ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ತೈಲ ಬೆಲೆಯ ಮೇಲಿನ ಮಾರಾಟ ತೆರಿಗೆ ಏರಿಸಿ ಜನಸಾಮ್ಯಾನರ ಮೇಲೆ ಬರೆ ಎಳೆದಿದ್ದಾರೆ. ವಾಲ್ಮೀಕಿ ನಿಗಮ ಸಹಿತ ಅನೇಕ ಭ್ರಷ್ಟಾಚಾರದಲ್ಲಿ ತೊಡಗಿದ ಮುಖ್ಯಮಂತ್ರಿಗಳು ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಚರಿಸಲಿರುವ ದೀಪೋತ್ಸವ, ಕುಣಿತ ಭಜನೆ, ಪ್ರಯುಕ್ತ ಸೋಮವಾರ ಸಂಜೆ ಆರು ಗಂಟೆಗೆ ದೇವರ ಎದುರು ಪ್ರಾರ್ಥಿಸಿ ಶಂಖನಾದದಿಂದ ಆರಂಭವಾಗಲಿದೆ. ಈ ಪ್ರಯುಕ್ತ ಸಾದ್ಯವಾದಷ್ಟು ಮಂದಿ ಶಂಖದೊಂದಿಗೆ ಸಂಜೆ ಆರು ಗಂಟೆಗೆ ಉಪಸ್ಥಿತರಿದ್ದು ತಾವೂ ಶಂಖನಾದ ಸೇವೆ ನಡೆಸಿ ರಾಮನ ಸೇವೆಯನಲ್ಲಿ ಪಾಲ್ಗೊಳ್ಳಬೇಕಾಗಿ ಆಡಳಿಮಂಡಳಿಯವರು ವಿನಂತಿಕೊಂಡಿದ್ದಾರೆ.
ಮನುಷ್ಯನ ಮಾನಸಿಕ ಹಾಗೂ ದೈಹಿಕ ಸದೃಡತೆಗೆ ಕ್ರೀಡೆಯು ಸಹಕಾರಿ ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್‌ನ ಅಧ್ಯಕ್ಷೆ ಹಿಲ್ಡಾ ಡಿಸೋಜ ಅವರು ಹೇಳಿದರು. ಅವರು ಐಕಳ ಶಕ್ತಿಕಲ್ಯಾಣಿ ಮೈದಾನದಲ್ಲಿ ಐಕಳ ಕಂಬಲ ಫ್ರೆಂಡ್ಸ್ ವತಿಯಿಂದ ಆಶಕ್ತರಿಗೆ ವೈದ್ಯಕೀಯ ನೆರವಿಗಾಗಿ ಐಕಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಐಕಳ ಗ್ರಾಮ ಪಂಚಾಯತ್ ಅಧ್ಯಕ್ಷ ದೀವಾಕರ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ವೇಳೆ