Home Posts tagged #kadaba (Page 8)

ಕಡಬದಲ್ಲಿ `ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ

ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ.

ಕಾರ್ಮಿಕ ಮುಂದಾಳು ರಮೇಶ್ ರೈ ಮತ್ತು ಮೃತ ಯುವತಿ ರಂಜಿತ ರವರ ನಿಧನಕ್ಕೆ ಸಿಪಿಐ ತೀವ್ರ ಆಘಾತ

ಮಂಗಳೂರು.ಫೆ.20. ಭಾರತ ಕಮ್ಯೂನಿಸ್ಟ್ ಪಕ್ಷದ ಕಡಬ ತಾಲೂಕಿನ ಉಪ ಕಾರ್ಯದರ್ಶಿ, ಪುತ್ತೂರು ತಾಲೂಕು ಬೀಡಿ ಲೇಬರ್ ಯೂನಿಯನ್‌(ಎಐಟಿಯುಸಿ) ನ ಜತೆ ಕಾರ್ಯದರ್ಶಿ ಸುಮಾರು 55 ವರ್ಷ ಪ್ರಾಯದ ರಮೇಶ್ ರೈ ಅವರು ಇಂದು ಮುಂಜಾನೆ ಆನೆ ದಾಳಿಯಿಂದ ಸ್ಥಳೀಯ ಯುವತಿ ರಂಜಿತಳನ್ನು ರಕ್ಷಿಸುವ ಸಲುವಾಗಿ ತಾವೇ ಸ್ವತಃ ಆನೆ ದಾಳಿಗೆ ತುತ್ತಾಗಿ ಗಂಭೀರ ಸ್ವರೂಪದ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ರಮೇಶ್ ರೈ ಹಾಗೂ 21 ವರ್ಷ ಪ್ರಾಯದ ಕುಮಾರಿ ರಂಜಿತ ಇವರುಗಳ ಅಕಾಲಿಕ ಮರಣಕ್ಕೆ ಸಿಪಿಐ

ಕಡಬ : ಕಾಡಾನೆ ದಾಳಿ ಇಬ್ಬರು ಬಲಿ

ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಯುವತಿ ಸಹಿತ ಇಬ್ಬರು ಬಲಿಯಾದ ಘಟನೆ ಕಡಬ ಸಮೀಪದ ಮೀನಾಡಿ ಎಂಬಲ್ಲಿ ಇಂದು ನಡೆದಿದೆ. ಹಾಲಿನ ಡೈರಿಗೆ ಕೆಲಸಕ್ಕೆ ಹೋಗುತ್ತಿದ್ದ ಸಿಬ್ಬಂದಿ ರಂಜಿತಾ ಹಾಗೂ ರಮೇಶ್ ರೈ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸ್ಥಳದಲ್ಲಿ ಆಕ್ರೋಶಿತ ಸಾರ್ವಜನಿಕರು ಗಲಾಟೆ ಮಾಡಿದ್ದು ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವಾರದ ಹಿಂದೆ ಮರ್ದಾಳದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಕಾಡಾನೆ ದಾಳಿ ಬಗ್ಗೆ ವಿಡಿಯೋ

ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

ಕಡಬ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಹಲವು ವರ್ಷಗಳ ಬೇಡಿಕೆಯಾಗಿರುವ ಸರಕಾರಿ ಪದವಿ ಕಾಲೇಜು ಆರಂಭಿಸದೇ ಹೋದರೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಗಳ ಸಹಕಾರದೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಪದವಿ ಕಾಲೇಜು ಹೋರಾಟ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ರೈ ಕರ್ಮಾಯಿ ಅವರು ಎಚ್ಚರಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಡಬ ಪರಿಸರದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಲಭಿಸಬೇಕೆಂಬ

ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ – ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ

ಕಡಬ: ಮಹಾ ಶಿವರಾತ್ರಿಯ ಪ್ರಯುಕ್ತ ಫೆ. 14 ರಿಂದ 19 ರ ವರೆಗೆ ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಕಡಬ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಾಕುಮಾರಿ ರತ್ನಾಜೀ ಅವರು ತಿಳಿಸಿದರು. ಅವರು ಕಡಬದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಫೆ. 14 ರಂದು ಸಂಜೆ 4 ಗಂಟೆಗೆ ಜರಗಲಿರುವ ಸಭಾ

ಕಡಬ : ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಎಂಬ ಗುಮಾನಿ, ಅಗ್ನಿಶಾಮಕ ದಳಕ್ಕೆ ಮಾಹಿತಿ

ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ

ಕಡಬ ತಹಸೀಲ್ದಾರ್ ಮೇಲೆ ಭೂಹಗರಣ ಆರೋಪ

ಭೂಹಗರಣ ಆರೋಪ ಹೊತ್ತಿರುವ ಕಡಬ ತಹಸೀಲ್ದಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸದಿದ್ದರೆ ಪ್ರತಿಭನೆ : ನೀತಿ ತಂಡ ಎಚ್ಚರಿಕೆಭೂಹಗರಣಕ್ಕೆ ಸಂಬoಧಪಟ್ಟoತೆ ಮೈಸೂರಿನಲ್ಲಿ ಪ್ರಕರಣ ದಾಖಲಾಗಿ ಆರೋಪ ಎದುರುಸುತ್ತಿರುವ ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಹದಿನೈದು ದಿಗಳ ಒಳಗೆ ಹುದ್ದೆಯಿಂದ ತೆರವುಗೊಳಿಸದಿದ್ದೆ ಉಗ್ರ ಪ್ರತಿಭಟನೆ ಎದುರಿಸಬೆಕಾದೀತು ಎಂದು ನೀತಿ ತಂಡ ರಾಜ್ಯಾಧ್ಯಕ್ಷ ಜಯಂತ್ ಟಿ.ಕೆ ಎಚ್ಚರಿಸಿದರು.ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ

ಭಗವಂತಕೊಟ್ಟ ಶಕ್ತಿಯನ್ನು ಸಮಾಜಕ್ಕೆ, ಈ ದೇಶಕ್ಕೋಸ್ಕರ ವಿನಿಯೋಗಿಸಬೇಕು: ಸಚಿವ ಬಿ.ಸಿ ನಾಗೇಶ್ ಹೇಳಿಕೆ

ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳನು ನೀಡುವುದರೊಂದಿಗೆ ಆಮೂಲಾಗ್ರ ಬದಲವಾಣೆ ತಂದು ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯವನ್ನು ಬದಲಾಯಿಸಿ ದೇಶವನ್ನು ದೇಶದ ಗತವೈಭವವನ್ನು ಮರು ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೆಶ್ ಹೇಳಿದರು. ಅವರು ಕಡಬ ಸರಕಾರಿ ಪ್ರೌಢ ಶಾಲೆಯಲ್ಲಿ ಸಚಿವರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಐದು ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮವನ್ನು

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್. ಅಂಗಾರರಿಂದ ಶಂಕುಸ್ಥಾಪನೆ

ಕಡಬ : ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ನೂತನ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.20 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ ಭಗವಾನ್ ಸೋಣವಾಣೆ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್, ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಎಸೈ ಮಂಜುನಾಥ್,

ಜನವರಿ 15 ರಂದು ವಿವೇಕ ರಥ ಕಡಬಕ್ಕೆ : ಅದ್ದೂರಿ ಸ್ವಾಗತಕ್ಕೆ ನಿರ್ಧಾರ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಡಬ ತಾಲೂಕು ಪಂ. ಜಿಲ್ಲಾ ಯುವ ಜನ ಒಕ್ಕೂಟ, ಕಡಬ ತಾಲೂಕು ಯುವ ಜನ ಒಕ್ಕೂಟ, ಕಡಬ ತಾಲೂಕು ಯುವಕ-ಯುವತಿ ಮಂಡಲಗಳು, ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟಿಯ ಸೇವಾ ಯೋಜನೆ ಇವುಗಳ ಸಂಯುಕ್ತ ಆಶ್ರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಕಾರ್ಯಕ್ರಮವನ್ನು ಜನವರಿ ೧೫ ರಂದು ಕಡಬದಲ್ಲಿ ವಿಶಿಷ್ಠವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ