ಕನ್ನಡ ಭಾಷೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಈ ಕುರಿತು ಎಲ್ಲರೂ ಪಾಲ್ಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಕನ್ನಡ ಜ್ಯೋತಿ ರಥ ನಾಡಿನಾದ್ಯಂತ ಸಂಚರಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹೇಳಿದರು. ಬಿ.ಸಿ.ರೋಡಿನ ಮೇಲ್ಸೇತುವೆ ಬಳಿ ಕನ್ನಡ ಜ್ಯೋತಿ
ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮದಲ್ಲಿ ಉಪನ್ಯಾಸ ನೀಡಿ ಸಂಧ್ಯಾರಶ್ಮಿ ಸಭಾಭವನದಲ್ಲಿ ಮಾತನಾಡಿದರು. ಕನ್ನಡ ಭಾಷೆ ರಾಜಾಶ್ರಯ ಇಲ್ಲದೇ
ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ಪತಾಕೆಯನ್ನು ಹಾರಿಸಿ, ಕನ್ನಡದ ವೈಭವವನ್ನು ಸಾರುವ ಸಂದೇಶವನ್ನು ನೀಡುವುದರ ಮೂಲಕ ಹಾಗೂ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಅವರು ವಹಿಸಿ ಕನ್ನಡಿಗರು ನಾಡು ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು, ಈ ಕೆಲಸ ವಿದ್ಯಾರ್ಥಿಗಳಿಂದಲೇ
ನವ ಮಂಗಳೂರು ಬಂದರು ಪ್ರಾಧಿಕಾರವು, ನಮಬ ಕನ್ನಡ ಸಂಘದ ಜೊತೆಗೂಡಿ 66 ನೇ ಕರ್ನಾಟಕ ಸಂಸ್ಥಾಪನಾ ದಿನ ಹಾಗು ಕರ್ನಾಟಕ ರಾಜ್ಯೋತ್ಸವವನ್ನು ಇಂದು ಆಚರಿಸಲಾಯಿತು ಬಂದರು ಪ್ರಾಧಿಕಾರದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಹಾಗು ಕೆನರಾ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ರಘು ಇಡ್ಕಿಧು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು.ಉಪಾಧ್ಯಕ್ಷರು, ಮುಖ್ಯ ವಿಜಿಲೆನ್ಸ್ ಅಧಿಕಾರಿ ಮತ್ತು ಅಧ್ಯಕ್ಷರು, ಕಾರ್ಯದರ್ಶಿ ಕನ್ನಡ ಸಂಘದ ಗೌರವ
ಮಲ್ಪೆ : 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಆಶಯದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಗ್ರಾಮಪಂಚಾಯತ್ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಮಾತನಾಡು ಕನ್ನಡ ಕಾರ್ಯಕ್ರಮದಲ್ಲಿ ಸಾಮೂಹಿಕ ಗೀತ ಗಾಯನ ನಡೆಯಿತು. ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿರುವ ಐದು ದಿನಗಳ ಕಾರ್ಯಕ್ರಮವನ್ನು ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಗೀತಾ
ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,