ಪುತ್ತೂರು ಜಿಎಲ್ ಮಹಲಿನ ಭಾರತ್ ಸಿನಿಮಾ ಮಂದಿರದಲ್ಲಿ ಪೊಲಿಸ್ ಇಲಾಖೆಯ ವಿನಂತಿ ಮೇರೆಗೆ ಕಣ್ಣೂರ್ ಸ್ಕ್ವಾಡ್ ಸಿನಿಮಾ ವೀಕ್ಷಣೆಗೆ ಜಿಎಲ್ ಸಂಸ್ಥೆ ಅವಕಾಶ ಮಾಡಿಕೊಟ್ಟಿದೆ. ಜಿ ಎಲ್ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ ಅವರ ಕಾರ್ಯವನ್ನು ಮೆಚ್ಚಿ ಪೊಲೀಸ್ ಇಲಾಖೆ ಅಭಿನಂದನಾ ಪತ್ರವನ್ನು ನೀಡಿ ಅಭಿನಂದಿಸಿದರು. ಇದೇ ವೇಳೆ ಜಿಎಲ್ ಸಂಸ್ಥೆಯ ಮಾಲಕರಾದ ಬಲರಾಮ
ಮಂಗಳೂರಿನ ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್‍ನ ವಾರದ ವಿಶೇಷ ಮೀಟಿಂಗ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದು, ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್‍ನಲ್ಲಿರುವ ಉದ್ಯಮಿಗಳಿಗೆ ಉತ್ಸಾಹ ತುಂಬಿಸಿದರು. ಮಂಗಳೂರಿನಲ್ಲಿ ಉದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಉದ್ಯಮಿಗಳಿಗಾಗಿಯೇ ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್ ಆರಂಭವಾಗಿದ್ದು,
ಮಂಜೇಶ್ವರ ಸಮೀಪದ ಕುಂಜತ್ತೂರಿನ ದಾರುಸ್ಸಲಾಂ ಸಲಫಿ ಮಸೀದಿ ತಿರುವಿನಲ್ಲಿರುವ ಖಾಸಗಿ ಅಪಾರ್ಟ್ಮೆಂಟ್‍ನಿಂದ ಶೌಚಾಲಯದ ನೀರು ಸಾರ್ವಜನಿಕ ಸ್ಥಳಕ್ಕೆ ಹಾಗೂ ಸಮೀಪದ ರಸ್ತೆಗೆ ಹರಿದು ಬರುತಿದ್ದು, ಪರಿಸರವೆಲ್ಲ ದುರ್ವಾಸನೆ ಆವರಿಸಿದೆ. ಪರಿಸರವಾಸಿಗಳು ಹಾಗೂ ಈ ದಾರಿಯಿಂದ ಸಾಗುವವರು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ಎದುರಾಗಿದೆ. ಈ ದಾರಿಯಾಗಿ ದಿನನಿತ್ಯ ಶಾಲೆಗೂ ಮದ್ರಸಕ್ಕೂ ನೂರಾರು ವಿದ್ಯಾರ್ಥಿಗಳು ಈ ಶೌಚಾಲಯದ ನೀರನ್ನು ದಾಟಿಕೊಂಡೇ ಸಾಗಬೇಕಾದ
ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವಚಿಂತನೆಯನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಕುದ್ರೋಳಿ ಶ್ರೀಕ್ಷೇತ್ರದ ದಸರಾ ವಿಶ್ವವಿಖ್ಯಾತ ಮಂಗಳೂರು ದಸರಾವೆಂದೇ ಪ್ರಸಿದ್ಧ. ಈ ದಸರಾ ಶೋಭಾಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಕ್ರೈಸ್ತ ಬಾಂಧವರ ಟ್ಯಾಬ್ಲೊ ಮಂಗಳೂರು ದಸರಾ ಮೆರುಗು ಹೆಚ್ಚಿಸಿದೆ. ಜೊತೆಗೆ ಧರ್ಮಧರ್ಮಗಳ ನಡುವಿನ ಬಾಂಧವ್ಯ ವೃದ್ಧಿಸಿದೆ. ಕ್ರೈಸ್ತ ಬಾಂಧವರ ಸ್ತಬ್ಧಚಿತ್ರ ಇದೇ ಮೊದಲ ಬಾರಿಗೆ ಮಂಗಳೂರು ದಸರಾ
ಕುದ್ರೋಳಿ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ವೈಭವದಿಂದ ನಡೆದಿದ್ದು ಈ ಪೈಕಿ ಅಪ್ಪೆ ಮಂತ್ರದೇವತೆ ಟ್ಯಾಬ್ಲೋ ಜನರ ಗಮನ ಸೆಳೆಯಿತು. ನಗರದ ಪದವು ಫ್ರೆಂಡ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 9ನೇ ವರ್ಷದ ಕಾಣಿಕೆಯಾಗಿ ಮಂತ್ರದೇವತೆ ದೈವದ ಸ್ತಬ್ಧಚಿತ್ರ ಮಾಡಲಾಗಿತ್ತು. ಅಪ್ಪೆ ಮಂತ್ರದೇವತೆ ಹೆಸರಿನ ಟ್ಯಾಬ್ಲೋದಲ್ಲಿ ದೈವದ ಅಪಚಾರ ಆಗದಂತೆ, ದೈವಾರಾಧನೆ ಮಹತ್ವ ಸಾರುವ ಯತ್ನ ಮಾಡಲಾಯಿತು. ದೈವರಾಧನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಮಂತ್ರದೇವತೆಯ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಅಕ್ಟೋಬರ್ 28ರಂದು ಬೃಹತ್ ಮೆರವಣಿಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 9ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಬೃಹತ್ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು
ಕಡಬ: ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಆನೆ ಹಾಗೂ ಇತರ ಪ್ರಾಣಿಗಳ ಉಪಟಳ ಮಿತಿ ಮೀರುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಗ್ರಹಿಸಿ ಅ.26ರಂದು ಕಡಬದಲ್ಲಿ ಬೃಹತ್ ಮೆರವಣಿಗೆ ನಡೆಸಿ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದು ಐತ್ತೂರು ಮರ್ಧಾಳ ಜಾಗೃತ ರೈತ ಕುಟುಂಬಗಳ ಒಕ್ಕೂಟದ ಅಧ್ಯಕ್ಷ ಅತ್ಯಡ್ಕ ನಾರಾಯಣ ಶೆಟ್ಟಿ ತಿಳಿಸಿದ್ದಾರೆ. ಕಡಬದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಆನೆ ಉಪಟಳದಿಂದ ಬೇಸತ್ತ ರೈತರು ಒಗ್ಗೂಡಿ
ಉಳ್ಳಾಲ: ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ. ಶಿವಪ್ಪ ಅವರು ಕೂಲಿಕಾರ್ಮಿಕರಾಗಿದ್ದು, ಸಂಜೆ ನಂತರ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ವಾಚ್ ಮೆನ್ ವೃತ್ತಿ
ದಕ್ಷಿಣ ಭಾರತದ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚಾಗಿ ಕಂಡುಬರುವ ಮಲಬಾರ್ ಹಾರ್ನ್‍ಬಿಲ್ ಪಕ್ಷಿಗಳು ಇತ್ತೀಚೆಗೆ ಕರಾವಳಿ ಭಾಗದಲ್ಲಿ ಕಂಡುಬಂದಿದೆ. ಮಂಗಳೂರಿನ ಎಂಆರ್‍ಪಿಎಲ್ ಪ್ರದೇಶವು ಇದೀಗ ಹಾರ್ನ್‍ಬಿಲ್ ಪಕ್ಷಿಗಳಿಗೆ ಆಶ್ರಯತಾಣವಾಗಿದೆ.ಮಲಬಾರ್ ಫೈಡ್ ಹಾರ್ನ್‍ಬಿಲ್ ಭಾರತ ಮತ್ತು ಶ್ರೀಲಂಕಾದಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ದೊಡ್ಡ ಕೊಕ್ಕಿನ ಉದ್ದವಾದ ಗರಿಯ ಹಾರ್ನ್‍ಬಿಲ್ ಹಕ್ಕಿಯನ್ನು ನೋಡುವುದೇ ಚೆಂದ. ಈ ಪಕ್ಷಿಗಳು
ಉಳ್ಳಾಲ ಕ್ಷೇತ್ರದಲ್ಲಿ ಭಾರೀ ಅಭಿವೃದ್ಧಿಯಾಗಿದೆ ಎಂದು ಒಂದು ಕಡೆ ಡಂಗುರ ಸಾರುತ್ತಿದ್ದರೆ,ಮತ್ತೊಂದು ಕಡೆ ಒಳರಸ್ತೆಗಳ ಅವ್ಯವಸ್ಥೆ, ಚರಂಡಿಗಳ ದುರಾವಸ್ಥೆ, ಆರೋಗ್ಯ ಕ್ಷೇತ್ರಗಳ ಸಮಸ್ಯೆಗಳು, ಆಡಳಿತಾತ್ಮಕ ಸಂಕಷ್ಟಗಳು,ಸಾಮಾಜಿಕ ಅನಾಚಾರಗಳನ್ನು ಕ್ಷೇತ್ರದ ಜನತೆ ನಿರಂತರವಾಗಿ ಅನುಭವಿಸುತ್ತಿದ್ದಾರೆ. ಒಳರಸ್ತೆಗಳಲ್ಲಿ ಚೆಂಬುಗುಡ್ಡ ದಾರಂದಬಾಗಿಲು ಪಂಡಿತ್ ಹೌಸ್ ಸಂಪರ್ಕ ರಸ್ತೆಯಂತೂ ಕಳೆದ 25 ವರ್ಷಗಳಿಂದ ತೇಪೆ ಕಾರ್ಯಕ್ಕೆ ಒಗ್ಗಿ ಹೋಗಿದೆಯೇ ಹೊರತು ಸಂಪೂರ್ಣ