ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ಒಂದರ ವೈಟರ್ ಆಗಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬಾತ ಪಿಲಾರ್ ನ ಗೋಡೌನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಡೌನ್ ನ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಿಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ
ನವೆಂಬರ್ ತಿಂಗಳನ್ನು ರಾಜ್ಯೋತ್ಸವ ಆಚರಣೆಯ ತಿಂಗಳು ಎಂದೇ ತಿಳಿಯಲಾಗಿದೆ. ಹುಟ್ಟಿದ ದಿನ ನವೆಂಬರ್ ಒಂದು ಆದರೂ ಇಡೀ ತಿಂಗಳು ಏನು ಆಚರಣೆ ಎಂಬುದನ್ನೆಲ್ಲ ಕೇಳಬಹುದು. ಉತ್ತರಿಸುವವರು ಯಾರೂ ಇರುವುದಿಲ್ಲ. ನಿಂದನೆ ಬೇಕಾದರೆ ಸಿಗಬಹುದು. ಆದರೆ ಇಲ್ಲಿ ಕನ್ನಡ ಹೇಗಿದೆ? ನವೆಂಬರ್ ಒಂದು ಕನ್ನಡ ನಾಡು ಹುಟ್ಟಿದ ದಿನ ಸಂತೋಷ. ಆದರೆ ಅಂದು ತುಳುನಾಡು, ಕೊಡವನಾಡು ಸತ್ತ ದಿನ ಎನ್ನುವುದೂ ಅಷ್ಟೇ ಸತ್ಯ. ಕೊಡಗು ಪ್ರತ್ಯೇಕ ರಾಜ್ಯವಾಗಿತ್ತು. ಚೆಪ್ಪುಡಿರ ಮುತ್ತಣ ಪೂಣಚ್ಚ
ಕೊಡಗು: ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ವಿಕೃತ ಕಾಮಿಯನ್ನು ಪೊಲೀಸರು, ಕೊಡಗಿನಲ್ಲಿ ಬಂಧಿಸಿದ್ದಾರೆ. ದೇವಯ್ಯ ಎನ್ನುವವರಿಗೆ ಸೇರಿದ್ದ ಹಸು ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಅಬೂಬಕ್ಕರ್ ಸಿದ್ದಿಕಿ (40) ಬಂಧಿತ ಆರೋಪಿ. ಕಳೆದ 15 ದಿನಗಳಿಂದ ಅಂದಗೋವೆಗೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ಅಬುಬಕ್ಕರ್, ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆಯಲ್ಲಿ ಹಸುವಿನ ಜೊತೆ ಸೆಕ್ಸ್ ಮಾಡಿದ್ದ. ಹೀಗೆ ಒಂದು ದಿನ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,
ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಬಳಿಯಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಮಧ್ಯೆ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿದ್ದು, ಮಾಣಿ-ಮೈಸೂರು ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಠಿಯಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಸದ್ಯ ಮುಂಜಾಗರೂಕತೆಯ ಕ್ರಮವಾಗಿ ಈ ಹೆದ್ದಾರಿಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಪರಿಶೀಲನೆ