ಶಿಶಿಲ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಮಿಯ್ಯಾರು ರಕ್ಷಿತಾರಣ್ಯದ ಹೇವಾಜೆಯಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡುತ್ತಿದ್ದಾಗ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಿಶಿಲ ಗ್ರಾಮದ ದೇವಸ ನಿವಾಸಿ ಸೇಸಪ್ಪ ಗೌಡರ ಮಗ ಧರ್ಣಪ್ಪ ಗೌಡ(46) ಎಂಬವರನ್ನು ಬಂಧಿಸಿದ್ದು.
ಉಡುಪಿಯ ಶ್ರೀಕೃಷ್ಣ ಮಠಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದರು. ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು. ಬುಧವಾರ ಬೆಳಿಗ್ಗೆ ಬೆಂಗಳೂರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಬಂದು ತನ್ನ ಕ್ಷೇತ್ರದಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿದ್ದು ನಂತರ ಉಡುಪಿಯ ಕಡಿಯಾಲಿನಲ್ಲಿ ಪ್ರಸಾದ್
ಮಂಗಳೂರಿನ ಮೆರಿಹಿಲ್‍ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ. ಇದೀಗ ಮಕ್ಕಳಿಗಾಗಿ ಆನ್ಲೈನ್
ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆಯಿತು.ಪ್ರತೀ ಗ್ರಾಮದಿಂದ ಸಂಗ್ರಹಿಸಿದ ಹಾಲು, ತೆಂಗಿನಕಾಯಿಗಳನ್ನು ಶ್ರೀ ಬ್ರಹ್ಮ ಬೊಬ್ಬರ್ಯ ದೈವಸ್ಥಾನದಲ್ಲಿರಿಸಿ, ಪ್ರಾರ್ಥನೆ ಸಲ್ಲಿಸಿ ನಂತರ ಭಜನೆಯೊಂದಿಗೆ ಕಡಲ ಕಿನಾರೆಗೆ ಆಗಮಿಸಿ ಗಂಗಾ ಮಾತೆಗೆ ಸಮರ್ಪಣೆ ಮಾಡಲಾಯಿತು. ಮುಂದಿನ ಮೀನುಗಾರಿಕೆಯ ಅವಧಿಯಲ್ಲಿ ಮೀನುಗಾರರಿಗೆ ಒಳಿತಾಗಲಿ ಎಂದು ಕದ್ರಿ ಜೋಗಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥ್ ಜೀ ಮಹರಾಜ್
ಬೈಂದೂರು ತಾಲೂಕು ಕಚೇರಿಯ ಸಮೀಪದಲ್ಲಿರುವ ದರ್ಖಾಸ್ತು ಕಾಲೋನಿ ನಿವಾಸಿ ಚಂದು ಅವರ ಕುಟುಂಬಕ್ಕೆ ದಿಕ್ಕೇ ತೋಚದಂತಹ ಪರಿಸ್ಥಿತಿ ಇದೆ. ಕಿತ್ತು ತಿನ್ನುವ ಬಡತನದ ನಡುವೆ ಆಧಾರಸ್ಥಂಭವಾಗಿದ್ದ ಹಿರಿ ಮಗ ಪ್ರಕಾಶ್ ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡು ಆರು ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ಎರಡು ವರ್ಷಗಳ ಹಿಂದಿನ ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದ ಕಾರಣ ಮನೆಯೂ ನಾಶವಾಗಿದೆ. ಇಂದು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರು ಭೇಟಿ ನೀಡಿ ಚಂದು ಅವರ ಮನೆಯ
ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‍ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೆ ಬ್ಲಾಕ್‍ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೆÇೀನು, ನಗದು 1,800 ರೂ.,
ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿ ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂಬಾತನನ್ನು ಪಾಂಡೇಶ್ವರ ಪೆÇಲೀಸರು ಬಂಧಿಸಿದ್ದಾರೆ.ಪ್ರಕರಣದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜೀದ್ ಸೈಯದ್ ಎಂಬವರನ್ನು ನೌಫಾಲ್ ಮತ್ತು ಪುಚ್ಚ ಎಂಬವರು ಕಿಡ್ನಾಪ್ ಮಾಡಿ 5 ಲಕ್ಷ ರೂ. ಹಾಗೂ ಕಾರು ನೀಡುವಂತೆ ಬೇಡಿಕೆ ಇಟ್ಟಿದ್ದರು. ಅವರು ಕೊಡಲು ನಿರಾಕರಿಸಿದಾಗ ಅವರ
ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ
ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ
ಭಾರತ್ ಮಿಷನ್ ಬಿಷಾಕ್ ಬಿಎಮ್‍ಬಿ ಮಂಗಳೂರು ಘಟಕದ ವೈದ್ಯರುಗಳಾದ ಡಾ. ಹರಿಕೃಷ್ಣ ಭಟ್, ಡಾ. ಸೌಮ್ಯಶ್ರೀ ಕೆ ಎಂ ಮತ್ತು ಡಾ. ಜ್ಯೋತಿ ಭಾರಧ್ವಾಜ್ ರವರು ಆಯೋಜಿಸಿದ ಎಸ್‍ಬಿಇಬಿಎ “ಕೌಮಾರಂ” – ಬಾಲ ರೋಗ ಚಿಕಿತ್ಸೆಯ ಬಗ್ಗೆ ರಾಷ್ಟ್ರೀಯ ಮಟ್ಟದ 50ನೇ ವಿಚಾರ ಸಂಕಿರಣವು ಮಂಗಳೂರು ನಗರದ ಜಿ. ಎಚ್. ಎಸ್ ರೋಡ್‍ನ ಹೋಟೆಲ್ ವರ್ದ ಸಾಫ್ರೋನ್‍ನಲ್ಲಿ ಸಂಪನ್ನಗೊಂಡಿತು. ಭಾರತದ ವಿವಿಧ 14 ರಾಜ್ಯಗಳಿಂದ ಬಂದ ಆಯುರ್ವೇದ