Home Posts tagged #karnataka (Page 2)

ಮತದಾನ ಮಾಡದವರಿಗೆ ರಾಜ್ಯದ ಕೆಲವು ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ

ಮತದಾನ ಮಾಡದವರಿಗೆ ರಾಜ್ಯದ ಕೆಲವು ಪ್ರವಾಸಿ ತಾಣಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮತದಾನ ದಿನದ ಮೊದಲೇ ಕೆಲವು ಸ್ಥಳಗಳಲ್ಲಿ ಮೇ 10ರಂದು ಪ್ರವೇಶವಿಲ್ಲ ಎಂಬ ಬೋರ್ಡ್‌ ಲಗತ್ತಿಸಲಾಗಿದ್ದು, ಪ್ರಮುಖವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆಯಿಂದಲೇ ಇಲ್ಲಿ ಪ್ರವೇಶಕ್ಕೆ

ಚುನಾವಣೆ ಹಿನ್ನೆಲೆ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ತೀವ್ರ ತಪಾಸಣೆ

ಮಂಜೇಶ್ವರ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇರಳ ಪೆÇಲೀಸರು ಕೂಡಾ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.ಕರ್ನಾಟಕ ಭಾಗಕ್ಕೆ ವ್ಯಾಪಾರ, ಚಿಕಿತ್ಸೆ, ಶಿಕ್ಷಣ ಪ್ರವೇಶ ಸೇರಿದಂತೆ ವಿವಿದ ಉದ್ದೇಶಗಳಿಗಾಗಿ ಅನೇಕ ಜನರು ಕೇರಳದಿಂದ ಗಡಿ ದಾಟಿರವರು ಮರಳಿ ಬರುವಾಗ ದೊಡ್ಡ ಮೊತ್ತದ ಹಣ ಜೊತೆಯಾಗಿದ್ದರೆ ಸಾಕಷ್ಟು ದಾಖಲೆಗಳನ್ನು ಹೊಂದಿರಬೇಕು. ದಾಖಲೆಗಳ ಕೊರತೆಯಿಂದ

ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆ ಮೂಲಕ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.

ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ : ಡಿ.14 ಎರಡು ರಾಜ್ಯದ ಮುಖ್ಯಮಂತ್ರಿ ಗಳ ಬೇಟಿಯಾಗಲಿರುವ ಗೃಹ ಸಚಿವ ಅಮಿತ್ ಶಾ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‍ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಶಾ ಅವರನ್ನು ಭೇಟಿ ಮಾಡಿದ ನಂತರ ಶಿರೂರಿನ ಲೋಕಸಭಾ ಸದಸ್ಯ ಕೋಲ್ಹೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ

ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಹಿನ್ನೆಲೆ : ಗಡಿ ಪ್ರದೇಶ ತಲಪಾಡಿಯಲ್ಲಿ ಪೊಲೀಸರಿಂದ ತಪಾಸಣೆ

ಉಳ್ಳಾಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಕಡೆಗೆ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು , ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಕೇರಳ ಪೊಲೀಸರು ತಪಾಸಣೆ ಆರಂಬಿಸಿದ್ದಾರೆ,. ಕೇರಳ – ಕರ್ನಾಟಕ ಗಡಿಭಾಗವಾಗಿರುವ ತಲಪಾಡಿ, ದೇವಿಪುರ, ನೆತ್ತಿಲಪದವು ಬಳಿ ತಪಾಸಣೆ ನಡೆಸುತ್ತಿದ್ದು, ನೆತ್ತಿಲಪದವು

ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸತಾಯಿಸಬಾರದು ಲೋಕಾಯುಕ್ತ ಉಪ ಅಧೀಕ್ಷಕ ಚೆಲುವರಾಜು ಹೇಳಿಕೆ

ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್‌ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಚಾರ ರಹಿತ ಕೆಲಸ ಮಾಡಬೇಕು, ಲಂಚ

ನಟ ಪುನೀತ್ ರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಾಗಿದೆ.ಆರೋಗ್ಯದಲ್ಲಿ ಏರುಪೇರಾದ ಕಾರಣ ಪುನೀತ್ ರಾಜ್ ಕುಮಾರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಪುನೀತ್ ರಾಜ್ ಕುಮರ್ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟನಿಗೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪುನೀರ್ ರಾಜ್ ಕುಮಾರ್ ಅವರಿಗೆ ಇಸಿಜಿ

ಪುತ್ತೂರು ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಗೀತ ಗಾಯನ

ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ

ಕಾರ್ಕಳದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ

ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,

ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠರವರಿಗೆ ಚಿನ್ನದ ಪದಕ

ಬಂಟ್ವಾಳ: ವಿಶಾಖಪಟ್ಟಂನಲ್ಲಿ ಅ.21 ಮತ್ತು 22 ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಹಾಗೂ ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ಅಂತರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವೆನಿಲ್ಲಾ ಮಣಿಕಂಠ ಅವರು ಪ್ರಸಕ್ತ ಮಂಗಳೂರಿನ ಎನ್‌ಐಟಿಕೆಯಲ್ಲಿ ಎಂಟೆಕ್ ವ್ಯಾಸಂಗ ಮಾಡಿತ್ತಿದ್ದು ರಾಜೇಶ್