Home Posts tagged #karkala (Page 4)

ಕಾರ್ಕಳ: ಗಾಂಧಿ ಸ್ಮೃತಿ ಮತ್ತು ನವ ಜೀವನ ಸಮಿತಿ ಸದಸ್ಯರ ಸಮಾವೇಶ

ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿ ಸ್ಮೃತಿ ಮತ್ತು ನವ ಜೀವನ ಸಮಿತಿ ಸದಸ್ಯರ ಸಮಾವೇಶವು ಕಾರ್ಕಳದ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯ ಚಂದ್ರ ಜೈನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅಭಯಚಂದ್ರ ಜೈನ್ ಅವರು, ನಾವಿಂದು ಗಾಂಧಿ

ಕಾರ್ಕಳ: ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಆಚರಿಸಿ, ಡಿವೈಎಸ್ಪಿ ಅರವಿಂದ ಕಲಗಜ್ಜಿ

ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ. ಯಾರೂ ಕೂಡ ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗಜ್ಜಿ ಹೇಳಿದರು. ಅವರು ಕಾರ್ಕಳ ನಗರ ಠಾಣೆ ಮತ್ತು ಗ್ರಾಮಾಂತರ ಠಾಣೆ ವ್ಯಾಪ್ತಿಯ ಎಲ್ಲಾ ಮಸೀದಿಯ ಧರ್ಮಗುರುಗಳು ಮತ್ತು ಮಸೀದಿಯ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದರು. ಈದ್ ಮಿಲಾದ್ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸಂಪೂರ್ಣವಾದ ಭದ್ರತೆಯನ್ನು ಕೊಡುತ್ತೇವೆ. ಸಮಯದೊಳಗಡೆ ಸಭೆ, ಸಮಾರಂಭಗಳನ್ನು ಮುಕ್ತಾಯಗೊಳಿಸಬೇಕು ಎಂದರು. ಈ ಸಂದರ್ಭ

ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡಿದ ಮೊದಲ ರಾಜ್ಯ ಕರ್ನಾಟಕ: ಡಾ. ಎಂ. ವೀರಪ್ಪ ಮೊಯಿಲಿ

ಕಾರ್ಕಳ: ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. 1993 ರಲ್ಲಿಯೆ ಮಹಿಳೆಯರಿಗೆ ಮೀಸಲಾತಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ನಲ್ಲಿ 50% ಮೀಸಲಾತಿ ಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿತ್ತು. ಅಂದಿನ

ಕಾರ್ಕಳ: ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ ಹರಿಯುತ್ತಿದ್ದ ಸಮಸ್ಯೆಗೆ ಪರಿಹಾರ

ವಿ4 ವರದಿಗೆ ಸ್ಪಂದಿಸಿದ ಕಾರ್ಕಳ ಪುರಸಭಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ನಾಗರಿಕರು ಕಾರ್ಕಳ ಗಾಂಧಿ ಮೈದಾನದ ಕ್ರೈಸ್ಟ್ ಕಿಂಗ್ ಚರ್ಚ್ ಮತ್ತು ಶಾಲೆಗಳಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ ಹರಿದು ಎಲ್ಲರಿಗೂ ಸಮಸ್ಯೆಯಾಗುತ್ತಿದ್ದು ಇದೀಗ ಕಾರ್ಕಳ ಪುರಸಭೆಯವರು ಒಳ ಚರಂಡಿಯ ಕಾಮಗಾರಿಕೆಯನ್ನು ಪ್ರಾರಂಭಿಸಿ ಸಮಸ್ಯೆಗೆ ಮುಕ್ತಿ ನೀಡಿದ್ದಾರೆ. ಒಳ ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲಿನಿಂದ ಹರಿಯುತ್ತಿದ್ದರಿಂದ ಕಂಗೆಟ್ಟ

ಕಾರ್ಕಳ: ರಸ್ತೆ ಬದಿಯಿದ್ದ ಅಪಾಯಕಾರಿ ಮರ ತೆರವು

ಕಾರ್ಕಳ ಪುರಸಭೆ ವ್ಯಾಪ್ತಿಯ ಆನೆಕೆರೆ ಮಸೀದಿಯ ಬಳಿ ಇರುವ ಅಪಾಯಕಾರಿ ಮರ ತೆರವು ಕಾರ್ಯ ನಡೆಯಿತು. ಬೃಹತ್ಕಾರದ ಮರದ ಕೊಂಬೆಗಳನ್ನು ತೆರವು ಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು. ಪ್ರತಿನಿತ್ಯ ನೂರಾರು ವಾಹನಗಳು ಮತ್ತು ಸಾವಿರಾರು ನಾಗರಿಕರು ಸಂಚರಿಸುವ ರಸ್ತೆಯ ಪಕ್ಕದಲ್ಲಿ ತುಂಬಾ ಹಳೆಯದಾದ ಬೃಹತ್ಕಾರದ ಮರ ತೀರ ಅಪಾಯಕಾರಿಯಾಗಿತ್ತು. ಸಾರ್ವಜನಿಕರು ಅನೇಕ ಬಾರಿ ಪುರಸಭೆಗೆ ಮತ್ತು ಅರಣ್ಯ ಇಲಾಖೆಗೆ ಮರ ತೆರವಿಗೆ ಮನವಿಗಳನ್ನು

ಕಾರ್ಕಳ ತಾಲೂಕಿನಾದ್ಯಾಂತ ಸಂಭ್ರಮದ ನಾಗರ ಪಂಚಮಿ

ಕಾರ್ಕಳ ತಾಲೂಕಿನ ವಿವಿಧ ನಾಗ ಸಾನಿಧ್ಯಗಳಲ್ಲಿ ನಾಗರ ಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ನಾಗಬನಗಳಲ್ಲಿ ಭಕ್ತಾದಿಗಳು ನಾಗನಿಗೆ ಹಾಲು, ಸೀಯಾಳ ಸಮರ್ಪಿಸುವ ದೃಶ್ಯ ಕಂಡು ಬಂತು. ನಾಗರ ಪಂಚಮಿ ಪ್ರಯುಕ್ತ ದನದ ಶುದ್ಧ ಹಾಲಿಗೆ ತುಂಬಾ ಪ್ರಾಮುಖ್ಯತೆ ಇರುವುದರಿಂದ ಕಾರ್ಕಳದ ಪೆರುವಾಜೆ ಬಳಿ ಇರುವ ಹಾಲು ಮಾರಾಟ ಕೇಂದ್ರದ ಬಳಿ ಬೆಳಿಗ್ಗೆ 6 ಗಂಟೆಯಿಂದಲೇ ಜನರು ಸರತಿ ಸಾಲಿನಲ್ಲಿ ನಿಂತು ಹಾಲು ಖರೀದಿಸಿದರು. ನಾಗರ ಪಂಚಮಿ

ಕಾರ್ಕಳ : ಕೊಳಚೆ ನೀರಿನ ದುರ್ವಾಸನೆಯಿಂದ ಸ್ಥಳೀಯ ಜನತೆಗೆ ಸಂಕಷ್ಟ

ಕಾರ್ಕಳ ಪುರಸಭೆ ವ್ಯಾಪ್ತಿಯ ಗಾಂಧಿ ಮೈದಾನದ ಮುಖ್ಯ ರಸ್ತೆಯಲ್ಲಿ ಸುಮಾರು 20 ದಿನಗಳಿಂದ ಒಳ ಚರಂಡಿಯ ನೀರು ಹರಿಯುತ್ತದೆ. ಈ ನೀರು ದುರ್ವಾಸನಿಂದ ಕೂಡಿದ ಪರಿಣಾಮ ಸ್ಥಳೀಯ ವಸತಿ ಸಂಕೀರ್ಣದಲ್ಲಿ ವಾಸಿಸುವ ಜನತೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ಅದಲ್ಲದೆ ಪಕ್ಕದಲ್ಲಿ ಕ್ರೈಸ್ ಕಿಂಗ್ ಚರ್ಚ್ ಹಾಗೂ ಕಾನ್ವೆಂಟ್ ಮತ್ತು ಸಾವಿರಾರು ಮಕ್ಕಳು ಓದುತ್ತಿರುವ ಶಾಲೆಯೂ ಇದೆ. ಎಲ್ಲರೂ ಈ ತ್ಯಾಜ್ಯ ನೀರಿನ ದುರ್ವಾಸನೆಯನ್ನು ಸಹಿಸಿಕೊಂಡು ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ.

ಕಾರ್ಕಳದ ಕೆನರಾ ಬ್ಯಾಂಕ್‍ನಲ್ಲಿ ಅಗ್ನಿ ಅನಾಹುತ

ಕಾರ್ಕಳದ ಅನಂತ ಪದ್ಮನಾಭ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಕಾರ್ಕಳ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ತ್ವರಿತ ಗತಿಯಲ್ಲಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಗತ್ಯತೆ ಉಳ್ಳ ದಾಖಲೆಗಳು ಹಾಗೂ ಸೂತ್ತುಗಳು ಹಾನಿಯಾಗಿಲ್ಲ. ಗ್ರಾಹಕರು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಬ್ಯಾಂಕ್ ಪ್ರಬಂಧಕರು ತಿಳಿಸಿದ್ದಾರೆ.

ಮಣಿಪುರ ಜನಾಂಗೀಯ ಸಂಘರ್ಷ ನಿಯಂತ್ರಿಸಲು ಕೇಂದ್ರ ಸರಕಾರ ವಿಫಲ : ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಹೇಳಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷ ಮತ್ತು ಒಂದು ನಿರ್ದಿಷ್ಟ ಪಂಗಡದ ಮಹಿಳೆಯರ ಮೇಲಿನ ಅಮಾನವೀಯ ಲೈಂಗಿಕ ದೌರ್ಜನ್ಯ ವಿಶ್ವದ ಎದುರು ದೇಶ ತಲೆ ತಗ್ಗಿಸುವಂತೆ ಮಾಡಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಅಲ್ಲಿನ ರಾಜ್ಯ ಸರಕಾರದ ಬೇಜವಾಬ್ಧಾರಿ ನಡೆಯೇ ನೇರ ಕಾರಣ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಹೇಳಿದ್ದಾರೆ. ಅವರು ಕಾರ್ಕಳದ ಕೇಂದ್ರ ಬಸ್ ನಿಲ್ದಾಣದ ಬಳಿ, ಮಣಿಪುರದಲ್ಲಿ ಮಹಿಳೆಯರ ಮೇಲೆ

ಕಾರ್ಕಳ ಬಸ್ ನಿಲ್ದಾಣ : ಒಳಚರಂಡಿ ನೀರು ಸೋರಿಕೆಯಾಗಿ ಜನಸಾಮಾನ್ಯರಿಗೆ ತೊಂದರೆ

ಕಾರ್ಕಳ ಪುರಸಭೆ ವ್ಯಾಪ್ತಿಯ ಬಂಡಿಮಠ ಬಸ್ಸು ನಿಲ್ದಾಣದ ಎದುರು ಒಳಚರಂಡಿಯ ಮಲಿನ ನೀರು ಸೋರಿಕೆಯಾಗಿ ಉಂಟಾಗುವ ಅವಾಂತರಗಳು ಹೇಳತಿರದು. ಇಲ್ಲಿಯ ಕೊಳಚೆ ನೀರು ಸೋರಿಕೆ ಹೊರಚಿಮ್ಮಿ ರಸ್ತೆ ಮೇಲೆ ಹರಿಯುತ್ತಿರುವುದಲ್ಲದೆ ಪರಿಸರ ಮಾಲಿನ್ಯಗೊಂಡು ಸುತ್ತಮುತ್ತಲಿನ ಪ್ರದೇಶ ಗಬ್ಬೆದ್ದು ನಾರುತಿದೆ. ಬಂಡಿಮಠ ಬಸ್ ನಿಲ್ದಾಣ ಮುಂಭಾಗ ಹೆದ್ದಾರಿಯಲ್ಲಿ ಎರಡು ಕಡೆ ಚರಂಡಿಯಿಂದ ನೀರು ಸೋರಿಕೆಯಾಗುತ್ತದೆ. ಹೆದ್ದಾರಿಯಲ್ಲಿ ಸಹಸ್ರಾರು ವಾಹನಗಳು ನಿತ್ಯ ಓಡಾಟ ನಡೆಸುತ್ತವೆ.