ಬಂಟ್ವಾಳ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೇರಮಜಲು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಶುಕ್ರವಾರ ಮೇರಮಜಲಿನ ಶ್ರಿ ರಾಜೇಶ್ವರೀ ಸಭಾಂಗಣದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಕಾರ್ಮಿಕರಿಗೆ ಕಿಟ್ ವಿತರಿಸಿ
ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಪ್ರಮುಖ ಪುನಾರಚನೆಯಲ್ಲಿ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ನೇಮಿಸಲಾಯಿತು. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದ್ದರೆ, ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದು, ಹರಿ ಬಾಬು ಕಂಬಂಪತಿ ಅವರನ್ನು ಮಿಜೋರಾಂನ
ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಪೂರ್ಣ ಪ್ರಮಾಣದಲ್ಲಿ ಭತ್ತದ ಬೇಸಾಯದ ಜಿಲ್ಲೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಬೇಸಾಯವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಶಯದಂತೆ ಮತ್ತೆ ದ.ಕ. ಜಿಲ್ಲೆಯನ್ನು ಬೇಸಾಯ ವೈಭವದ ಜಿಲ್ಲೆ ಮಾಡುವ ಉದ್ದೇಶ ಇಟ್ಟುಕೊಂಡು ಭತ್ತ ಬೆಳೆಯೋಣ.. ಬದುಕು ಕಟ್ಟೋಣ ಎಂಬ ಆಂದೋಲನ ಆರಂಭಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ

















