ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ
ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆಯಾಗಿದೆ. ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರು ಹಾವನ್ನು ರಕ್ಷಿಸಿ ಮತ್ತೆ ಅದರ ವಾಸಸ್ಥಾನವಾದ ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಎಂದು ಕರೆಯಲಾಗುವ ಈ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ
ದಕ್ಷಿಣ ಕನ್ನಡ ಜಿಲ್ಲೆಗೆ ಗೃಹ ಲಕ್ಷ್ಮಿ ಯೋಜನೆಗಾಗಿ 60ಕೋಟಿ ರೂಪಾಯಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ಕುಟುಂಬವನ್ನು ಸದೃಢವಾಗಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಸಮುದಾಯ ಭವನದ ಶಿಲಾನ್ಯಾಸವನ್ನು ನಡೆಸಿ ಮಾತನಾಡಿದರು. ಕ್ರೈಸ್ತ ಅಕಾಡೆಮಿಯ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಚರ್ಚ್ ಬಳಿಯ ಇಂಟರ್ ಲಾಕ್ ಅಳವಡಿಕೆಗೆ ಹಾಗೂ ಸಮುದಾಯ ಭವನಕ್ಕೆ
ಕರ್ನಾಟಕ ರಾಜ್ಯ ಮತ್ತು ದ.ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್‍ನ ಸಹಯೋಗದಲ್ಲಿ ದಿವಂಗತ ಲೋಕನಾಥ್ ಬೋಳಾರ್ ಸ್ಮರಣಾರ್ಥ ಸೆಪ್ಟಂಬರ್ 27ರಿಂದ 30ರ ವರೆಗೆ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನಲ್ಲಿ ಜರಗಿತು. ಮುಂಬೈಯ ಮೊಗವೀರ ವ್ಯವಸ್ಥಾಪಕ ಮಂಡಳಿ, ದಕ್ಷಿಣ ಕನ್ನಡ ಮತ್ತು ಉಡುಪಿ ಶಾಖೆ, ಮಂಗಳೂರು ಬಂದರ್ ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೇತೃತ್ವದಲ್ಲಿ
ತುಳುಕೂಟ ಬಂಟ್ವಾಳವು ಮಂಜು ವಿಟ್ಲ ಅವರ ಬಂಧು ಬಳಗ, ಅಭಿಮಾನಿ ಬಳಗ ಹಾಗೂ ಸಮಾನ ಮನಸ್ಕರ ಪಾಲ್ಗೊಳ್ಳುವಿಕೆಯೊಂದಿಗೆ ಸೆಪ್ಟಂಬರ್ 16ರಂದು ಸಂಜೆ 4.30ಕ್ಕೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಹಿರಿಯ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರಿಗೆ ನುಡಿನಮನ-ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಿದೆ. ಮಂಜು ವಿಟ್ಲ ಅವರು ಹಿರಿಯ ರಂಗಕರ್ಮಿಯಾಗಿ, ಬಹುಮುಖಿ ಕ್ಷೇತ್ರಗಳ ಸಾಧಕರಾಗಿ, ಹಿರಿಯ ತರಬೇತುದಾರರಾಗಿ, ವಿವಿಧ ಸಂಘಟನೆಗಳ ಮಾರ್ಗದರ್ಶಕರಾಗಿ, ಎಲ್ಲದಕ್ಕಿಂತಲೂ
ಬಿಎನ್‍ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ-2023ನ್ನು ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಡಾ. ಟಿ.ಎಂ.ಎ.ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್‍ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‍ಐ ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಗಣೇಶ್ ಎನ್. ಶರ್ಮ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಬಿಎನ್‍ಐ ಮಂಗಳೂರು
ಡ್ರೀಮ್ ಕ್ಯಾಚರ್ಸ್ ಈವೆಂಟ್ಸ್ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್ ಸಹಯೋಗದೊಂದಿಗೆ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ನಡೆಯಲಿದ್ದು, ಅದಕ್ಕಾಗಿ ಮೊದಲ ಹಂತದ ಆಡಿಷನ್ ಪ್ರಕ್ರಿಯೆಯು ನಗರದ ಫಿಜಾ ಬೈ ನೆಕ್ಸಸ್ ಮಾಲ್ ನಡೆಯಿತು. 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ಪರ್ಧಿಸುವ ಅವಕಾಶವನ್ನು ಕಲ್ಪಿಸಿದ್ದರು. ಗ್ರೂಪ್ ಮತ್ತು ವೈಯಕ್ತಿಕವಾಗಿ ಮತ್ತು ವಿವಿಧ ತಂಡಗಳಾಗಿ ಭಾಗವಹಿಸಲು ಅವಕಾಶವಿತ್ತು. ಕರ್ನಾಟಕದ 60ಕ್ಕಿಂತಲೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿ,
ಬ್ರಹ್ಮಾವರದಲ್ಲಿರುವ ದ.ಕ. ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು ಸೋಮವಾರ ನಡೆಯಬೇಕಾದ ಮಹಾಸಭೆಯಲ್ಲಿ ಗೊಂದಲ ಉಂಟಾಗಿ ಸಭೆ ಮುಂದೂಡಲ್ಪಟ್ಟಿದೆ. ಬ್ರಹ್ಮಾವರದ ಹೋಟೇಲ್ ಸಭಾಂಗಣದಲ್ಲಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆಯು ನಿಗದಿಯಾಗಿತ್ತು. ಇದೇ ಸಮಯದಲ್ಲಿ ಸಭಾ ಭವನದ ಇನ್ನೊಂದು ಭಾಗದಲ್ಲಿ ರೈತ ಸಂಘದ ಅಧ್ಯಕ್ಷ ಪ್ರತಾಪ್‍ಚಂದ್ರ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆಯ ಅವ್ಯವಹಾರದ
ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್‍ನ ಸಭಾಭವನದಲ್ಲಿ ನಿರ್ಗಮಿತ ಅಧ್ಯಕ್ಷ ಏರ್ಮಾಳ್ ರೋಹಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ
ಸಣ್ಣ ನೀರಾವರಿ ಸಚಿವ ಭೋಸರಾಜು ಅವರು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ಮುಖಂಡ ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸುವುದಾಗಿ ಎನ್.ಎಸ್. ಬೋಸರಾಜು ತಿಳಿಸಿದರು.