ಗುರುಪುರ ಕೈಕಂಬದಲ್ಲಿ ನಡೆದ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶದ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೇರಳ ರಾಜ್ಯದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು
ಗುರುಪುರ ಕೈಕಂಬ; ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲಾಗುತ್ತಿರುವ ನಿರಂತರ ದೌರ್ಜನ್ಯದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಎಂ. ಇಸ್ಹಾಕ್ ಕೌಸರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ನಿಮಗಿಂತಲೂ ಪ್ರವಾದಿಯನ್ನು ನಿಂದಿಸಿದ ಜನರು ಕಳೆದುಹೋಗಿದ್ದಾರೆ. ಅವರಲ್ಲಿ ಬಹಳಷ್ಟು ಜನರು ಪ್ರವಾದಿಯವರನ್ನು ಅರಿತಾಗ ಇಸ್ಲಾಂ ಸ್ವೀಕರಿಸಿದ ಚರಿತ್ರೆಯಿದೆ. ಪ್ರವಾದಿಯನ್ನು
ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ ಮಂಗಳೂರು ಹೊರವಲಯದಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬುವವರ ಮನೆಯ ಹಿಂಭಾಗವಿದ್ದ ಭಾರೀ ಗಾತ್ರದ ಗುಡ್ಡ ಮನೆಯ ಮೇಲೆ ಕುಸಿದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದೆ.ಘಟನೆಯಿಂದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು
ಕರ್ನಾಟಕ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 4 ನೇ ಬ್ಲಾಕಿನ ಕೈಕಂಬವನ್ನು ಸಂಪರ್ಕಿಸುವ ರಸ್ತೆಯನ್ನು 20 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರೀಟಿಕರಣ ಮಾಡುವ ಯೋಜನೆಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದರು. ಈ ಭಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ ಸ್ಥಳೀಯರು ಶಾಸಕರಿಗೆ ಮನವಿ ಅರ್ಪಿಸಿದರು.ಕಾರ್ಯಕ್ರಮದಲ್ಲಿ ಭಾಜಪಾ ಉತ್ತರ ಮಂಡಲ ಅಧ್ಯಕ್ಷರಾದ