ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಹಾಗೂ 8 ವಾರ್ಡುಗಳಲ್ಲಿರುವ ಮಂಜೇಶ್ವರ ರಾಗಂ ಜಂಕ್ಷನ್‍ನಿಂದ ಸಿರಾಜುಲ್ ಹುದಾ ಶಾಲೆಯಲ್ಲಿಂದ ರಸ್ತೆ ಸಂಪೂರ್ಣ ಹದಗೆಟ್ಟಿದು,್ದ ಕಳೆದ 15 ವರ್ಷಗಳಿಂದ ಜನಪ್ರತಿನಿಧಿಗಳಾಗಲೀ ಅಧಿಕಾರಿಗಳಾಗಲೀ ಇತ್ತ ಕಡೆ ತಿರುಗಿಯೂ ನೋಡದೆ ಇರುವುದು ಭಾರೀ ಪ್ರತಿಭಟನೆಗೆ ಕಾರಣವಾಗಿದೆ. ಮಳೆ ಸ್ವಲ್ಪ ಸುರಿದರೆ ಸಾಕು..
ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿಯಿಂದ ಕೊಡಮಾಡುವ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನಟಿ ರೂಪ ವರ್ಕಾಡಿ ಅವರು ಭಾಜನರಾಗಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತ ಶ್ರಮಿಸುತ್ತಿರುವ ಗಡಿನಾಡ ಸಾಹಿತ್ಯ. ಸಾಂಸ್ಕøತಿಕ ಅಕಾಡೆಮಿ ವತಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕಾಸರಗೋಡಿನಲ್ಲಿ ನಡೆಯಿತು. ಚಲನಚಿತ್ರ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನಟಿ ರೂಪ ವರ್ಕಾಡಿ ಅವರು
ಮಂಜೇಶ್ವರ ಸಮೀಪದ ಕುಂಜತ್ತೂರಿನ ದಾರುಸ್ಸಲಾಂ ಸಲಫಿ ಮಸೀದಿ ತಿರುವಿನಲ್ಲಿರುವ ಖಾಸಗಿ ಅಪಾರ್ಟ್ಮೆಂಟ್‍ನಿಂದ ಶೌಚಾಲಯದ ನೀರು ಸಾರ್ವಜನಿಕ ಸ್ಥಳಕ್ಕೆ ಹಾಗೂ ಸಮೀಪದ ರಸ್ತೆಗೆ ಹರಿದು ಬರುತಿದ್ದು, ಪರಿಸರವೆಲ್ಲ ದುರ್ವಾಸನೆ ಆವರಿಸಿದೆ. ಪರಿಸರವಾಸಿಗಳು ಹಾಗೂ ಈ ದಾರಿಯಿಂದ ಸಾಗುವವರು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ಎದುರಾಗಿದೆ. ಈ ದಾರಿಯಾಗಿ ದಿನನಿತ್ಯ ಶಾಲೆಗೂ ಮದ್ರಸಕ್ಕೂ ನೂರಾರು ವಿದ್ಯಾರ್ಥಿಗಳು ಈ ಶೌಚಾಲಯದ ನೀರನ್ನು ದಾಟಿಕೊಂಡೇ ಸಾಗಬೇಕಾದ
ಮಂಜೇಶ್ವರದ ಕುನ್ನಿಲ್ ನೋಬಲ್ ಫೌಂಡೇಶನ್‍ನ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಡ್ರಗ್ಸ್ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಸಂಘಟನೆಯ ಅಧ್ಯಕ್ಷ ಝಕರಿಯ್ಯ ಶಾಲಿಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ರಾಜೇಶ್ ತೆರುವತ್ತ್ ಪೀಡಿಗಯಿಲ್ ಉದ್ಘಾಟಿಸಿದರು. ಮಂಜೇಶ್ವರ ಠಾಣೆಯ ಜನ ಮೈತ್ರಿ ಪೊಲೀಸ್ ಅಧಿಕಾರಿಗಳಾದ ಮಧು ಕರಕಡವತ್ ಹಾಗೂ ಅನೂಪ್
ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ , ಪ್ರೇರಣಾ ಜಿಲ್ಲಾ ಕಾರ್ಯಾಲಯ ಹೊಸಂಗಡಿ ಇವರ ಸಹಯೋಗದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿಯು ಅಕ್ಟೋಬರ್ 1ರಂದು ಬೆಳಿಗ್ಗೆ 10.30 ಕ್ಕೆ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಬೆಳಿಗ್ಗೆ ೮.೩೦ ರಿಂದ ವಿವಿದ ಭಜನಾ ತಂಡಗಳಿಂದ ಕುಣಿತ ಭಜನೆ ಮತ್ತು ನಂತರ ೧೦.೩೦ರಿಂz ನಡೆಯಲಿರುವ ಸಭಾಕಾರ್ಯಕ್ರಮವನ್ನು ಧಾರ್ಮಿಕ ಮುಂದಾಳು ರವೀಶ್ ತಂತ್ರಿ
ಮಂಜೇಶ್ವರ : ಬದಿಯಡ್ಕ ಪಳ್ಳತ್ತಡ್ಕದಲ್ಲಿ ಆಟೋ ರಿಕ್ಷಾವೊಂದಕ್ಕೆ ಶಾಲಾ ಬಸ್‌ಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿದ್ದ ಮೊಗ್ರಾಲ್ ಮೂಲದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಪುತ್ತೂರು ಕಡವತ್ತ್ ನಿವಾಸಿಗಳಾದ ಆಟೋ ಚಾಲಕ ಅಬ್ದುಲ್ ರವೂಫ್, ಬೀಫಾತಿಮಾ, ನಬೀಸಾ, ಬೀಫಾತಿಮಾ ಮೊಗರ್ ಮತ್ತು ಉಮ್ಮಾಲಿಮಾ ಸಾವನ್ನಪ್ಪಿದ ದುರ್ದೈವಿಗಳು. ವಿದ್ಯಾರ್ಥಿಗಳನ್ನು ಇಳಿಸಿ ಹಿಂತಿರುಗುತ್ತಿದ್ದ ಶಾಲಾ ಬಸ್ ಅಪಘಾತಕ್ಕೀಡಾಗಿದೆ.ಮೂವರು
ಬಂದ್ಯೋಡ್ ನ ಅಡ್ಕ ವೀರನಗರ ಜನನಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಚತುರ್ಥಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆದವು. ಹಗ್ಗ ಜಗ್ಗಾಟ ದಲ್ಲಿ ಶಿವ ಶಕ್ತಿ ಶಿರಿಯ ಈ ತಂಡಕ್ಕೆ ಪ್ರಥಮ ಬಹುಮಾನ ಹಾಗೂ ಪಿ ಎಫ್ ಸಿ ಪರಂಕಿಲ ತಂಡಕ್ಕೆ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ ವೀರನಗರ ಅಡ್ಕ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಸ್ಪರ್ಧಾ ಕಾರ್ಯಕ್ರಮಗಳು ನಡೆದವು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿ
ಮಂಜೇಶ್ವರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆಯುತ್ತಿದ್ದು ಇದರಿಂದ ಜನತೆ ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದ್ದಾರೆ. ಮಂಜೇಶ್ವರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡುವವರ ವಿರುದ್ಧ ಹಲವು ರೀತಿಯ ವಿಭಿನ್ನವಾದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತಿದ್ದರೂ ಯಾವುದೂ ಫಲಪ್ರದವಾಗುತ್ತಿರಲಿಲ್ಲ. ಈ ನಿಟ್ಟಿನಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿರುವ
ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ ೪೪ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯುತ್ತಿದೆ. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.
ಬಿಲ್ಲವ ಸೇವಾ ಸಂಘ(ರಿ ) ಕರಂದಕ್ಕಾಡ್ ಕಾಸರಗೋಡು, ಇದರ ಆಶ್ರಯದಲ್ಲಿ 169ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಶ್ರೀ ನಾರಾಯಣ ಗುರು ಸಭಾ ಮಂಟಪದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸಭೆಯಲ್ಲಿ ಶ್ರೀ ಕೇಶವ ಎ ಅಧ್ಯಕ್ಷತೆ ವಹಿಸಿದರು, ಹಿರಿಯ ವ್ಯಕ್ತಿತ್ವ ವಾದ ಸಂತನಡ್ಕ ತರವಾಡಿನ, ಬಾಡೂರ್ ಜಟಾದಾರಿ ದೈವದ ಪೂಜಾರಿಯಾದ ಕರಿಯಪ್ಪ ಪೂಜಾರಿ ಅವರನ್ನು ಫಲ ಪುಷ್ಪಗಳನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಅದೇ ರೀತಿ ರಮಾನಂದ ಬಂಗೇರ, ಕೊರಗಪ್ಪ ಪೂಜಾರಿ, ಬಾಬು