ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಮೇ. 29ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆಯನ್ನು ಹೊರಡಿಸಿದೆ. ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 7ರ ತನಕ ಇರಲಿದ್ದು, ಅಕ್ಟೋಬರ್ 8ರಿಂದ ಅಕ್ಟೋಬರ್ 24ರ ತನಕ ದಸರಾ ರಜೆ ಇರಲಿದೆ.ಇನ್ನು ಎರಡನೇ ಅವಧಿ ಅಕ್ಟೋಬರ್ 25ರಿಂದ 2024ರ ಎಪ್ರಿಲ್
ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ. ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು. ಜತೆಗೆ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು.