ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಸಂಪನ್ನವಾಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿದಿವಿಧಾನ ನೆರವೇರಿಸಿದರು. ಶ್ರೀ ದೇವಳದ ಅರ್ಚಕರಾದ ವೇದಮೂರ್ತಿ ರಾಜೇಶ್ ನಡ್ಯಂತಿಲ್ಲಾಯರು ಮತ್ತು
ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ : ಇಳಿದ ಕೊಪ್ಪರಿಗೆ: ಮಹಾಸಂಪ್ರೋಕ್ಷಣೆ : ಯಶಸ್ವಿಯನೀರಾಟ : ಚಿಣ್ಣರ ಸಂಭ್ರಮ ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಸೋಮವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊoಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿದಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ