Home Posts tagged #Karavali (Page 22)

ಕರಾವಳಿ : ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು

ದ.ಕ ಜಿಲ್ಲೆ : ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ

ಜು.04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಜವಾಬ್ದಾರಿ ತಹಶೀಲ್ದಾರ್ ಗೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ

ಉಡುಪಿಯಲ್ಲಿ ಸಂಭ್ರಮದ ಈದ್-ಅಲ್-ಅಧಾ ಆಚರಣೆ

ಉಡುಪಿ : ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಈದ್-ಅಲ್-ಅಧಾ ಆಚರಿಸುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಉಡುಪಿ ನಗರದ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು. ಇನ್ನೂ ಕೆಲವೆಡೆ ಮಳೆಯ ನಡುವೆ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇದನ್ನು

ಕರಾವಳಿಯಲ್ಲಿ ಸಂಭ್ರಮದಿಂದ ಈದ್ –ಅಲ್ ಅಧಾ ಆಚರಣೆ

ದ.ಕ.ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ `ಈದುಲ್ ಅಝ್ಹಾ’ ಆಚರಿಸಲಾಗುತ್ತಿದೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸ್ಜಿದ್, ಸಹಿತ ಜಿಲ್ಲೆಯ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ನಮಾಝ್

ದ.ಕ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್

15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ. 2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ, ಬೆಂಗಳೂಳು ಮೂಲದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತ್ತು ದಾವಣಗೆರೆಯ ಎಎಸ್‍ಪಿಯಾಗಿ, ನಂತರ ್ದ ದಾವಣಗೆರೆಯ ಎಸ್‍ಪಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ

ಬಾರಕೂರಿನಲ್ಲಿ ಸರಣಿ ಕಳ್ಳತನ : ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ನಗದು ಕಳವು

ಬಾರಕೂರು ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿಯವರ ಮಾಲಕತ್ವದ ಶ್ರೀ ಗಣೇಶ್ ಇಂಡಿಯನ್ ಆಯಿಲ್‍ನಲ್ಲಿ 8 ಸಿಸಿ ಕ್ಯಾಮರಾ ಇದ್ದು ಕಛೇರಿ ಹಿಂಭಾಗದಲ್ಲಿರುವ ಕ್ಯಾಮರಾಕ್ಕೆ ಸೊಪ್ಪು ಮತ್ತು ಬಟ್ಟೆ ಮುಚ್ಚಿ ಬಳಿಕ ಬೀಗವನ್ನು ಒಡೆದು ಕಪಾಟಿನಲ್ಲಿದ್ದ 20 ಸಾವಿರದಷ್ಟು ನಗದು, ಅಲ್ಲೇ ಪಕ್ಕದಲ್ಲಿದ್ದ ಟಯರ್ ಅಂಗಡಿಯ 3 ರಾಡ್, ನಂದಿನಿ ಹಾಲು ಅಂಗಡಿಯ ಬಾಗಿಲು ಮುರಿದು ನಗದು

ದ.ಕ : ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್

ಮಂಗಳೂರು, ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‍ಎನ್‍ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್

ಕಾಪು : ಕಡಲು ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮದೊಂದಿಗೆ

ಜೂನ್ 23ರಂದು ಸರ್ಕಸ್ ಸಿನಿಮಾ ರಿಲೀಸ್ : ಟಿಕೆಟ್ ಬುಕ್ಕಿಂಗ್ ಆರಂಭ

ತುಳು ಚಿತ್ರರಂಗದ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,