Home Posts tagged #karnataka (Page 2)

ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂವಾದ ಕಾರ್ಯಕ್ರಮ

ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ

ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ

ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್‌ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್‌ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿದ್ದಾರೆ. ಬಳಿಕ

ನರಗುಂದ ನವಲಗುಂದ ರೈತ ಬಂಡಾಯದ ಸ್ಮರಣೆ : ರೈತ ಸಮಾವೇಶ

ನರಗುಂದ ನವಲಗುಂದ ರೈತ ಬಂಡಾಯದ 41 ನೇ ವರ್ಷಾಚರಣೆ ಹಾಗೂ ರೈತ ಹುತಾತ್ಮರ ದಿನಾಚಣೆ ಹಾಗೂ ರೈತ ಸಮಾವೇಶ ಗದಗ ಜಿಲ್ಲೆಯ ನರಗುಂದದಲ್ಲಿ ನಡೆಯಿತು. ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಮೀಪ , ರೈತ ನಾಯಕ ದಿವಂಗತ ಬಾಬಾ ಗೌಡ ಪಾಟೀಲ್ ವೇದಿಕೆಯಲ್ಲಿ ಸಮಾವೇಶ ನಡೆಯಿತು. ಸಮಾವೇಶಕ್ಕಿಂತ ಮೊದಲು ಹುತಾತ್ಮ ರೈತ ಹೋರಾಟಗಾರರ ಪ್ರತಿಮೆಗೆ ರೈತ ಮುಖಂಡರು ಗೌರವ ಸಲ್ಲಿಸಿದರು. ಬಳಿಕ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತ ಸಮಾವೇಶ ನಡೆಯಿತು. ಸಮಾವೇಶದಲ್ಲಿ ದಿಲ್ಲಿ ರೈತ ಹೋರಾಟದ

ಮಂಗಳೂರಿನ ಅಗ್ನಿಶಾಮಕ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.   ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪದಕ ಪ್ರದಾನ ಮಾಡಿದರು. ಚಂದ್ರಹಾಸ್

ಉಡುಪಿಯಲ್ಲಿ ಆ.14ರಂದು ಮೆಘಾ ಲೋಕ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ನಟೇಶ್ ಆರ್. ಅವರು ತಿಳಿಸಿದ್ದಾರೆ. ಅವರು

ಬಂಟ್ವಾಳದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ

ಬಂಟ್ವಾಳ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೇರಮಜಲು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಶುಕ್ರವಾರ ಮೇರಮಜಲಿನ ಶ್ರಿ ರಾಜೇಶ್ವರೀ ಸಭಾಂಗಣದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಕಾರ್ಮಿಕರಿಗೆ ಕಿಟ್ ವಿತರಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರ ಕೋವಿಡ್ ಸಂಕಷ್ಟ ಕಾಲದಲ್ಲಿ ಬಡ ಕಾರ್ಮಿಕರಿಗೆ ಆಹಾರದ ಕಿಟ್

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದು, ಹರಿ ಬಾಬು ಕಂಬಂಪತಿ ಅವರನ್ನು ಮಿಜೋರಾಂನ

ಪುತ್ತೂರಿನಲ್ಲಿ ‘ಭತ್ತ ಬೆಳೆಯೋಣ ಬದುಕು ಕಟ್ಟೋಣ’ ಆಂದೋಲನ

ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಪೂರ್ಣ ಪ್ರಮಾಣದಲ್ಲಿ ಭತ್ತದ ಬೇಸಾಯದ ಜಿಲ್ಲೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಬೇಸಾಯವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಶಯದಂತೆ ಮತ್ತೆ ದ.ಕ. ಜಿಲ್ಲೆಯನ್ನು ಬೇಸಾಯ ವೈಭವದ ಜಿಲ್ಲೆ ಮಾಡುವ ಉದ್ದೇಶ ಇಟ್ಟುಕೊಂಡು ಭತ್ತ ಬೆಳೆಯೋಣ.. ಬದುಕು ಕಟ್ಟೋಣ ಎಂಬ ಆಂದೋಲನ ಆರಂಭಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ