರ್ಷ ಪ್ರಾಯದ ರಮೇಶ್ ರೈ ಅವರು ಇಂದು ಮುಂಜಾನೆ ಆನೆ ದಾಳಿಯಿಂದ ಸ್ಥಳೀಯ ಯುವತಿ ರಂಜಿತಳನ್ನು ರಕ್ಷಿಸುವ ಸಲುವಾಗಿ ತಾವೇ ಸ್ವತಃ ಆನೆ ದಾಳಿಗೆ ತುತ್ತಾಗಿ ಗಂಭೀರ ಸ್ವರೂಪದ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ರಮೇಶ್ ರೈ ಹಾಗೂ 21 ವರ್ಷ ಪ್ರಾಯದ ಕುಮಾರಿ ರಂಜಿತ ಇವರುಗಳ ಅಕಾಲಿಕ ಮರಣಕ್ಕೆ ಸಿಪಿಐ
ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿಯಾದ ಘಟನೆ ಕಡಬ ಸಮೀಪದ ಮೀನಾಡಿ ಎಂಬಲ್ಲಿ ಇಂದು ನಡೆದಿದೆ. ಹಾಲಿನ ಡೈರಿಗೆ ಕೆಲಸಕ್ಕೆ ಹೋಗುತ್ತಿದ್ದ ಸಿಬ್ಬಂದಿ ರಂಜಿತಾ ಹಾಗೂ ರಮೇಶ್ ರೈ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳದಲ್ಲಿ ಆಕ್ರೋಶಿತ ಸಾರ್ವಜನಿಕರು ಗಲಾಟೆ ಮಾಡಿದ್ದು ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವಾರದ ಹಿಂದೆ ಮರ್ದಾಳದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಕಾಡಾನೆ ದಾಳಿ ಬಗ್ಗೆ ವಿಡಿಯೋ
ಕಡಬ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಹಲವು ವರ್ಷಗಳ ಬೇಡಿಕೆಯಾಗಿರುವ ಸರಕಾರಿ ಪದವಿ ಕಾಲೇಜು ಆರಂಭಿಸದೇ ಹೋದರೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಗಳ ಸಹಕಾರದೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಪದವಿ ಕಾಲೇಜು ಹೋರಾಟ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ರೈ ಕರ್ಮಾಯಿ ಅವರು ಎಚ್ಚರಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಡಬ ಪರಿಸರದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಲಭಿಸಬೇಕೆಂಬ
ಕಡಬ: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 14 ರಿಂದ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ರತ್ನಾಜೀ ಅವರು ತಿಳಿಸಿದರು. ಅವರು ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಫೆ. 14 ರಂದು ಸಂಜೆ 4 ಗಂಟೆಗೆ ಜರಗಲಿರುವ ಸಭಾ