ಮಂಗಳೂರು ಕರಾವಳಿ ಚೋತ್ರ ಕಲಾ ಚಾವಡಿ ಬಲ್ಲಾಲ್‌ಭಾಗ್ ವತಿಯಿಂದ ವಾರಿಯರ್ಸ್ ಆಫ್ ದಿ ಬ್ಯೂ ಡಾ. ಪ್ರವೀಣ್ ಪುತ್ರ ಅವರು ಮೀನುಗಾರಿಕೆಯ ಬಗ್ಗೆ ರಚಿಸಿದ ಪೈಂಟಿಂಗ್‌ನ ಪ್ರದರ್ಶನ ನಡೆಯಿತು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಕರಾವಳಿ ಚೋತ್ರ ಕಲಾ ಚಾವಡಿಯ ಸೆಕ್ರೆಟರಿ ಡಾ. ಎಸ್.ಎಮ್ ಶಿವಪ್ರಕಾಶ್ ಅವರು, ಕಲಾವಿದ ಪ್ರವೀಣ್ ಪುತ್ರ ಅವರು, ಸುಮಾರು 2
ಮಂಗಳೂರಿನ ಇನೋಳಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಅಕ್ಟೋಬರ್ 30 ರಂದು ಪದವಿ ದಿನದ ಸಂಭ್ರಮದ ಕ್ಷಣಗಳನ್ನು ಆಚರಿಸಲಾಗುವುದು.ಬೇರಿಸ್ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬ್ಯಾರಿಸ್ ಎನ್ವಿರೋ-ಅರ್ಕಿಟೆಕ್ಟರ್ ಡಿಸೈನ್ ಸ್ಕೂಲ್‌ನ ಒಂಭತ್ತನೇ ಪದವಿ ಸಮಾರಂಭವು ನಡೆಯಲಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಐಟಿ ಪ್ರಾಂಶುಪಾಲರಾದ ಡಾ. ಎಸ್.ಐ. ಮಂಜುರ್ ಬಾಷಾ, ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.
ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ
ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,
ಬಂಟ್ವಾಳ: ವಿಶಾಖಪಟ್ಟಂನಲ್ಲಿ ಅ.21 ಮತ್ತು 22 ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಹಾಗೂ ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ಅಂತರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವೆನಿಲ್ಲಾ ಮಣಿಕಂಠ ಅವರು ಪ್ರಸಕ್ತ ಮಂಗಳೂರಿನ ಎನ್‌ಐಟಿಕೆಯಲ್ಲಿ ಎಂಟೆಕ್ ವ್ಯಾಸಂಗ ಮಾಡಿತ್ತಿದ್ದು ರಾಜೇಶ್
ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಅವರ ಪತ್ನಿ ಸೇರಿದಂತೆ ಐವರನ್ನು ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ
ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ ಮಾಡಾವು ವಿಶ್ವನಾಥ್ ರೈ, ಹುತಾತ್ಮ ಸೈನಿಕರ ಸ್ಮಾರಕಕ್ಕೆ ಹೂಮಾಲೆ ಅರ್ಪಿಸಿ ಧರಣಿಯನ್ನು
ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ
ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು ಕಾರಣೀಭೂತರಾದವರು. ಈಗ ರಾಜ್ಯ ಪ್ರ ಕಾರ್ಯದರಶಿಯವರ ಬೇಜವ್ದಾರಿತನದಿಂದ ಶ್ರೀ ರಾಮಸೇನೆಗೆ ರಾಜಿನಾಮೆಯನ್ನು
ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ