Home Posts tagged #kambala

ಮೂಡುಬಿದಿರೆ: ಕಂಬಳ ಸಮಾಲೋಚನಾ ಸಭೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡುಬಿದಿರೆಯ ಕಡಲಕೆರೆ ಬಳಿಯಿರುವ ಸೃಷ್ಠಿ ಗಾರ್ಡನ್‍ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆಯಿತು. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರುಗಳಿಗೆ, ವ್ಯವಸ್ಥಾಪಕರಿಗೆ ಹಾಗೂ

ದ.ಕ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ

ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್‍ನ ಸಭಾಭವನದಲ್ಲಿ ನಿರ್ಗಮಿತ ಅಧ್ಯಕ್ಷ ಏರ್ಮಾಳ್ ರೋಹಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ

ಮೂಡುಬಿದಿರೆ: ಕುದಿ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: 2023-24ನೇ ಸಾಲಿನ ಕಂಬಳ ಸೀಸನ್ ನ ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕುದಿ ಕಂಬಳ ಆರಂಭಗೊಂಡಿತು. ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು. ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಕಂಬಳದ ಕೋಣಗಳ ಯಜಮಾನರುಗಳಾದ

ಕಂಬಳಕ್ಕೆ ಸುಪ್ರಿಂಕೋರ್ಟ್ ಮಾನ್ಯತೆ – ಮೇ 18 ಕಂಬಳಕ್ಕೆ ಐತಿಹಾಸಿಕ ದಿನ

ಮೂಡುಬಿದಿರೆ: ಕರಾವಳಿಯ ಜಾನಪದ ಕ್ರೀಡೆ ಕಂಬಳ. ರಾಜ್ಯದಲ್ಲಿ ಪ್ರಾಣಿ ಹಿಂಸಾ ತಡೆ ಕಾಯ್ದೆಗೆ ತಿದ್ದುಪಡಿ ತಂದು ಕರಾವಳಿ ಕರ್ನಾಟಕದಲ್ಲಿ ನಡೆಯುವ ಕಂಬಳಕ್ಕೆ ಮಾನ್ಯತೆ ನೀಡಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ದಯಾ ಸಂಘಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ಕಂಬಳ ಸಮಿತಿ ಸಂತಸ ವ್ಯಕ್ತಪಡಿಸಿದ್ದು, ಈ ದಿನ ಕಂಬಳ ಕ್ಷೇತ್ರದಲ್ಲಿ ಐತಿಹಾಸಿಕ ದಿನ ಎಂದು ಕಂಬಳ ಸಮಿತಿ ಬಣ್ಣಿಸಿದೆ. ಈ ಬಗ್ಗೆ ಜಿಲ್ಲಾ ಕಂಬಳ ಸಮಿತಿಯ

ಪಣಪಿಲ ಜಯ -ವಿಜಯ ಜೋಡುಕರೆ ಕಂಬಳ ಸಂಪನ್ನ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯದ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಭಾನುವಾರ ಸಂಜೆ ಸಂಪನ್ನಗೊಂಡಿತು. ಫಲಿತಾಂಶ : ಹಗ್ಗ ಕಿರಿಯ ವಿಭಾಗದಲ್ಲಿ 20ಜತೆ ಕೋಣಗಳು ಭಾಗವಹಿಸಿದ್ದು ಕಲ್ಯಾ ಹಾಳೆಕಟ್ಟೆ ನಿತೀಶ್ ಭವಿಷ್ಯ ದೇವಾಡಿಗ ಅವರ ಕೋಣಗಳು ಪ್ರಥಮ ( ಓಡಿಸಿದವರು: ಕಾವೂರು ದೋಟ ಸುದರ್ಶನ್), ಕೆಲ್ಲಪುತ್ತಿಗೆ ಪ್ರವೀಣ್ ಕುಮಾರ್ ದ್ವಿತೀಯ ( ಕೋಣ ಓಡಿಸಿದವರು:

13ನೇ ವರ್ಷದ ಪಣಪಿಲದಲ್ಲಿ ಜಯ-ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ ಹದಿಮೂರನೇ ವರುಷದ ಕಿರಿಯ ವಿಭಾಗದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ನಡೆಯಿತು. 2022-23 ನೇ ಸಾಲಿನ ಕೊನೆಯ ಕಂಬಳ ಇದಾಗಿದ್ದು, ಊರಿನ ದೈವಸ್ಥಾನ, ದೇವಸ್ಥಾನಗಳ ಪ್ರಸಾದ ಮತ್ತು ತೀರ್ಥವನ್ನು ಕರೆಗೆ ಹಾಕುವ ಮೂಲಕ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪಣಪಿಲ ಕಂಬಳ ಸಮಿತಿಯ ಗೌರವಾಧ್ಯಕ್ಷ ಶಾಸಕ ಉಮಾನಾಥ

ಏ.8ರಂದು ಪಣಪಿಲದಲ್ಲಿ ಜಯ ವಿಜಯ ಜೋಡುಕರೆ ಕಂಬಳ

ಮೂಡುಬಿದಿರೆ: “ಜಯ-ವಿಜಯ” ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ಹದಿಮೂರನೇ ವರುಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಏಪ್ರಿಲ್ 8ರಂದು ಸಂಜೆ ನಡೆಯಲಿದೆ ಎಂದು ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಅಶ್ವತ್ಥ್ ಪಣಪಿಲ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 4 ಎಕರೆ ಜಾಗದಲ್ಲಿ ಕಂಬಳ ನಡೆಯಲಿದ್ದು, ನೂತನವಾಗಿ 133.5 ಮೀ ಉದ್ದದ ಕರೆ ನಿರ್ಮಾಣಗೊಂಡಿದೆ. ಕೋಣಗಳನ್ನು ಕಟ್ಟಲು ತಂಪಾದ ಜಾಗ, ಉತ್ತಮ ನೀರಿನ ವ್ಯವಸ್ಥೆ,

ಮಾ.25ರಂದು ಮೋರ್ಲ ಬೋಳದಲ್ಲಿ ಪ್ರಥಮ ವರ್ಷದ ನರಿಂಗಾನ ಕಂಬಳ

ಉಳ್ಳಾಲ: ಇಲ್ಲಿನ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಸರಕಾರಿ ಕಂಬಳ ಆಯೋಜನೆ ಮಾಡಲಾಗಿದ್ದು ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ಲವಕುಶ ಜೋಡುಕರೆ ಹೆಸರಿನಲ್ಲಿ ನರಿಂಗಾನ ಕಂಬಳ ಮಾ. 25ರಂದು ಹೊನಲು ಬೆಳಕಿನಲ್ಲಿ ನಡೆಯಲಿದ್ದು ಬೆಳಗ್ಗೆ 10.30ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ತುಳುನಾಡಿನ ಧಾರ್ಮಿಕ ವಿಧಿಗಳೊಂದಿಗೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.ಕಂಬಳ ಕರೆಯ ಬಳಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮಾ. 25ರಂದು

ಮಾ.4 ರಂದು ಮೂಡೂರು ಪಡೂರು ಕಂಬಳ

ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು. ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಧರ್ಮಸ್ಥಳದ

ಇಂದು ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳ

ಕಿನ್ನಿಗೋಳಿ: ಕಂಬಳವು ಕರಾವಳಿ ಭಾಗದ ಒಂದು ಅಚ್ಚುಮೆಚ್ಚಿನ ಜಾನಪದ ಕ್ರೀಡೆಯಾಗಿದ್ದು ಇದು ಜನರ ಜೀವನದ ಅಂಗವಾಗಿದೆ. ನಮ್ಮ ತುಳುನಾಡಿನ ಕೃಷಿ ಮತ್ತು ಸಾಂಸ್ಕೃತಿಕ ಬದುಕಿನ ಅವಿಭಾಜ್ಯ ಭಾಗವಾಗಿದ್ದು ಕಂಬಳದಿಂದ ನಮ್ಮ ಸಂಸ್ಕೃತಿ ಉಳಿಯುವುದರ ಜತೆಗೆ ಪ್ರಾಣಿ ಪ್ರೀತಿಯೂ ಹೆಚ್ಚಾಗುತ್ತದೆ. ಎಂದು ಆಧ್ಯಾತ್ಮ ಗುರು, ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಶ್ರೀಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಹೇಳಿದರು. ಅವರು ಕಿನ್ನಿಗೋಳಿ ಸಮೀಪದ ಐಕಳದಲ್ಲಿ ನಡೆಯುವ