ಪುತ್ತೂರಿನ ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಕುಮಾರ್, ಜಾಗತಿಕ ಮಟ್ಟದಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು. ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ, ದಕ್ಷಿಣ ಕನ್ನಡದಲ್ಲಿ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಅ. 21ರಂದು ಚುನಾವಣೆ




















