Home Posts tagged #Karavali (Page 17)

ಒಡ್ಡೂರು ಫಾರ್ಮ್‍ನಲ್ಲಿ ತ್ಯಾಜ್ಯದಿಂದ ಸಿಎನ್‍ಜಿ ಉತ್ಪಾದನೆ

ಬಂಟ್ವಾಳ: ನಾವು ಎಲ್ಲೆಂದರಲ್ಲಿ ಎಸೆದ ತ್ಯಾಜ್ಯ ಕೊಳೆತು ದುರ್ವಾಸನೆ ಬೀರಿದರೆ ಪರಿಸರಕ್ಕೂ ಹಾನಿ, ಆರೋಗ್ಯಕ್ಕೂ ತೊಂದರೆ. ಒಣ ಕಸಗಳನ್ನು ಹೇಗಾದರೂ ವಿಲೇವಾರಿ ಮಾಡಬಹುದು ಆದರೆ ನಿತ್ಯ ಸಂಗ್ರಹವಾಗುವ ಹಸಿ ಕಸವನ್ನು ವಿಲೇವಾರಿ ಮಾಡುವುದೇ ಪ್ರತೀ ಆಡಳಿತ ವ್ಯವಸ್ಥೆಯ ಮುಂದಿರುವ ಸವಾಲು. ಈ ಸಮಸ್ಯೆಗೆ ಪರಿಹಾರ ಎನ್ನುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಕ್

ಉಡುಪಿ ವಿಡಿಯೋ ಪ್ರಕರಣ – ಪ್ರಚೋದನಕಾರಿ ಭಾಷಣ ಆರೋಪ ; ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ

ಉಡುಪಿ ವಿಡಿಯೋ ಪ್ರಕರಣ ಸಮಗ್ರ ತನಿಖೆಗೆ ಒತ್ತಾಯಿಸಿ ವಿಹಿಂಪ, ಬಜರಂಗ ದಳದಿಂದ ಪ್ರತಿಭಟನೆ

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಬಳಿಕ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿತ್ತು. ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ, ಸಿಎಫ್‍ಐ

ತೊಕ್ಕೊಟ್ಟಿನಲ್ಲಿ ಸರಣಿ ಕಳವು ಪ್ರಕರಣ

ತೊಕ್ಕೊಟ್ಟು ಒಳಪೇಟೆಯಲ್ಲಿರುವ ಮೂರು ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದಿರುವ ಘಟನೆ ನಡೆದಿದ್ದು, ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಹರಿಶ್ಚಂದ್ರ ಶೆಟ್ಟಿ ಎಂಬವರಿಗೆ ಸೇರಿದ ಲಕ್ಷ್ಮೀ ಕ್ಯಾಂಟೀನ್ , ಹ್ಯಾರೀಸ್ ಎಂಬವರಿಗೆ ಸೇರಿದ ಸಿಲ್ವರ್ ಸ್ಟಾರ್ ಎಂಟರ್‍ಪ್ರೈಸ್ ಸ್ಟೀಲ್ ಸಾಮಗ್ರಿಗಳ ಮಾರಾಟ ಮಳಿಗೆ ಹಾಗೂ ಮೋಹನ್ ಎಂಬವರಿಗೆ ಸೇರಿದ ಎಸ್ ಎಸ್ ಕಮ್ಯುನಿಕೇಷನ್ಸ್ ಮೊಬೈಲ್

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣ

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರಂದು ಶಿಲಾನ್ಯಾಸ ನೆರವೇರಲಿದೆ.\ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32

ಕಾರ್ಕಳದ ಕೆನರಾ ಬ್ಯಾಂಕ್‍ನಲ್ಲಿ ಅಗ್ನಿ ಅನಾಹುತ

ಕಾರ್ಕಳದ ಅನಂತ ಪದ್ಮನಾಭ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಕಾರ್ಕಳ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ತ್ವರಿತ ಗತಿಯಲ್ಲಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಗತ್ಯತೆ ಉಳ್ಳ ದಾಖಲೆಗಳು ಹಾಗೂ ಸೂತ್ತುಗಳು ಹಾನಿಯಾಗಿಲ್ಲ. ಗ್ರಾಹಕರು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಬ್ಯಾಂಕ್ ಪ್ರಬಂಧಕರು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ – ಆಟೋ ರಿಕ್ಷಾ ಚಾಲಕನ ಮೇಲೆ ತಂಡದಿಂದ ಹಲ್ಲೆ

ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ರಿಕ್ಷಾ ಚಾಲಕನಿಗೆ ತಂಡವೊಂದು ತೀವ್ರ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಉಜಿರ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಆಶಿಕ್ ತನ್ನ ಆಟೋದಲ್ಲಿ ಬುಧವಾರ ರಾತ್ರಿ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಲ್ವರ ತಂಡವೊಂದು ಧರ್ಮಸ್ಥಳ ಕೆಎಸ್ಸಾರ್ಟಿಸಿ

ಮಕ್ಸೂದ್ ಕೈಚಳಕದಿಂದ ಮೂಡಿಬಂದ ವಿವಿಧ ಕಲಾಕೃತಿ

ಮಂಜೇಶ್ವರ : ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ಹಾಗೂ ಪೋಷಣೆ ಸಿಕ್ಕರೆ ಮಕ್ಕಳು ನ್ನಷ್ಟು ಉನ್ನತ ಮಟ್ಟಕ್ಕೆ ಏರುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆ ಬಿ.ಎಸ್ ನಗರದ ಭಿನ್ನ ಚೇತನರಾಗಿರುವ ಕೆ.ನಾಸರ್ ಹಾಗೂ ಜುಬೈದ ದಂಪತಿಗಳ ಪುತ್ರ ಅಬೂಬಕ್ಕರ್ ಮಕ್ಸೂದ್. ಉದ್ಯಾವರ ಅಲ್ ಸಖಾಫ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕ ತನ್ನ ಕೈ ಚಳಕದಿಂದ ಈಗಾಗಲೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿತ್ರಕಲೆಯಲ್ಲಿ ಅದ್ಭುತ ಸಾಧನೆಯನ್ನು ಮಾಡಿದ್ದಾನೆ. ಇಷ್ಟು

ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ವರ್ಗಾವಣೆ

ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ. ಅವರಿಗೆ ಉಡುಪಿ ಸಿ.ಇ.ಎನ್. ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ‌ ನವೀನ್ ಚಂದ್ರ ಅವರು ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರಕಾರ ರಾಜ್ಯದಲ್ಲಿ 211 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆ.1ರಂದು ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.

ಮಂಜೇಶ್ವರ: ಬೇಕೂರು ಶಾಲೆಯ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಜೇಶ್ವರ : ರ್‍ಯಾಗಿಂಗ್ ಎನ್ನುವುದು ಮಾನವ ಹಕ್ಕುಗಳ ದುರುಪಯೋಗದ ವ್ಯವಸ್ಥಿತ ರೂಪವಾಗಿದೆ. ವಿಪರೀತ ಕಿರುಕುಳ ನೀಡುವುದರ ಜೊತೆಗೆ ಮನಸ್ಸಿನಲ್ಲಿ ಭಯವನ್ನು ಸೃಷ್ಟಿ ಮಾಡುತ್ತಿರುವ ರ್ಯಾಗಿಂಗ್ ತಡೆಯಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗುತ್ತಿರುವ ಮಧ್ಯೆಯೇ ಬೇಕೂರು ಕುಂಬಳೆ ಹೈಯರ್ ಸೆಕಂಡರಿ ಶಾಲೆಯಲ್ಲಿ ಪ್ಲಸ್ ವನ್ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಯನ್ನು ಬಸ್ಸು ನಿಲ್ದಾಣದಲ್ಲಿ ಹಿಗ್ಗಾ ಮಗ್ಗಾ ಥಳಿಸಿ ಹಲ್ಲೆ ಗೈದು ಗಾಯಗೊಳಿಸಲಾಗಿದೆ. ಪೆರ್ಮುದೆ