Home Posts tagged #KukkeSubramanya

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ 10-12-2023 ರಿಂದ 24-12-2023 ರ ವರೆಗೆ ಚಂಪಾಷಷ್ಠಿ ಮಹೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಚಂಪಾಷಷ್ಠಿ ಮಹೋತ್ಸವವು ನಡೆಯಲಿದೆ. ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ಈ ಕೆಳಗಿನ ವಿವರದಂತೆ ವಾರ್ಷಿಕ

ಕುಕ್ಕೆ: ಅ.28 ಗ್ರಹಣ ನಿಮಿತ್ತ ದರುಶನ ಸಮಯದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ

ಕರಾವಳಿಯಲ್ಲಿ ಭಾರೀ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚನೆ ಉಂಟಾಯಿತು.      ಕುಮಾರಧಾರ ನದಿಯಲ್ಲಿ ಭಾರೀ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ.  ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ

Subramanya : ಭಾರೀ ಮಳೆಗೆ ಮುಳುಗಡೆಯಾದ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಕುಮಾರ ಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುರಿಂದ ಪವಿತ್ರ ಸ್ನಾನ ಘಟ್ಟ ಮುಳುಗಡೆಯಾಗಿದೆ.ಹೀಗಾಗಿ ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ದ.ಕ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ.ಈಗಾಗ್ಲೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ತಮಿಳು ನಟ ವಿಶಾಲ್ ಭೇಟಿ

ಕಡಬ : ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಹಾಗೂ ದೇವಾಲಯದ ಆನೆಯ ಆಶೀರ್ವಾದ ಪಡೆದರು ನಂತರ ಆಶ್ಲೇಷ ಬಲಿ ಪೂಜೆ ನೆರವೇರಸಿದರು. ನಟ ವಿಶಾಲ್ ಜೊತೆಯಲ್ಲಿ ಮೈಸೂರಿನ ಆತ್ಮೀಯ ಸ್ನೇಹಿತ ಸ್ವಾಮಿ ಹಾಗೂ ಮತ್ತಿತರ ಸ್ನೇಹಿತರು ಜೊತೆಯಲ್ಲಿದ್ದು ಸಾಥ್ ನೀಡಿದರು.ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೂ ಬಂದು ದೇವರ ದರ್ಶನ ಪಡೆದಿದ್ದರು.

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.

ಶ್ರೀ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಆ.30ರ ತನಕ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

ಕಡಬ : ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ಶ್ರೀ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ