ಮೂಡುಬಿದಿರೆ: ವಕೀಲ, ಪತ್ರಕರ್ತ, ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ ಕೋಟ್ಯಾನ್ (30ವ) ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. ಸಚ್ಚರಿಪೇಟೆ ಪೆರೂರು ನಿವಾಸಿ ಆನಂದ- ವನಜಾ ದಂಪತಿಯ ಪುತ್ರ ವೇಣುಗೋಪಾಲ್ ಅವರು ಕಳೆದ 11 ವರ್ಷಗಳಿಂದ ಜಯಕಿರಣ ಪತ್ರಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜತೆಗೆ ವಕೀಲ ವೃತ್ತಿಯನ್ನು
ಮಂಗಳೂರಿನ ಜ್ಯೋತಿ ಸರ್ಕಲ್‌ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ತನಿಷ್ಕ್ ಜ್ಯುವೆಲ್ಲರಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದೆ. ಈ ಪ್ರಯುಕ್ತ ಗ್ರಾಹಕರೆಲ್ಲರೂ ಸೇರಿ ಹಬ್ಬದ ಆಚರಣೆಯನ್ನು ದೀಪ ಬೆಳಗಿಸುವ ಮೂಲಕ ಮೂಲಕ ಉದ್ಘಾಟಿಸಿ, ನಂತರ ದರೋಹ ಎಂಬ ಹೊಸ ಆಭರಣವನ್ನು ಬಿಡುಗಡೆಗೊಳಿಸಿದರು. ಈ ವಿಶೇಷ ರಿಯಾಯಿತಿಯು ಅ.15 ರಿಂದ ನ.12ರ ವರೆಗೆ ನಡೆಯಲಿದ್ದು, 25% ನಷ್ಟು ಚಿನ್ನದ ಮೇಕಿಂಗ್ ದರದಲ್ಲಿ ರಿಯಾಯಿತಿ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.
ಸಾಲು ಸಾಲು ಚೌತಿ ನವರಾತ್ರಿ ದೀಪಾವಳಿ ಹಬ್ಬ ಹರಿದಿನ ಬಂದಾಗಲೇ ಸಿಹಿತಿಂಡಿಗಳ ಘಮ ಘಮ ಹಳ್ಳಿ ರೆಸಿಪಿಗಳು ಹಲಸಿನ ಹಣ್ಣಾಗುವಾಗ ಗೆಣಸಲೆ ಸವಿರುಚಿ ಬಿಟ್ಟಿರಲಾಗದೆ ಇಲ್ಲದಾಗ ಮಾಡುವ ಕಾಯಿ (ತೆಂಗಿನ) ಗೆಣಸಲೆಗೆ ರುಚಿ ತಿಂದವನಿಗೆ ಗೊತ್ತು ಇದು ಸಿಕ್ಕಾಪಟ್ಟೆ ತುಂಬಾ ಟೇಸ್ಟಿ ಎಂದವರು ಹೇಳುತ್ತಾರೆ ಬಾಳೆ ಎಲೆಯಲ್ಲಿ ಮಾಡುವ ಈ ತಿಂಡಿಗೆ ನಮ್ಮ ಈಗಿನ ಪಿಜ್ಜಾ – ಬರ್ಗರ್ ಏನು ಅಲ್ಲ. ಬಾಳೆಲೆಯ ಊಟದಲ್ಲಿರುವ ಮಜಾನೇ ಬೇರೆ ಮಾಡುವ ಹಾಗೆ ಬಾಳೆಎಲೆಯಲ್ಲಿ ಮಾಡುವ ಕಡುಬು,
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಜರುಗಿತು. ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ
ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ (೨೩) ಮೃತಪಟ್ಟ ಯುವತಿ. ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ದಾಸಕೋಡಿ ಎಂಬಲ್ಲಿ ಬಸ್ಸಿನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದಿದೆ
ದೇಶದ ರಕ್ಷಣೆಯೊಂದಿಗೆ ನಮ್ಮಲ್ಲರ ರಕ್ಷಣೆ ಮಾಡುವ ಯೋಧರಿಗೆ ಸ್ಮಾರಕ ನಿರ್ಮಾಣ ಮಾಡುವ ಕಾರ್ಯಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿಯವರು ಯೋಧರಿಗೆ ಅತ್ಯತ ಹೆಚ್ಚು ಗೌರವ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಸುಳ್ಯ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಕಡಬದಲ್ಲಿ ನೆಹರು ಯುವ ಕೇಂದ್ರ ಮಂಗಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಸ,ಪ.ಪೂ.ಕಾಲೇಜು ಕಡಬ ,ತಾಲೂಕು ಯುವಜನ ಒಕ್ಕೂಟ ಕಡಬ, ತಾ.ಪಂ.ಕಡಬ ,ಪಟ್ಟಣ
62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಬೈಂದೂರಿನ ಮಣಿಕಾಂತ ಹೋಬಳಿದಾರ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿದ್ದಾರೆ. 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಸರ್ವಿಸರ್ಸ್ ತಂಡವನ್ನು ಪ್ರತಿನಿಧಿಸಿದ 21 ವರ್ಷದ ಮಣಿಕಾಂತ ಹೋಬಳಿದಾರ್ ಅವರು 100 ಮೀ. ಓಟದ ಸೆಮಿಫೈನಲನ್ನು ಕೇವಲ 10.23 ಸೆಕೆಂಡ್‍ಗಳಲ್ಲಿ ಓಡುವ ಮೂಲಕ ರಾಷ್ಟ್ರೀಯ ದಾಖಲೆ ಬರೆದು ಅಗ್ರಸ್ಥಾನದೊಂದಿಗೆ ಫೈನಲ್‍ಗೆ
ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿತು. ನಗರದ ಭಾರತ್ ಮಾಲ್‍ನ ಬಿಗ್ ಸಿನಿಮಾಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಿಕೆದ ಬೊಳ್ಳಿ ನಟ ಡಾ. ದೇವದಾಸ್ ಕಾಪಿಕಾಡ್ ಅವರು ದೀಪ ಬೆಳಗಿಸುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಸಿನಿಮಾ
ಕರ್ನಾಟಕದ ಎಲ್ಲಾ ವಿರೋಧ ಪಕ್ಷದ ಶಾಸಕರಿಗೆ ಅನ್ವಯಿಸುವ ಸಮಸ್ಯೆ ಇದು. ವಿರೋಧಪಕ್ಷದ ಶಾಸಕರನ್ನ ಸಿದ್ದರಾಮಯ್ಯ ಸರ್ಕಾರ ಹಣೆಯಲು ಹೊರಟಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಯನ್ನು ಈ ಸರ್ಕಾರ ತಡೆ ಹಿಡಿದಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಶಾಸಕ ಮುನಿರತ್ನ ಪ್ರತಿಭಟನೆ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಮಂಜೂರಾದ ಯೋಜನೆಯ ಹಣವನ್ನು ಬಿಡುಗಡೆ ಮಾಡದೆ ತಡೆಹಿಡಿಯಲಾಗಿದೆ. ಹೊಸ