ಮೂಡುಬಿದಿರೆ : ಸರಕಾರಿ ಮತ್ತು ಅನುದಾನ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಅಕ್ಷರ ದಾಸೋಹ ನೌಕರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು ಎಂದು ಆಗ್ರಹಿಸಿ, ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ತಾಲೂಕಿನ ಕ.ರಾ. ಅಕ್ಷರ ದಾಸೋಹ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು. ಮೂಡುಬಿದಿರೆ ಸಿಐಟಿಯುನ ಮಾಜಿ ಅಧ್ಯಕ್ಷೆ ರಮಣಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್‍ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಡತನ ಹಾಗೂ ಕಷ್ಟದಲ್ಲಿರುವವರಿಗೆ ನಮ್ಮಿಂದಾಗುವ ಸಹಾಯ ಮಾಡುವ ಮೂಲಕ ಮಾನವ ತತ್ವವನ್ನು ಸಹಕಾರ ಗೊಳಿಸಬೇಕು, ನೊಂದಿರುವ ವ್ಯಕ್ತಿಗೆ ಮಾಡುವ ಸೇವೆಯೇ ದೇವರಿಗೆ ನಿಜವಾಗಿ ಮಾಡುವ ಸೇವೆ, ಕುಲಾಲ ಸಮಾಜದ ಒಗ್ಗಟ್ಟಿನ ಶಕ್ತಿ ಕೇಂದ್ರವಾಗಿ ಶ್ರೀ ವೀರನಾರಾಯಣ ಕ್ಷೇತ್ರ ಭವ್ಯವಾಗಿ ನಿರ್ಮಾಣಗೊಂಡಿದೆ. ದೇವಸ್ಥಾನಗಳು ಅಂತರಂಗವನ್ನು ಗಟ್ಟಿಗೊಳಿಸುವ ಆಧ್ಯಾತ್ಮಿಕದ ಜಿಮ್ಮಾ ಸೆಂಟರ್ ಆಗಬೇಕು ಎಂದು ಕೇಮಾರು ಶ್ರೀ ಸಂದೀಪನಿ ಸಾಧನ ಆಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ ಹೇಳಿದರು.
ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ ದಂಧೆ ನಡೆಸುತ್ತಿದ್ದ ವ್ಯಕ್ತಿ. ನಗರ ಸಭೆ ನಿರಾಕ್ಷೇಪಣಾ ಪತ್ರ, ತೆರಿಗೆ ರಶೀದಿ, ಪುತ್ತೂರು ಎಲ್ಲಾ ಪಂಚಾಯಿತಿ ಕಡಬ, ಸುಳ್ಯ, ಬಂಟ್ವಾಳ ತಾಲೂಕಿನ ಕೆಲವು ಗ್ರಾಮ ಪಂಚಾಯಿತಿಗಳ ನಕಲಿ ದಾಖಲೆಗಳನ್ನು
ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿಕೇಶವ ನಾಯ್ಕ ಎಂ (51) ಮೃತಪಟ್ಟವರು.ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆಯ ಬಳಿಯಿರುವ ನೀರು ಹರಿಯುವ ಸಾರ್ವಜನಿಕ ಕಣಿಗೆ ಹಾಕಿರುವ ಪಾಪನ್ನು ದಾಟುತ್ತಿರುವಾಗ ಆಕಸ್ಮಿಕವಾಗಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳಂಜದಲ್ಲಿ ಶನಿವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ 12.90 ಸೆಂ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲೇ ಅತ್ಯಧಿಕ. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ, 10.40 ಸೆಂ.ಮೀ., ಕುಕ್ಕೇಡಿಯಲ್ಲಿ 10.25 ಸೆಂ.ಮೀ. ಪಡಂಗಡಿ, ಮಾಲಾಡಿ ಮತ್ತು ಲಾಯಿಲದಲ್ಲಿ ತಲಾ 9.50 ಸೆಂ.ಮೀ.ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ ಬಾಳದಲ್ಲಿ 11.30 ಸೆಂಮೀ, ಕಿನ್ನಿಗೋಳಿಯಲ್ಲಿ 9.25, ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟುವಿನಲ್ಲಿ
ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಭೂಕುಸಿತ ಉಂಟಾದ ಘಟನೆ ನಡೆದಿದೆ. ಮನೆ ಮಂದಿ ನೋಡು ನೋಡುತ್ತಿದ್ದಂತೆ ಪಾತಾಳಕ್ಕೆ ಬಾವಿ ಕುಸಿದಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ಘಟನೆ ನಡೆದಿದೆ. ಬಾವಿ ಕುಸಿದ ಹಿನ್ನಲೆಯಲ್ಲಿ ಹೊಸ ಮನೆಯೂ ಕುಸಿಯುವ ಅಪಾಯದಲ್ಲಿದೆ. ಬಪ್ಪಳಿಕೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯಾಗಿದ್ದು, ಭೂ ಕುಸಿತದಿಂದಾಗಿ ಪರಿಸರದ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕ ದಳ ದವರು ಮನೆ ಮಂದಿಯನ್ನು
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿಯ ಸಭೆ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ಡಾ.ಮಂಜುನಾಥ್ ಎಸ್. ರೇವಣಕರರವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ರತ್ನಾವತಿ ಜೆ. ಬೈಕಾಡಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗೌರವ ಕಾರ್ಯದರ್ಶಿ ಎನ್.ಗಣೇಶ್ ಪ್ರಸಾದ್ ಜೀ ಸ್ವಾಗತಿಸಿ ವರದಿ ವಾಚಿಸಿದರು. ಗೌರವ ಕೋಶಾಧಿಕಾರಿ ಶ್ರೀ ಸುಬ್ರಾಯ ಭಟ್ ಲೆಕ್ಕಪತ್ರ ಮಂಡಿಸಿದರು. ಸಭೆಯಲ್ಲಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ
ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಪತ್ನಿ