Home Posts tagged kotekar

ಕೋಟೆಕಾರು : “ಮಾಡೂರು ಶಾಖಾ ಅಂಚೆ ಕಚೇರಿ ಉದ್ಘಾಟನೆ”

ಅಂಚೆ ಕಚೇರಿಗಳು ಜನ ಸಾಮಾನ್ಯರ ಜೀವನಕ್ಕೆ ಅವಶ್ಯವಾದಂತಹ ಸೇವೆಗಳನ್ನು ಮನೆಬಾಗಿಲಿನಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ನೀಡುವ ಮೂಲಕ ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ ಮತ್ತು ಬದಲಾದ ಕಾಲ ಘಟ್ಟದಲ್ಲಿ ಅಂಚೆ ಇಲಾಖೆಯ ಜನಸೇವೆ ಅತ್ಯಂತ ಶ್ಲಾಘನೀಯ ಎಂದು ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಹೇಳಿದರು. ಕೋಟೆಕಾರಿನ ಮಾಡೂರಿನಲ್ಲಿ ಹೊಸ ಶಾಖಾ ಅಂಚೆ

ಉಳ್ಳಾಲ: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಮತ್ತೊಬ್ಬ ಆರೋಪಿಗೆ ಶೂಟೌಟ್

ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ

ಕೋಟೆಕಾರು : ಕಾರು ಢಿಕ್ಕಿ – ಪಾದಚಾರಿ ಸಾವು

ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃತರು.ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.ಇಂದು ಮದ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ಗೆ ಢಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾತ

ಉಳ್ಳಾಲ : ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ ಮರಳು ಸಾಗಾಟ

ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿ ಹೊಡೆದ ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದು ನಡೆಸಿದ

ಕೋಟೆಕಾರಿನಿಂದ ಕಳವಾದ ಬೈಕ್ ಮಂಗಳೂರಿನಲ್ಲಿ ಪತ್ತೆ, ಮೂವರು ಪೊಲೀಸರ ವಶಕ್ಕೆ

ಉಳ್ಳಾಲ: ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿಯಿಂದ ಕಳವು ನಡೆಸಿದ್ದ ಬೈಕ್ ಇಂದು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಬೈಕ್ ಮಾಲೀಕರ ಸ್ನೇಹಿತರೊಬ್ಬರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬೈಕ್ ಸಮೇತ ಪಾಂಡೇಶ್ವರ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಮಾ.28ರ ನಸುಕಿನ ಜಾವ ಕೋಟೆಕಾರು ಕೊರಗಜ್ಜನ ಕಟ್ಟೆ ಬಳಿ ಒಳರಸ್ತೆಯಲ್ಲಿ ನಿಲ್ಲಿಸಿದ್ದ ರಾಜೇಶ್ ಎಂಬವರಿಗೆ ಸೇರಿದ ಬೈಕನ್ನು ಕಳ್ಳರು ಕಳವು ನಡೆಸಿದ್ದರು. ಕೃತ್ಯ