ಬೈಂದೂರು ಪೊಲೀಸ್ ಠಾಣೆಯಲ್ಲಿ ಗಣಹೋಮ, ನಾಗದೇವರ ಪೂಜೆ, ಆಯುಧ ಪೂಜೆ ಹಾಗೂ ವಾಹನ ಪೂಜಾ ಕೈಂಕರ್ಯಗಳು ವಿಶೇಷ ಹೂವಿನ ಅಲಂಕಾರದೊಂದಿಗೆ ಅತ್ಯಂತ ವಿಶಿಷ್ಠವಾಗಿ ಆಚರಿಸಲಾಯಿತು. ಸಮವಸ್ತ್ರಧಾರಿ ಇಲಾಖೆಯ ಸಿಬ್ಬಂದಿಗಳು ಪೂಜೆಯ ಅಂಗವಾಗಿ ಅಪ್ಪಟ ಭಾರತೀಯ ಶೈಲಿಯ ಉಡುಗೆಯನ್ನು ತೊಟ್ಟು ಗಮನ ಸೆಳೆದರು. ಠಾಣೆ ಸಿಬ್ಬಂದಿಗಳು ಭಾವೈಕ್ಯತೆ ಮೂಡಿಸುವ ಹಾಗೂ ಪರಸ್ಪರ ವಿಶ್ವಾಸ
ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ನುಡಿನಮನ' ಹಾಗೂಸಹಬೋಜನ’ವು ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ನಿಟ್ಟೆ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ವಿನಯ ಹೆಗ್ಡೆ ಅವರು ನುಡಿನಮನ ಸಲ್ಲಿಸುತ್ತಾ `ಕೌಟುಂಬಿಕ ಜವಾಬ್ದಾರಿಯಿಂದ ತನ್ನ ವಿದ್ಯಾಭ್ಯಾಸ ಮೊಟುಕಾದರೂ, ವಿದ್ಯಾಕ್ಷೇತ್ರಕ್ಕೆ ಕೊಡುಗೆ ನೀಡಿ ಹಾಗೂ ವಿಶ್ವವಿದ್ಯಾಲಯಕ್ಕೆ ಸಮಾನಾಗಿ ಶಿಕ್ಷಣ ಸಂಸ್ಥೆ ಕಟ್ಟುವಲ್ಲಿ ಮಗನಿಗೆ ನೆರಳಾಗಿ ನಿಂತ
ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಜನತೆ ಅದರಿಂದ ತೀವ್ರ ತೊಂದರೆ ಅನುಭವಿಸುತ್ತಿರುವಾಗ ಕ್ಷೇತ್ರದ ಒಬ್ಬ ಜವಾಬ್ದಾರಿಯುತ ಶಾಸಕನಾಗಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರಿಗೆ ಅದು ತಪ್ಪಾಗಿ ಕಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಕನಿಷ್ಠ ಜ್ಞಾನವನ್ನಾದರೂ ಬೆಳೆಸಿಕೊಳ್ಳಬೇಕಾಗಿದೆ.
ಮೂಡುಬಿದಿರೆ: ಇತ್ತೀಚೆಗೆ ನಿಧನರಾಗಿರುವ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವತಿಗೆ ಸಮಾಜ ಮಂದಿರ ಸಭಾದ ನೇತೃತ್ವದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಅರ್ಪಿಸುವ ನುಡಿನಮನ ಕಾರ್ಯಕ್ರಮವು ಸಮಾಜಮಂದಿರದಲ್ಲಿ ನಡೆಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನುಡಿನಮನವನ್ನು ಸಲ್ಲಿಸುತ್ತಾ ಕೃಷಿ ಚಟುವಟಿಕೆಯನ್ನು ಆರಂಭಿಸಿ ಉತ್ತಮ ಕೃಷಿಕನಾಗಿ, ಶಿಕ್ಷಣದಲ್ಲಿ ಆಸಕ್ತಿಯನ್ನು ಹೊಂದಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದವರು, ಶಿಸ್ತನ್ನು
ಮೂಡುಬಿದಿರೆ : 2022ರ ಕೊನೆಯಲ್ಲಿ ಉಚ್ಛನ್ಯಾಯಲಯವು ಬೀಡಿ ಕಾರ್ಮಿಕರಿಗೆ ನೀಡಬೇಕಾದ ತುಟ್ಟಿಭತ್ತೆಯನ್ನು ನ್ಯಾಯೋಚಿತವಾಗಿದೆ ಎಂದು ತೀರ್ಪು ನೀಡಿದೆ. ಅದೇ ಸಂದರ್ಭದಲ್ಲಿ ಇನ್ನೊಂದು ತೀರ್ಪು ಮಾಲೀಕರ ಪರವಾಗಿ ಬಂದಿರುತ್ತದೆ. ಬೀಡಿ ಕಾರ್ಮಿಕರಿಗೆ ನ್ಯಾಯೋಚಿತವಾಗಿ ನೀಡಬೇಕಾದ ಏರಿಳಿತ ತುಟ್ಟಿಭತ್ತೆಯನ್ನು ನೀಡಬೇಕು. ಬೀಡಿ ಕಾರ್ಮಿಕರಿಗೆ ನೀಡಬೇಕಾದ ಬಾಕಿ ಮೊತ್ತವನ್ನು ಜಾರಿಗೊಳಿಸಲು ಕರ್ನಾಟಕ ರಾಜ್ಯ ಸರಕಾರ ಗಂಭೀರ ಶ್ರಮವಹಿಸಬೇಕೆಂದು ಬೀಡಿ ಫೆಡರೇಷನ್ ನ ಜಿಲ್ಲಾ
ಬೈಂದೂರು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಭತ್ತದ ಫಸಲು ಸಂಪೂರ್ಣ ನಾಶವಾಗಿದೆ. ಇದರಿಂದಾಗಿ ಕೃಷಿಕರು ಕಂಗಾಲಾಗಿ ದಿಕ್ಕು ತೋಚದಂತಾಗಿದೆ. ಮಳೆಯಿಂದಾಗಿ ಕಟಾವಿಗೆ ಬಂದ ಭತ್ತದ ಪೈರುಗಳು ಹಾಗೂ ಕಟಾವಿನ ನಂತರ ಜಾನುವಾರುಗಳ ಒಣ ಹುಲ್ಲುಗಳು, ಜೊತೆಗೆ ಕಟಾವಿನ ನಡುವೆ ದ್ವಿದಳ ಧಾನ್ಯಗಳನ್ನು ಸಹ ಈಗಾಗಲೇ ಬಿತ್ತನೆ ಮಾಡಿದ್ದು, ಅದು ಕೂಡ ಮಳೆಯಿಂದ ಹಾನಿಯಾಗಿ ಅಪಾರವಾದ ಬೆಳೆ ಹಾಗೂ ಜಾನುವಾರುಗಳ ಮೇವಿನ ಹುಲ್ಲುಗಳು ಹಾನಿಯಾಗಿದೆ. ಕೋಣ್ಕಿ, ಬಡಾಕೆರೆ, ತಾರೀಬೇರು, ಜಡ್ಡಾಡಿ,
ಬ್ರಹ್ಮಾವರದ ವಾರಂಬಳ್ಳಿ ತೆಂಕು ಬಿರ್ತಿಯ ದಲಿತ ಮುಖಂಡರ ಪುತ್ರ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಅಯ್ಕೆಯಾದ ಹಿನ್ನಲೆಯಲ್ಲಿ, ಅಭಿನಂದನಾ ಸಮಾರಂಭವನ್ನು ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು. ಅದೇ ದಿನ ಸಂಜೆ ಕಾರ್ಯಕ್ರಮದ ಯಶಸ್ವಿಯ ಹಿನ್ನಲೆಯಲ್ಲಿ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವಿಚಾರ ತಿಳಿದ ಸ್ಥಳೀಯ ಮಹಿಳೆ ಸವಿತಾ ಎನ್ನುವವರು ಅಂಬೇಡ್ಕರ್ ಭವನಕ್ಕೆ ತೆರಳಿ ಮದ್ಯಪಾನ ಮಾಡುತ್ತಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿ, ವಿಡಿಯೋ
ಅಲೆವೂರು: ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಅಲೆವೂರು ವಿಠಲ ಸಭಾಭವನದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಗತಿ ನಗರದ ಮೊಹಮ್ಮದ್ ತನ್ಸಿಲ್ ( 28) ಮೃತ ದುರ್ದೈವಿಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ ನಾರಾಯಣ ಗೌಡರ ಆದೇಶದಂತೆ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ನೇತೃತ್ವದಲ್ಲಿ ಉಡುಪಿ ತಾಲೂಕು ಅಧ್ಯಕ್ಷ ಅ,ರಾ ಪ್ರಭಾಕರ್ ಪೂಜಾರಿ ಮುಂದಾಳತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಕೊಲ್ಲೂರಿಗೆ ಭೇಟಿ ನೀಡಿ ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ 70% ಕನ್ನಡ ಹಾಗೂ ಉಳಿದ ಭಾಷೆಗಳಿಗೆ ಶೇಕಡಾ 30/ ಕಡ್ಡಾಯಗೊಳಿಸುವಂತೆ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನ ಉದ್ದೇಶಿಸಿ ಮಾತನಾಡಿದ ಅ.ರಾ
ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ಪ್ರತಿ ವರ್ಷ ಭಾರತದಾದ್ಯಂತ ನವಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ, ಆರಂಭಿಕ ಹಂತದಲ್ಲಿ ಗುರುತಿಸುವುದರ ಮಹತ್ವ ಮತ್ತು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ. ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮ ಭಾರತದಲ್ಲಿ 1975 ರಲ್ಲಿ ಆರಂಭವಾಯಿತು. ಆದರೆ