Home Posts tagged #Karavali (Page 26)

ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ ಐವರು ಅರೆಸ್ಟ್!

ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್

ಮಾಸಿಕ ವೇತನ ಪಾವತಿ ವಿಳಂಬ : ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರಿಂದ ಧರಣಿ

ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ ಮಾಡಾವು ವಿಶ್ವನಾಥ್ ರೈ, ಹುತಾತ್ಮ ಸೈನಿಕರ ಸ್ಮಾರಕಕ್ಕೆ ಹೂಮಾಲೆ ಅರ್ಪಿಸಿ ಧರಣಿಯನ್ನು

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು : ಯು.ಟಿ. ಖಾದರ್ 

ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ

ಶ್ರೀರಾಮಸೇನೆಗೆ ಜಯರಾಂ ಅಂಬೆಕಲ್ಲು ರಾಜೀನಾಮೆ

ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ ಎಲ್ಲಾ ಜನರನ್ನು ಸಮಾನವಾಗಿ ಕೊಂಡೊಯ್ದು ಸಂಘಟನೆಯನ್ನು ರಾಜ್ಯ ಮಟ್ಟದಲ್ಲೇ ಗುರುತಿಸಲು ಕಾರಣೀಭೂತರಾದವರು. ಈಗ ರಾಜ್ಯ ಪ್ರ ಕಾರ್ಯದರಶಿಯವರ ಬೇಜವ್ದಾರಿತನದಿಂದ ಶ್ರೀ ರಾಮಸೇನೆಗೆ ರಾಜಿನಾಮೆಯನ್ನು

ಗದ್ದೆಗಿಳಿದು ಉಳುಮೆ ಮಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್..!

ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ

ಉಡುಪಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್‌ನಿಂದ ಪ್ರತಿಭಟನೆ

ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು. ಈ