Home Posts tagged #kerala (Page 2)

ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ

ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ

Manjeshwara : ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮಂಜೇಶ್ವರ ರಾಗಂ ಜಂಕ್ಷನ್ ಸಮೀಪದ ಕುನ್ನಿಲ್ ಜುಮಾ ಮಸೀದಿ ರಸ್ತೆ ಸಮೀಪದಲ್ಲಿ ವಾಸವಾಗಿರುವ ದಿವಂಗತ ಸಯ್ಯದ್ ಹಾದಿ ತಂಘಲ್ ರವರ ಪುತ್ರ ಹಮೀದ್ ತಂಘಲ್ ಎಂಬವರ ಮನೆಗೆ ಹಿಂಬಾಗದ ಬಾಗಿಲನ್ನು ಮುರಿದು ನುಗ್ಗಿದ ಕಳ್ಳರು ಮನೆಯೊಳಗಿನ ಕಪಾಟನ್ನು ಮುರಿದು 60 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದನ್ನು ಕಳವುಗೈದಿದ್ದಾರೆ.ಹಮೀದ್ ತಂಘಲ್ ರವರು ಎರಡು ದಿವಸಕ್ಕೆ ಮೊದಲು ಕುಟುಂಬ ಸಮೇತರಾಗಿ ಏರ್ವಾಡಿಗೆ ತೆರಳಿದ್ದಾರೆನ್ನಲಾಗಿದೆ. ಗುರುವಾರ ಸಂಜೆ ಮರಳಿ ಬಂದಾಗ ಮನೆಯ

ಚುನಾವಣೆ ಹಿನ್ನೆಲೆ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ತೀವ್ರ ತಪಾಸಣೆ

ಮಂಜೇಶ್ವರ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇರಳ ಪೆÇಲೀಸರು ಕೂಡಾ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.ಕರ್ನಾಟಕ ಭಾಗಕ್ಕೆ ವ್ಯಾಪಾರ, ಚಿಕಿತ್ಸೆ, ಶಿಕ್ಷಣ ಪ್ರವೇಶ ಸೇರಿದಂತೆ ವಿವಿದ ಉದ್ದೇಶಗಳಿಗಾಗಿ ಅನೇಕ ಜನರು ಕೇರಳದಿಂದ ಗಡಿ ದಾಟಿರವರು ಮರಳಿ ಬರುವಾಗ ದೊಡ್ಡ ಮೊತ್ತದ ಹಣ ಜೊತೆಯಾಗಿದ್ದರೆ ಸಾಕಷ್ಟು ದಾಖಲೆಗಳನ್ನು ಹೊಂದಿರಬೇಕು. ದಾಖಲೆಗಳ ಕೊರತೆಯಿಂದ

ವಸತಿ ರಹಿತರಿಗೆ ಪ್ಲಾಟ್ ಹಸ್ತಾಂತರ : ಕೇರಳ ಸರ್ಕಾರದ ಮಹತ್ವದ ಯೋಜನೆ

ನಾಳೆ ರಾಜ್ಯದ ಮುಖ್ಯಮಂತ್ರಿ ಶ್ರೀ. ಪಿಣರಾಯಿ ವಿಜಯನ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ನಾಳೆಯಿಂದ ಮನೆ, ಜಮೀನು ಇಲ್ಲದ 174 ಕುಟುಂಬಗಳು ಸ್ವಂತ ಮನೆ ಹೊಂದಲಿದ್ದು, ಇವರಿಗೆ ಸ್ವಂತ ಮನೆ ಕನಸಾಗಿತ್ತು. ಈ ವಸತಿ ಸಮುಚ್ಚಯಗಳು ಕಣ್ಣೂರು ಜಿಲ್ಲೆಯ ಕದಂಪುರ್, ಕೊಲ್ಲಂ ಜಿಲ್ಲೆಯ ಪುನಲೂರ್, ಕೊಟ್ಟಾಯಂ ಜಿಲ್ಲೆಯ ವಿಜಯಪುರಂ ಮತ್ತು ಇಡುಕ್ಕಿ ಜಿಲ್ಲೆಯ ಕರಿಮಣ್ಣೂರಿನಲ್ಲಿವೆ. ಪ್ರತಿ ವಸತಿ ಸಮುಚ್ಚಯ ನಿರ್ಮಿಸಲು 6.7 ಕೋಟಿಯಿಂದ 7.85 ಕೋಟಿ ವೆಚ್ಚ ಮಾಡಲಾಗಿದೆ.

ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿ : ತುಳು ಲಿಪಿ ನಾಮಫಲಕ ಅನಾವರಣ

ಕಾಸರಗೋಡಿನ ಬದಿಯಡ್ಕದ ವಿದ್ಯಾಗಿರಿಯ ಪೀಲಿತಡ್ಕ ಶ್ರೀ ಗುಳಿಗ ಮತ್ತು ಶ್ರೀ ಕೊರಗ ತನಿಯ ದೈವ ಸನ್ನಿಧಿಯಲ್ಲಿ ತುಳು ಲಿಪಿ ನಾಮಫಲಕವನ್ನು ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಬದಿಯಡ್ಕದ ಗ್ರಾಮ ಪಂಚಾಯತ್ ಮೆಂಬರ್ ಶ್ರೀ ಬಾಲಕೃಷ್ಣ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು, ಇವರು ತಮ್ಮ ಭಾಷಣದಲ್ಲಿ ತುಳು ಬಾಷೆಯು ಶೀಘ್ರದಲ್ಲಿ 8ನೇ ಪರಿಚ್ಚೆದಕ್ಕೆ ಸೇರುವಂತಾಗಲಿ ಎಂದರು. ಸ್ಥಳದ ಹಿರಿಯ ದೈವ ಪಾತ್ರಿ ಶ್ರೀ ನಿಟ್ಟೋನಿ ಇವರು ತುಳು ಲಿಪಿ ನಾಮಫಲಕವನ್ನು ಉದ್ಘಾಟಿಸಿದರು.

ಜ.6 ಮತ್ತು 7ರಂದು ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನ

ಮಂಜೇಶ್ವರ: ಮಂಜೇಶ್ವರ ದ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕದಲ್ಲಿ ಜನವರಿ 6 ಮತ್ತು 7ರಂದು ನಡೆಯಲಿರುವ ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನದ ಭಾಗವಾಗಿರುವ ಚಿತ್ರಪ್ರದರ್ಶನದ ಸಿದ್ಧತೆಗಳು ಪ್ರಗತಿಯಲ್ಲಿದೆ. ಕಾಸರಗೋಡಿನ ಮಾನವ ಸ್ವಭಾವ, ಸಾಂಸ್ಕೃತಿಕ ಇತಿಹಾಸ ಮತ್ತು ಭೌಗೋಳಿಕತೆಯನ್ನು ಮರುಶೋಧಿಸುವ ಚಿತ್ರಗಳನ್ನು ರಚಿಸಲಾಗುತ್ತಿದೆ.ಕಲೆ, ಜೀವನ, ಭಾಷೆ, ಕಲ್ಪನೆ, ಪ್ರಕೃತಿ ಗಳ ಬಗ್ಗೆ ಹಾಗೂ ಗಡಿನಾಡಿನ ಗ್ರಾಮಗಳಲ್ಲಿರು ಕಟ್ಟಡಗಳ ಚಿತ್ರಗಳು ಕೂಡಾ ಪುದರ್ಶನಕ್ಕೆ

ಕರ್ನಾಟಕ ಪ್ರಾಂತ ರೈತ ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರನ್ ನಾಯರ್ (84) ನಿಧನ

ಮೂಲತಃ ಕೇರಳದವರಾಗಿದ್ದು , ಕಳೆದ 30 ವರ್ಷಗಳಿಂದ ಕಳೆಂಜ ಗ್ರಾಮದ ಕೋಡಿಕುಲತ್ ಎಂಬಲ್ಲಿ ವಿವಿಧ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡಿದ್ದರೂ , ಕೇರಳ ರಾಜ್ಯದ ಹಿರಿಯ ಕಮ್ಯೂನಿಸ್ಟ್‌ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ ನಾಯರ್ ಅವರು ಅತ್ಯಂತ ಸರಳ ವ್ಯಕ್ತಿತ್ವದಿಂದ ಜನಸಾಮಾನ್ಯರ ಮೆಚ್ಚುಗೆ ಗಳಿಸಿದ್ದರು. ಅರಳಿ ಸೌಜನ್ಯ ನಗರದ ಭೂ ಹೋರಾಟ ಸೇರಿದಂತೆ ಹಲವಾರು ರೈತರ ಹೋರಾಟದ ನೇತೃತ್ವವನ್ನು ವಹಿಸಿದ್ದರು. ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಸಾಮಾನ್ಯರಿಗೆ

ಮಂಜೇಶ್ವರ :ವಿದ್ಯಾರ್ಥಿಗಳ ರ್‍ಯಾಗಿಂಗ್ ವೀಡಿಯೋ ವೈರಲ್

ಮಂಜೇಶ್ವರ: ಪ್ಲಸ್ ಒನ್ ವಿದ್ಯಾರ್ಥಿಯನ್ನು ಪ್ಲಸ್ ಟು ವಿದ್ಯಾರ್ಥಿಗಳು ರ್‍ಯಾಗಿಂಗ್ ವಿಚಾರದ ವೀಡಿಯೊದಿದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾದ ಬೆನ್ನಲ್ಲೇ ಕೇರಳದ ಶಿಕ್ಷಣ ಸಚಿವರು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. ಆದಷ್ಟು ಬೇಗನೆ ತನಿಖಾ ವರದಿ ನೀಡಲು ನಿರ್ದೇಶಿಸಲಾಗಿದೆ. ಕುಂಬಳೆ ಸಮೀಪದ ಅಂಗಡಿ ಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆ ಬಿಟ್ಟ ಬಳಿಕ ನಡೆದುಕೊಂಡು ಹೋಗುತಿದ್ದ 16ರ ಹರೆಯದ ಪ್ಲಸ್ ಒನ್

ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಕಣ್ಣೂರು: ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ, ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ಸೋಮವಾರ ನಡೆದಿದೆ. ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ. 135 ಮಂದಿ ಪ್ರಯಾಣಿಕರೊಂದಿಗೆ ಕೋಝಿಕ್ಕೋಡ್

ಮಂಜೆಶ್ವರ : ರಸ್ತೆ ಬದಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

ಮಂಜೇಶ್ವರ: ಕರ್ನಾಟಕ ನಿವಾಸಿಯಾದ ಕೂಲಿ ಕಾರ್ಮಿಕನೊಬ್ಬನನ್ನು ರಸ್ತೆ ಬದಿಯಲ್ಲಿ ಗಾಯಗಳೊಂದಿಗೆ ರಕ್ತಸಿಕ್ತವಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕರ್ನಾಟಕ ಬೆಳ್ಗಾಂ ನಿವಾಸಿ ಬಸಪ್ಪ ರಾಜು ಸಾವನ್ನಪ್ಪಿದ ದುರ್ದೈವಿ. ಮಂಜೇಶ್ವರ ಪಾವೂರು ಸೂಪಿ ನಗರ ರಸ್ತೆ ಬದಿಯಲ್ಲಿ ದಾರಿಹೋಕನೊಬ್ಬ ಈ ದೃಶ್ಯವನ್ನು ಕಂಡು ಮಾಹಿತಿ ನೀಡಿದ್ದಾನೆ.ಎರಡು ದಿವಸಕ್ಕೆ ಮೊದಲು ಸೂಪಿ ನಗರ ನಿವಾಸಿಯೊಬ್ಬರು ಮಂಗಳೂರಿನಿಂದ ತೋಟದ ಕೆಲಸಕ್ಕಾಗಿ ಬಸಪ್ಪ ರಾಜುನನ್ನು ಕರೆ ತಂದಿದ್ದರು. ತೋಟದ