ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು
ಹಂಸಲೇಖ ಅವರು ಪೇಜಾವರ ಶ್ರೀಗಳ ಬೆಂಗಳೂರಿನಲ್ಲಿರುವ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚನೆ ಮಾಡಲಿ ಎಂದು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಆಗ್ರಹಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಬಂದಾಗ ಎಲ್ಲರೂ ಜಾತಿ ಮತ ಬೇಧವಿಲ್ಲದೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಅವರು ಇಲ್ಲಸಲ್ಲದ ಹೇಳಿಕೆ ಸಮಾಜದ ಭಾವನೆಗಳ ಮೇಲೆ