ವಕೀಲರಾದ ಕೆ ಹರೀಶ್ ಅಧಿಕಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿವೇಕಾನಂದ ಶೆಣೈ, ಪ್ರವೀಣ್ ಕಾಂತರಗೋಳಿ , ದಿವ್ಯಾ ನಾಯಕ್, ರಾಘವ ಮುದ್ರಾಡಿ ಉಪಸ್ಥಿತರಿದ್ದರು.
ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಮತಾ ಹೆಗ್ಡೆ ಮಂಗಳವಾರದಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಅಖಿಲ ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷೆ ವೇದಾವತಿ ಹೆಗ್ಡೆ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಮೋದಿ ಬ್ರಿಗೇಡ್ ಯುವ ಘಟಕದ
ಕಾರ್ಕಳ, ಈ ಸಲದ ಚುನಾವಣೆ ಕೌರವರ ಹಾಗೂ ಪಾಂಡವರ ಯುದ್ಧ, ಸತ್ಯದ ಮತ್ತು ಸುಳ್ಳಿನ ನಡುವಿನ ಯುದ್ಧ ವಾಗಿದೆ. ಈ ಸಲದ ಚುನಾವಣೆಯಲ್ಲಿ ಸತ್ಯಕ್ಕೆ ಜಯ ಸಲ್ಲುವುದು ಗ್ಯಾರಂಟಿಯಾಗಿರುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬರುವುದು ಖಚಿತ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಳು ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳದಲ್ಲಿ ತಮ್ಮ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಎಚ್.
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಹಾಗೂ ಸಾವಿತ್ರಿ ಸತ್ಯವಾನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಮಮತಾ ಹೆಗ್ಡೆ ರವರು ಕಾರ್ಕಳ ತಾಲೂಕಿನ ಎಣ್ಣೆ ಹೊಳೆಯ ಸುಮಾರು 138 ಕೋಟಿಯ ಕಳಪೆ ಕಾಮಗಾರಿಯನ್ನು ವೀಕ್ಷಿಸಿದರು.ಎಣ್ಣೆ ಹೊಳೆಯ ಅಣೆಕಟ್ಟಿನ ಕಾಮಗಾರಿಯು ಕಳಪೆ ದರ್ಜೆಯ ಕಾಮಗಾರಿಯಾಗಿದ್ದು , ತೆರಿಗೆದಾರರ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದು ಮಮತಾ ಹೆಗ್ಡೆ ಅವರು ದೂರಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ಖರ್ಚು ಮಾಡಿದರೂ ಕಾರ್ಕಳಕ್ಕೆ ಕುಡಿಯುವ
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಕಳ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮಮತಾ ಹೆಗ್ಡೆ ಅವರು ಚುನಾವಣಾ
ಕಾರ್ಕಳ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾದ ನಂತರ ಕಾರ್ಕಳ ತಾಲೂಕಿನ ಗಡಿಭಾಗದಲ್ಲಿ ಅಕ್ರಮವನ್ನು ತಡೆಗಟ್ಟಲು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಚುನಾವಣಾ ಆಯೋಗದಿಂದ ಬಂದ ಕಟ್ಟುನಿಟ್ಟಿನ ಆದೇಶದ ಬಂದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನ ಗಡಿಭಾಗವಾದ ಸಾಣೂರಿನಲ್ಲಿ ನಗರ ಠಾಣ ಸಿಬ್ಬಂದಿಗಳಾದ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಪ್ರತಿಯೊಂದು ವಾಹನವನ್ನು ನಿಲ್ಲಿಸಿ ಕಟ್ಟುನಿಟ್ಟಿನ ತಪಾಸಣೆಯನ್ನು ಮಾಡುತ್ತಿದ್ದರು. ಕಾರ್ಕಳ ನಗರ ಠಾಣಾ
ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾರ್ಕಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಕಾರ್ಕಳ ಗ್ರಾಮಾಂತರ ಎಸ್‍ಐ ತೇಜಸ್ವಿ ಅವರಿಗೆ ಮನವಿ ಸಲ್ಲಿಸಿತು.ಇತ್ತೀಚೆಗೆ ಕೆಲವು ವ್ಯಕ್ತಿಗಳು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಹೆಸರು ಹೇಳಿ ಹಣ ಸಂಗ್ರಹಿಸುವ, ವಸೂಲಿ ಮಾಡುವ ಹಾಗೂ ಬೆದರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿವುದು ಸಂಘದ ಗಮನಕ್ಕೆ ಬಂದಿದೆ. ಯಾವುದೇ
ಕಾರ್ಕಳ ಬಂಗ್ಲೆ ಗುಡ್ಡೆ ಬಳಿ, ಖಾಸಗಿ ಆಸ್ಪತ್ರೆಯ ರೋಗಿಗಳನ್ನು ತಮ್ಮ ಮನೆಗೆ ಬಿಡಲು ಕಾರ್ಕಳದಿಂದ ಕಡ್ತಲಕ್ಕೆ ಹೋಗುವಾಗ ಬಂಗ್ಲೆ ಗುಡ್ಡೆ ಬಳಿ ಅತಿ ವೇಗದಿಂದ ಬರುತ್ತಿದ್ದ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ಆಂಬುಲೆನ್ಸ್ ಮಾರ್ಗದಲ್ಲಿ ಪಲ್ಟಿ ಯಾದ ಘಟನೆ ನಡೆದಿದೆ. ಈ ವೇಳೆಯಲ್ಲಿ ಅಂಬುಲೆನ್ಸಿನ ಒಳಗಿದ್ದ ರೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳದ ಮಣಿಪಾಲ ರೋಟರಿ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ಎದುರಿನಿಂದ ವೇಗವಾಗಿ
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿನ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ನಿನ್ನೆ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಿಂದ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ ತೋಟಕ್ಕೆ ಬಳಸುತ್ತಿದ್ದ ಪಂಪ್‍ಶೆಡ್ ಕೂಡ ಸುಟ್ಟು ಕರಕಲಾಗಿದೆ. ಅಲ್ಲದೇ ತೆಂಗು, ಹಲಸು, ಮಾವಿನ ಮರಗಳು ಕೂಡಾ ಬೆಂಕಿಗೆ ಆಹುತಿಯಾಗಿದೆ. ಮೇಯಲು ಕಟ್ಟಿದ್ದ ಹಲವು ಜಾನುವಾರುಗಳನ್ನು ಕೂಡಲೇ ಸ್ಥಳೀಯರು



























