ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ ಪೂಜಾರಿ(68), ಈ ಭಾಗದ ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದು, ಕುಟುಂಬದ ದೈವದ ಆರಾಧಕರಾಗಿ ಸೇವೆ ನಡೆಸುತ್ತಿದ್ದ ಇವರು ಪಿಗ್ಮಿ ಸಂಗ್ರಹ ವೃತ್ತಿ ನಡೆಸಿ ಗೌರವಯುತವಾಗಿ ಜೀವನ
ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ ಬಿದ್ದಿವೆ. ಟೆಂಪೋ ಕೂಡ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು,
ಕಾಪು ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್‌ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಇಷ್ಟಿದ್ದರೂ ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು
ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡ್ ಸಂಪಿಗೆ ನಗರ ಪ್ರದೇಶದಲ್ಲಿ ಭರ್ಜರಿ ಮಾತಾಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು,ಬಿಲ್ಲವ ಸಮಾಜದ ಏಳಿಗೆಗಾಗಿ ಬಿಜೆಪಿ ಸರ್ಕಾರವು ಹಲವಾರು ಅನುದಾನಗಳನ್ನು ನೀಡಿದೆ, ಮೀನುಗಾರರಿಗೆ ಹಾಗೂ ಮೀನುಗಾರಿಕ