Home Posts tagged #Karnataka Tulu sahitya Academy

ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ

ರಾಜ್ಯ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ನೇಮಿಸಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ:ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮವನ್ನು ನಗರದ ತುಳು ಭವನದಲ್ಲಿ ಆಯೋಜಿಸಲಾಗಿತ್ತು. ಮಂಗಳೂರಿನ ಉರ್ವಸ್ಟೋರಿನ ತುಳಭವನದಲ್ಲಿ ಸಿರಿ ಚಾವಡಿಯಲ್ಲಿ ನಾಟಕಕಾರ , ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮದ ಪ್ರಯಕ್ತ ಅವರ ಭಾವಚಿತ್ರಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು. ಇನ್ನು ಸಭಾ ಕಾರ್ಯಕ್ರಮವನ್ನು ಪ್ರಪುಲ್ಲ

ತುಳು ಭವನದಲ್ಲಿ ತುಳು ಹಾಗೂ ಕನ್ನಡ ಚಲನಚಿತ್ರ ನಟನಾ ತರಗತಿ ಉದ್ಘಾಟನೆ

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸಹಭಾಗಿತ್ವದಲ್ಲಿ ಲೆನ್ಸ್ ಕ್ಯಾಪ್ ಪಿಕ್ಚರ್ಸ್ ನಡೆಸುವ ತುಳು ಹಾಗೂ ಕನ್ನಡ ಚಲನಚಿತ್ರ ನಟನಾ ತರಗತಿ ಸೆ.5ರಂದು ತುಳು ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ತುಳು ಹಾಗೂ ಕನ್ನಡ ಭಾಷೆಯಲ್ಲಿ ಈ ನಟನಾ ತರಗತಿ ನಡೆಯಲಿದ್ದು ತುಳುವಿಗೆ ಆದ್ಯತೆ ನೀಡಲಾಗುತ್ತದೆ ಎಂದರು.ಮೂರು ತಿಂಗಳ ಕಾಲ