ಸುರತ್ಕಲ್‍ನ ನಿವಾಸಿಯಾದ ಕಿರಣ್ ದೇವಾಡಿಗ ಎಂಬವರು ಅಪರೂಪದ ಎಲುಬು ಕ್ಯಾನ್ಸರ್‍ಗೆ ತುತ್ತಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಚಿಕತ್ಸೆಗಾಗಿ ಸಾವಿರಾರು ರೂಪಾಯಿ ಖರ್ಚಾಗಿದ್ದು, ಕಿರಣ್ ಮನೆಯವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸೋಮನಾಥ್ ದೇವಾಡಿಗ ಅವರು ಹುಟ್ಟು ಅಂಗವಿಕಲರಾಗಿದ್ದು, ವೃದ್ದಾಪ್ಯ
ಬ್ರಹ್ಮಾವರ : ಕರಾವಳಿಯಲ್ಲಿ ಈ ಬಾರಿ ಭತ್ತದ ಬೇಸಾಯ ಮಾಡಿದ ರೈತರಲ್ಲಿ ಕೆಲವು ಭಾಗದಲ್ಲಿ ಉತ್ತಮ ಇಳುವರಿ ಬಂದರೂ ಗದ್ದೆಯಿಂದ ಮನೆಗೆ ತರಲು ಅಕಾಲಿಕ ಮಳೆರಾಯ ತೊಂದರೆ ಕೊಟ್ಟರೂ, ದೀಪಾವಳಿಯ ಬಳಿಕ ಕಟಾವಿಗೆ ವೇಗ ಹೆಚ್ಚಿದೆ. ಬಹತೇಕ ಕೃಷಿಕರು ಕೂಲಿ ಆಳುಗಳ ಕೊರತೆಯಿಂದ ಯಾಂತ್ರಿಕೃತ ಕಟಾವಿಗೆ ಹೊಂದಿಕೊಂಡ ಕಾರಣ, ನದಿ ತೀರದ ತಗ್ಗು ಪ್ರದೇಶದ ಗದ್ದೆಯಲ್ಲಿ ನೀರು ತುಂಬಿಕೊಂಡ ಕಟಾವು ಯಂತ್ರಗಳು ಗದ್ದೆಯಲ್ಲಿ ಸಂಚರಿಸಲು ಆಗದೆ ಮತ್ತಷ್ಟು ವಿಳಂಬವಾಗಿದೆ. ಬ್ರಹ್ಮಾವರ ಭಾಗದ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ. ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ವಾಣಿ ಕಾಲೇಜಿನಲ್ಲಿ ಜರಗಿತು. ಸಭೆಯ ತೀರ್ಮಾನದಂತೆ ದಶಂಬರ 17 ಆದಿತ್ಯವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಮ್ಮೇಳನ ಜರಗಲಿದೆ. ಸುವರ್ಣ ಕರ್ನಾಟಕ ವರ್ಷವಾದದ್ದರಿಂದ ಸಮಗ್ರ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತೆ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ
ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ಇದೇ ವೇಳೆ ಮಾತನಾಡಿದ ಚಂದ್ರಶೇಖರ್ ಮಾಧ್ಯಮಗಳಲ್ಲಿ ನನ್ನ ವಿಚಾರದ ಬಗ್ಗೆ ವರದಿ ಬಂದಿರುವ ಕಾರಣ ನನ್ನ
ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಸ್ಲಿಂ ಸ್ಪೀಕರ್‍ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ
ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಈ ಕೃತ್ಯ ಬೆಚ್ಚಿ ಬೀಳುವ ಘಟನೆ ಆಗಿದೆ. ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಷವಾಗಿ ಕೊಂದು ರಾಕ್ಷಸ ಕೃತ್ಯ ಎಸಗಿದ್ದಾನೆ. ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ ಎಂದರು
ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಪ್ರದೇಶಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ನಿಲ್ಲಿಸಿದ್ದ ಸುಮಾರು 8 ಮೀನುಗಾರಿಕೆ ಬೋಟುಗಳು ಹಾಗೂ ಒಂದು ದೋಣಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು ಘಟನೆ ಬಗ್ಗೆ ಸಂಬಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಬಿವೈ.
ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್(23ವ.) ಗಾಯಗೊಂಡವರಾಗಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ.
ಮಂಗಳೂರು * ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ಹಾಗೂ ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಈ ದಿನವೂ ಕೂಡ ವಿಶಿಷ್ಟತೆಯನ್ನು ಪಡೆದಂತಹ ದಿನ.ಪ್ರಜಾಹಿತ ರಾಜನಾಗಿ , ದಾನಶೂರನೆಂದು ಪ್ರಖ್ಯಾತಿ ಪಡೆದ ಬಲೀಂದ್ರನ ಪೂಜೆಯನ್ನು ದೈವಸ್ದಾನಗಳಲ್ಲಿ ದೀಪಾವಳಿ
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ” ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳಿಂದ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನ ಮನ್ನಣೆ ಪಡೆಯುವ ಮೂಲಕ ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸಿನಿಂದ ಪ್ರೇರಣೆಗೊಂಡ ಸಾರ್ವಜನಿಕರು ಮುಂದಿನ ಸ್ಟ್ರೀಟ್ ಫುಡ್