Home Posts tagged #kota srinivas poojary

ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಕೋಟ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು

ಮಂಗಳೂರು-ತಿರುವನಂತಪುರಂ ವಿಸ್ತರಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್- ತಿರುವನಂತಪುರ ವಿಸ್ತರಿತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ನ ಅಹಮ್ಮದಾಬಾದ್ ನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಿದರು. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ವಂದೇ ಭಾರತ್ ರೈಲು ಇನ್ನು ಮುಂದೆ ಮಂಗಳೂರು ತಿರುವನಂತಪುರ ನಡುವೆ ಸಂಚರಿಸಲಿದೆ. ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಅಪರಾಹ್ನ 3.5ಕ್ಕೆ ತಿರುವನಂತಪುರ

ರಾಜ್ಯದ ಜವಾಬ್ದಾರಿ ಮರೆತು ಕೇಂದ್ರವನ್ನು ದೂರಬೇಡಿ : ಕೋಟ ಶ್ರೀನಿವಾಸ್ ಪೂಜಾರಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ 10 ವರ್ಷಗಳ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಎನ್‌ಡಿಆರ್‌ಎಫ್ ಎಸ್‌ಡಿಆರ್‌ಎಫ್ ನಿಧಿ ಬಂದಿದೆ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೋಟ ಸಿಎಂ ಸಿದ್ಧರಾಮಯ್ಯ ಮಾತುಗಳು ಜನರ ದಾರಿ ತಪ್ಪಿಸುತ್ತವೆ. ಹತ್ತು ವರ್ಷದಲ್ಲಿ ಯುಪಿಎ ರಾಜ್ಯಕ್ಕೆ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಖುಷಿ ಕೊಟ್ಟಿದೆ : ಕೋಟ ಶ್ರೀನಿವಾಸ ಪೂಜಾರಿ

ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಿಂದ

ವಿಧಾನ ಪರಿಷತ್ತಿನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಮಾಜೀ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ವಿಧಾನ ಪರಿಷತ್ತಿನಲ್ಲಿ ಪ್ರತಿ ಪಕ್ಷದ ನಾಯಕರಾಗಿ ಮಾಜೀ ಮಂತ್ರಿ ಕೋಟ ಶ್ರೀನಿವಾಸ ಪೂಜಾರಿ ನೇಮಕಗೊಂಡಿದ್ದಾರೆ. ಏಳು ತಿಂಗಳ ಬಳಿಕ ಬಿಜೆಪಿ ಈ ತೀರ್ಮಾನ ತೆಗೆದುಕೊಂಡಿದೆ. ವಿಧಾನ ಪರಿಷತ್ತಿನಲ್ಲಿ ಉಪ ನಾಯಕರಾಗಿ ಸುನಿಲ್ ವಲ್ಯಾಪುರೆ ಅವರನ್ನು ನೇಮಿಸಲಾಗಿದೆ. ಅದೇ ವೇಳೆ ಎನ್. ರವಿಕುಮಾರ್ ಅವರನ್ನು ವಿಧಾನ ಪರಿಷತ್ತಿನಲ್ಲಿ ಮುಖ್ಯ ಸಚೇತಕರಾಗಿ ಬಿಜೆಪಿ ನೇಮಕ ಮಾಡಿದೆ. ಹುಬ್ಬಳ್ಳಿ ಧಾರವಾಡ ಶಾಸಕ ಅರವಿಂದ ಬೆಲ್ಲದ ಅವರನ್ನು ವಿಧಾನ ಸಭೆಯಲ್ಲಿ ಉಪ ನಾಯಕರಾಗಿ ಮತ್ತು

‘ಪಠ್ಯಪುಸ್ತಕದ ವಿಚಾರದಲ್ಲಿ ರಾಜಕಾರಣ ಮಾಡುತ್ತಿವೆ’ : ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇಂತಹ ಬೆಳವಣಿಗೆಗಳು ಗೌರವ ತರುವುದಿಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠವನ್ನು ವಾಪಸ್ಸು

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತದಾನ

ಕೋಟ:ಉಡುಪಿ ಜಿಲ್ಲೆಯ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕೋಟತಟ್ಟು ಗ್ರಾಮ ಪಂಚಾಯಿತಿನ ಬೂತ್ ನಂಬರ್ 165 ರಲ್ಲಿ ಸರತಿ ಸಾಲಿನಲ್ಲಿ ನಿಂತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮತದಾನ ಮಾಡಿದರು.

ಬಿಜೆಪಿ ಅಭ್ಯರ್ಥಿ ಪರ ಗೆಲುವಿನ ವಾತಾವರಣ ಇದೆ : ಕಾಪುವಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಪರ ಗೆಲುವಿನ ವಾತಾವರಣ ಇದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಖಚಿತ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಕಾಪುವಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾರ್ಯಕರ್ತರು ಅತೀ ಉತ್ಸಾಹದಲ್ಲಿದ್ದು, ಸುರೇಶ ಶೆಟ್ಟಿ ಗುರ್ಮೆ ಕಾಪುವಿನಲ್ಲಿ ವಿಜಯಪತಾಕೆ ಹಾರಿಸುವುದು ಖಚಿತವಾಗಿದೆ.ಕಾಪುವಿನ ಶಾಸಕ ಲಾಲಾಜಿ ಮೆಂಡನ್ ರವರು

ಕಾಪು ಪಡು ವ್ಯಾಪ್ತಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿಯೊಂದಿಗೆ ಗುರ್ಮೆ ಮತ ಯಾಚನೆ

ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಹಿರಿಯರಾದ ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ನಿತಿನ್ ಕುಮಾರ್,

ಪುತ್ತೂರು : ಕಾಂತಾರ ಚಲನಚಿತ್ರ ವೀಕ್ಷಿಸಲಿರುವ ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲೆ, ರಾಜ್ಯ, ದೇಶ ಮಾತ್ರವಲ್ಲದೆ ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾದ ಕನ್ನಡದ ಕಾಂತಾರ ಸಿನಿಮಾವನ್ನು ದೈವ ನರ್ತಕರು, ದರ್ಶನ ಪಾತ್ರಿಗಳೊಂದಿಗೆ, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಭಿನ್ನವಾಗಿ ವೀಕ್ಷಿಸಲ್ಲಿದ್ದಾರೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮೂಡಿಬಂದ ತುಳುನಾಡಿನ ದೈವಾರಾಧನೆ, ಕಂಬಳ ಸಹಿತ ಕರಾವಳಿ ಸಂಸ್ಕೃತಿಯನ್ನು ಬಿಂಬಿಸುವ ಕಾಂತಾರ ಸಿನಿಮಾವನ್ನು