Home Posts tagged #kpcc

ದಲಿತ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಮೌನ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ

ವಿಟ್ಲದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಡುಪಿಯ ಘಟನೆಯಲ್ಲಿ ಶಾಸಕರು, ಸಂಸದರು ಪ್ರತಿಭಟನೆ ಮಾಡಿದ್ದರು. ಎಬಿವಿಪಿಯವರು ಗೃಹ ಸಚಿವರ ಮನೆಗೆ ಮುತ್ತಿಗೆಯನ್ನು ಕೂಡ ಹಾಕಿದ್ದಾರೆ. ಆದರೆ ವಿಟ್ಲದ ಕೇಸ್‍ನಲ್ಲಿ ಯಾಕೆ ಪ್ರತಿಭಟನೆ ನಡೆಸದೆ ಮೌನವಹಿಸಿದ್ದಾರೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಸೋಲು ಗ್ಯಾರಂಟಿ : ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿಕೆ

ರಾಜ್ಯದಲ್ಲಿ ಸೋಲು ಗ್ಯಾರಂಟಿ ಎಂಬುದನ್ನು ಅರಿತಿರುವ ಬಿಜೆಪಿಯ ಹಿರಿಯ ನಾಯಕರು ಕರ್ನಾಟಕ್ಕೆ ಆಗಮಿಸಿ ಆಕ್ರೋಶಭರಿತ ಹೇಳಿಕೆಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯತಿರಿಕ್ತವಾಗಿ ಮತದಾರರನ್ನು ಬೆದರಿಸುವ ಕಾರ್ಯ ನಡೆಯುತ್ತಿದೆ. ಇಂತಹ ಬೆದರಿಕೆಗಳಿಗೆ ಈ ಬಾರಿ ಜನರಿಂದ ಸರಿಯಾದ ಉತ್ತರ ಸಿಗಲಿದೆ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ : ಮಾಜಿ ಶಾಸಕ ಮೊಯ್ದಿನ್ ಬಾವಾ ಕಿಡಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇಕಡಾ ಮತ ಸಿಕ್ಕಿದ್ದರೂ ಪಾಲುದಾರ ಎಂಬ

ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಡಿಕೆಶಿಯ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ : ಅಮಳ ರಾಮಚಂದ್ರ

ಪುತ್ತೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಇಡಿ, ಐಟಿ ಮತ್ತು ಸಿಬಿಐಗಳನ್ನು ತನ್ನ ಸ್ವ ರಕ್ಷಣೆಯ ಸೊತ್ತುಗಳಾಗಿ ಬಳಸಿಕೊಳ್ಳುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಬುಧವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೆಳಗಾವಿ

ರಾಜ್ಯದ ಗುಪ್ತಚರ, ಗೃಹ ಇಲಾಖೆಯ ವೈಫಲ್ಯಕ್ಕೆ ಕೈಗನ್ನಡಿ : ಮಂಗಳೂರಲ್ಲಿ ಕೆಪಿಸಿಸಿ ವಕ್ತಾರ ಎ.ಸಿ.ವಿನಯ್ ರಾಜ್ ಆರೋಪ

ಮಂಗಳೂರಿನ ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟಪ್ರಕರಣ ಇದೊಂದು ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯ ಎತ್ತಿತೋರಿಸುತ್ತಿದೆ ಅಂತಾ ಕೆಪಿಸಿಸಿ ವಕ್ತಾರ ಎ.ಸಿ.ವಿನಯ್ ರಾಜ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯ ಹಿಂದೆಇರುವ ಎಲ್ಲಾ ದೇಶ ದ್ರೋಹಿಗಳನ್ನು ಕೂಡಲೇ ಬಂಧಿಸಿ ಅವರನ್ನು ಯು.ಎ.ಪಿ.ಎ

ಹುತಾತ್ಮರಾದ ರೈತರ ಸ್ಮರಣೆ: ಕೇಂದ್ರ ಸಚಿವ ಅಜಯ್ ಮಿಶ‍್ರಾ ವಜಾಗೊಳಿಸುವಂತೆ ಒತ್ತಾಯಿಸಿ ಕೆಪಿಸಿಸಿ ಹಾಗೂ ಕೆಪಿವೈಸಿಸಿಯಿಂದ ಕಾಂಗ್ರೆಸ್ ಭವನದ ಮುಂದೆ ಮೌನ ಪ್ರತಿಭಟನೆ

ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಜೀವಕ್ಕೆ ಕಂಟಕವಾಗಿರುವ ಬಿಜೆಪಿ ಸರ್ಕಾರದ ಕೃಷಿ ಕಾನೂನುಗಳು ಹಾಗೂ

ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕಿಡಿಕಾರಿದ್ದಾರೆ. ‘ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ಮಲತಾಯಿ ಧೋರಣೆ, ರಾಜ್ಯಕ್ಕೆ

ಉದಯ್ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಮೌನದ ಬಗ್ಗೆ ಅನುಮಾನ ಹುಟ್ಟುತ್ತಿದೆ: ಡಿಕೆಶಿ

ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ ಯಡಮೊಗೆಯ ಹೊಸಬಾಳು ಉದಯ್ ಗಾಣಿಗ ಅವರ ಮನೆಗೆ ಮಂಗಳವಾರ ಸಂಜೆ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪಕ್ಷ, ಜಾತಿ, ಧರ್ಮದ ನೆಲೆಯಲ್ಲಿ