ಬೈಂದೂರು: ಬೇಲುಗ ವಾಟರ್ ಸ್ಪೋರ್ಟ್ಸ್ ಜಸ್ಕಿ ರೈಡರ್ ಶನಿವಾರ ಸಂಜೆಯ ವೇಳೆ ಪ್ರವಾಸಿಗರನ್ನು ಸಮುದ್ರದಲ್ಲಿ ರೈಡಿಗೆ ಕರೆದುಕೊಂಡು ಹೋದಾಗ ಅಬ್ಬರದ ಸಮುದ್ರದ ಅಲೆಗೆ ಜಸ್ಕಿ ಪಲ್ಟಿ ಪಡೆದ ಪರಿಣಾಮ ಜಸ್ಕಿ ರೈಡರ್ ರವಿ ಎಂಬ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಪ್ರಕರಣ ನಡೆದಿದೆ. ಸಮುದ್ರದಲ್ಲಿ ಜಸ್ಕಿ ರೈಡಿಗೆ ಹೋದ ಪ್ರವಾಸಿಗ ಪ್ರಾಣಅಪಾಯದಿಂದ ಪಾರಾಗಿ
ಕುಂದಾಪುರ: ನಿನ್ನೆ ರಾತ್ರಿ ಬಡಿದ ಸಿಡಿಲಿಗೆ ಮನೆಯೊಂದು ಭಾಗಶಃ ಬಿರುಕು ಬಿಟ್ಟು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ಕುಂದಾಪುರ ತಾಲೂಕು ಸೇನಾಪುರ ಗ್ರಾಮದ ಗೇರುಕಟ್ಟೆ ಸಮೀಪ ನಡೆದಿದೆ. ಗೇರುಕಟ್ಟೆ ನಿವಾಸಿ ಫಕೀರ ಸಾಹೇಬರ ವಠಾರದ ಅಬ್ದುಲ್ ಎಂಬವರ ಮನೆಗೆ ಸಿಡಿಲು ಬಡಿದ ಪರಿಣಾಮ ಮನೆಯ ಮೇಲ್ಚಾವಣಿ, ವಿದ್ಯುತ್ ಪರಿಕರಗಳು ಹಾಗೂ ಮನೆಯ ಕೆಲವು ಸಾಮಾಗ್ರಿಗಳು ಭಾಗಶಃ ಹಾನಿಯಾಗಿದೆ. ಈ ಘಟನೆಯ ವೇಳೆ ಅಬ್ದುಲ್ ದಂಪತಿಗಳು ತಮ್ಮ ಮಗನ ಮನೆಯಲ್ಲಿ ಇದ್ದುದರಿಂದ ಅಪಾಯದಿಂದ
ಕುಂದಾಪುರ: ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಪ್ರತಿ ದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಚಂಡಿಕಾ ಹೋಮ, ದುರ್ಗಾ ಹೋಮ ಮತ್ತು ವಿಶೇಷ ಪೂಜೆ ಜರುಗಲಿದೆ. ಸಂಜೆ 5 ರಿಂದ ಶ್ರೀ ದೇವಿಯ
ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೊಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು. ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದರ ಮುಖೇನ ಗ್ರಾಮೀಣ ಬದುಕನ್ನು ಆಸ್ವಾಧಿಸುವುದರ ಮೂಲಕ ತಾನೊಬ್ಬ
ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ) ಕುಂದಾಪುರ ಆಡಳಿತದ ಲಿಟ್ಲ್ ಸ್ಟಾರ್ (ವಿದ್ಯಾರಣ್ಯ) ಆಂಗ್ಲಮಾಧ್ಯಮ ಶಾಲೆ ಯಡಾಡಿ-ಮತ್ಯಾಡಿಯಲ್ಲಿ
ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಈ ಸಾಲಿನ ಶಾಲಾ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಮತ್ತು ಕಾನೂನು ಅರಿವು ಕಾರ್ಯಕ್ರಮ ಸಡಗರ ಸಂಭ್ರಮದಲ್ಲಿ ನೆಡೆಯಿತು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಯುತ ಎಸ್ ಟಿ ಸಿದ್ದಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾರು ಹೆಚ್ಚಿನ ಅಧ್ಯಯನ ಮಾಡುತ್ತಾರೋ ಅವರು ಖಂಡಿತವಾಗಿ ಯಶಸ್ವಿನ ಗುರಿಯನ್ನು ತಲುಪುತ್ತಾರೆ.
ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಉಡುಪಿಯ ಉದ್ಯಾವರದಿಂದ ಕುಂದಾಪುರ ತನಕ ಚತುಷ್ಪಥ ರಸ್ತೆಗೆ ಡಾಮರೀಕರಣ ಮಾಡಲಾಗಿತ್ತು. ಆ ಸಂದರ್ಭದಲ್ಲಿ ರಸ್ತೆಗೆ ಬಿಳಿ ಬಣ್ಣದ ಗುರುತುಗಳಿಲ್ಲದೆ ರಸ್ತೆಯಲ್ಲಿ ಅಪಘಾತಗಳ ಹೆಚ್ಚಳ ಕಾರಣವಾಗಿತ್ತು. ಈ ಬಗ್ಗೆ ವಿ4 ನ್ಯೂಸ್‌ನಲ್ಲಿ ಸಮಗ್ರ ವರದಿ ಬಿತ್ತರಿಸಲಾಗಿತ್ತು. ವರದಿಗೆ ಎಚ್ಚೆತ್ತುಕೊಂಡ ಹೆದ್ದಾರಿ ಇಲಾಖೆ ರಸ್ತೆಗೆ ಬಿಳಿ ಬಣ್ಣದ ಗುರುತುಗಳನ್ನು ಹಾಕುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ೬೬ ಉಡುಪಿ ಜಿಲ್ಲೆಯ ಉದ್ಯಾವರದಿಂದ
ಬೈಂದೂರು: ಹೆಮ್ಮುಂಜೆ ಸ, ಹಿ, ಪ್ರಾ, ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಪರಿಕರಗಳನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ನೀಡಲಾಯಿತು. ವಿದ್ಯಾರ್ಥಿ ಪರಿಕರಗಳನ್ನು ನೀಡಿ ಮಾತನಾಡಿದ ಅಧ್ಯಕ್ಷರಾದ ರಾಘವೇಂದ್ರ ಸಿ ನಾವುಡರು ಶಾಲೆಗೆ ಇನ್ನೂ ಹೆಚ್ಚಿನ ಸವಲತ್ತನ್ನು ಒದಗಿಸುವ ಮೂಲಕ ಮಕ್ಕಳ ಬರುವಿಕೆ ಸಂಖ್ಯೆ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದರು. ಶಾಲಾ ಸ್ಥಾಪಕ ಕುಟುಂಬದ ಸದಸ್ಯರು, ಹಿರಿಯ ವಿದ್ಯಾರ್ಥಿಯು ಹಾಗೂ ಅತ್ಯುತ್ತಮ ಜಿಲ್ಲಾ ಶಿಕ್ಷಕ
ಕುಂದಾಪುರ: ಎಲ್ಲಿಯವರೆಗೆ ಬ್ರಿಟನ್ ದೇಶದ ಪಾರ್ಲಿಮೆಂಟ್ ಕಟ್ಟಡದ ಮಧ್ಯೆ ಗಾಂಧಿ ಪ್ರತಿಮೆ ಇರುತ್ತದೆಯೋ ಅಲ್ಲಿಯ ತನಕ ಗಾಂಧೀಜಿಯವರ ಚಿಂತನೆಗಳಿಗೆ ಸೋಲಿಲ್ಲ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ದಿನೇಶ್ ಹೆಗ್ಡೆ ಅಭಿಪ್ರಾಯಪಟ್ಟರು. ಮಹಾತ್ಮ ಗಾಂಧಿಜೀಯವರ ಹುತಾತ್ಮ ದಿನದ ಅಂಗವಾಗಿ ಸಮಾನ ಮನಸ್ಕ ಸಂಘಟನೆಗಳಿಂದ, ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗಾಂಧೀಜಿ ಅವರ
ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ 29ನೇ ವಾರ್ಷಿಕ ಅಧಿವೇಶನ, ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ವಿಪ್ರ ಸನ್ಮಾನ, ವಿಚಾರಗೋಷ್ಠಿ ಕಾರ್ಯಕ್ರಮಗಳು ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರಣಕಟ್ಟೆ ಶ್ರೀ ಕೃಷ್ಣಮೂರ್ತಿ ಮಂಜ ಅವರು ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ, ಬ್ರಾಹ್ಮಣರಲ್ಲಿ ಇರುವ ಸದ್ಗುಣಗಳು ಮತ್ತು ಪ್ರತಿಭೆ ಆಧಾರದ ಮೇಲೆಯೇ ಜೀವನವನ್ನು ತಾತ್ವಿಕತೆಯೊಂದಿಗೆ ನಡೆಸಬೇಕು.