Home Posts tagged #kaupu

ಕಾಪು: ಬೈಕ್ ಸಹಿತ ಕಳವು ಆರೋಪಿ ಸೆರೆ

ಕಾಪು ರೆಸಿಡೆನ್ಸಿ ಕಟ್ಟಡದ ಬಳಿ ನಿಲ್ಲಿಸಲಾಗಿದ್ದ ಬೈಕ್ ನಾಪತ್ತೆಯಾದ ಬಗ್ಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿ ನೀಡಿದ ದೂರಿನನ್ವಯ ತನಿಖೆ ನಡೆಸಿದ ಕಾಪು ಪೊಲೀಸರು ಬೈಕ್ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಳೂರು ನಿವಾಸಿ ಹಳೆ ಆರೋಪಿ ಸೂರಜ್ ಕೋಟ್ಯಾನ್ (೩೧), ಉತ್ತರ ಪ್ರದೇಶ ಮೂಲದ ವ್ಯಕ್ತಿ ಶಾರುಖ್ ಹಸನ್ ಎಂಬವರು ಅನೂಪ್ ಕುಮಾರ್ ಎಂಬವರಿಗೆ

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಉಚ್ಚಿಲ ರಾಘವೇಂದ್ರ ಮಠ, ಕಳತ್ತೂರು ರಾಘವೇಂದ್ರ ಮಠ ಸೇರಿದಂತೆ ತಾಲೂಕಿನ ವಿವಿಧೆÉಡೆ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಅರ್ಚಕರಾದ ಜನಾರ್ದನ ತಂತ್ರಿಗಳ ಸಹಕಾರದಲ್ಲಿ ರಾಘವೇಂದ್ರ ಶ್ರೀಗಳ ಆರಾಧನಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು ಜರಗಿತು. ಆರಾಧನೋತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ,

ಕಾಪು: ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‍ಗೆ ಪ್ರಾರ್ಥಿಸಿ ದಂಡತೀರ್ಥ ಮಠದಲ್ಲಿ ನವಗ್ರಹ ಯಾಗ

ಇಸ್ರೋ ನೇತೃತ್ವದಲ್ಲಿ ಉಡಾವಣೆಯಾದ ಚಂದ್ರಯಾನ – 3 ಇದರ ಯಶಸ್ವಿ ಕಕ್ಷೆ ತಲುಪುವಿಕೆಗೆ ಆಶಿಸಿ ಮತ್ತು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಪರ್ಯಾಯ ಉಡುಪಿ ಶ್ರೀ ಕೃಷ್ಣಾಪುರ ಮಠದ ಆಡಳಿತಕ್ಕೊಳಪಟ್ಟಿರುವ ಕಾಪು ದಂಡತೀರ್ಥ ಮಠದಲ್ಲಿ ನವಗ್ರಹ ಯಾಗ ಪುರಸ್ಸರ ಚಂದ್ರಶಾಂತಿ ನಡೆಯಿತು. ದಂಡತೀರ್ಥ ಮಠದ ಆಡಳಿತ ಮೊಕ್ತೇಸರ ಡಾ. ಸೀತಾರಾಮ್ ಭಟ್ ನೇತೃತ್ವದಲ್ಲಿ, ವೇದ ಮೂರ್ತಿ ನಾಗಭೂಷಣ್ ಭಟ್, ವಾಗೀಶ್ ಭಟ್, ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಭಟ್ ಪೌರೋಹಿತ್ವದಲ್ಲಿ

ಕಾಪುವಿನಲ್ಲಿ ಜೀವಂತ ನಾಗಗಳ ಆರಾಧನೆ..!

ಕಾಪು ತಾಲೂಕಿನ ಮಜೂರು-ಮಲ್ಲಾರು ಗೋವರ್ಧನ ಭಟ್ ಅವರ ಮನೆಯಲ್ಲಿ ಮನೆಯವರೆಲ್ಲರೂ ಜತೆ ಸೇರಿ ಜೀವಂತ ನಾಗರ ಹಾವಿಗೆ ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಗಾಯಗೊಂಡ ನಾಗರ ಹಾವುಗಳನ್ನು ಮನೆಗೆ ತಂದು ಶುಶ್ರೂಷೆ ನೀಡಿ, ಆರೈಕೆ ಮಾಡುವ ಉರಗ ಪ್ರೇಮಿ ಮಜೂರು ಗೋವರ್ಧನ ಭಟ್ ಅವರು ಪ್ರತೀ ವರ್ಷ ತಮ್ಮ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವಿಗೆ ತನು ಎರೆದು, ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸುತ್ತಾರೆ. ಈ ಬಾರಿ ಮನೆಯಲ್ಲಿ ಎರಡು ನಾಗರ

ಕಾಪು : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ

ಪುರಸಭಾ ವ್ಯಾಪ್ತಿಯ ತೆಂಕಪೇಟೆಯಲ್ಲಿ ಮನೆಯೊಂದು ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕಾಪು ತೆಂಕಪೇಟೆ ನಿವಾಸಿ ವಿಜಯಲಕ್ಷ್ಮಿ ಕಾಮತ್ ಅವರಿಗೆ ಸೇರಿದ ಹಳೆ ಹೆಂಚಿನಮನೆ ಭಾರೀ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲವಾಗಿದ್ದು ಇದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ .

ಉಡುಪಿ : ವಿದ್ಯಾರ್ಥಿನಿ ನಿಖಿತ ಸಾವು ಪ್ರಕರಣ : ಆಸ್ಪತ್ರೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಖಿತ ಎಂಬ ವಿದ್ಯಾರ್ಥಿನಿಯ ಸಾವಿಗೆ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ನಿಖಿತ ಮೃತ ಪಟ್ಟಿದ್ದಾರೆ. ನಿಖಿತ ಸಾವು ಪ್ರಕರಣ ವಿಚಾರವಾಗಿ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ

ಕಾಪುವಿನಲ್ಲಿ ಬಿಜೆಪಿ ಪಕ್ಷ ಕಛೇರಿ ಉದ್ಘಾಟನೆ

ಕಾಪುವಿನಲ್ಲಿ ಬಿಜೆಪಿ ಪಕ್ಷದ ಕಛೇರಿಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಛೇರಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಮಾಜಿ ಶಾಸಕ ಲಾಲಾಜಿ ಮೆಂಡನ್ ಕಛೇರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ನವೀನ್ ಮುಂತಾದ ಮುಖಂಡರಿದ್ದರು.

ಕಾಪು : ಕಡಲು ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮದೊಂದಿಗೆ

ಕಾಪು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿ ಉದ್ಘಾಟನೆ

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿಯನ್ನು ಕಾಪು ಮಿನಿ ವಿಧಾನಸೌಧದ ಪ್ರಥಮ ಮಹಡಿಯಲ್ಲಿ ಬಿಜೆಪಿಯ ಹಿರಿಯ ಚೇತನ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಈಗಾಗಲೇ ಬಿಜೆಪಿ ಪಕ್ಷವು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಯಾವ ಬೂತ್‍ನಲ್ಲಿ ಕಡಿಮೆ ಮತ ಸಿಕ್ಕಿದೆಯೋ ಆ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ನಮ್ಮ ನ್ಯೂನ್ಯತೆಯನ್ನು ಸರಿ ಪಡಿಸಿಕೊಳ್ಳ ಬೇಕಾಗಿದೆ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು : ಬಲಿಗಾಗಿ ಕಾಯುತ್ತಿದೆ ಮರದ ಕಾಲು ಸೇತುವೆ

ಬೈಂದೂರಲ್ಲಿ ನಡೆದ ಕಹಿ ಘಟನೆ ಜನರ ಮನದಿಂದ ಇನ್ನೂ ಮಾಸಿಲ್ಲ…ಇದೀಗ ಅಂಥಹುದೇ ಮರದ ಕಾಲು ಸೇತುವೆಯೊಂದು ಎಲ್ಲೂರು ಪಡುಬೈಲಿನಲ್ಲಿ ಬಲಿಗಾಗಿ ಕಾದು ಕುಳಿತಂತ್ತಿದೆ. ಮರದ ಕಾಲು ಸೇತುವೆಯಲ್ಲಿ ಭಯದಲ್ಲೇ ಹೋಗಬೇಕಾದ ಪರಿಸ್ಥಿತಿ ಇದೆ. ಅಧಿಕಾರಿಗಳು ಎಚ್ಚೆತ್ತು ಕೂಡಲೇ ಸೂಕ್ತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಬೈಲಿನ ಜನರ ಬದುಕು ಒಂದು ರೀತಿಯಲ್ಲಿ ಗೃಹ ಬಂಧನವೇ ಸರಿ.