ಆಸ್ಕರ್ ಫೆರ್ನಾಂಡೀಸ್ ಅವರು ನನಗೆ ಶಾಸಕನಾಗಲು ಅವಕಾಶ ಮಾಡಿಕೊಟ್ಟಿದ್ದು, ನನ್ನೊಂದಿಗೆ ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಸಹಕಾರ ನೀಡಿದ್ದರು. ಬೈಂದೂರು ಕ್ಷೇತ್ರವನ್ನು ಮಾದರಿಯನ್ನಾಗಿಸುವಲ್ಲಿ ಆಸ್ಕರ್ ಅವರ ಶ್ರಮವೂ ಅಪಾರವಾದುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ತ್ರಾಸಿ ಅಣ್ಣಪ್ಪಯ್ಯ
ಕುಂದಾಪುರ: ವಿಪರೀತ ಮದ್ಯ ಸೇವಿಸಿದ ಚಾಲಕನೋರ್ವ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಯದ್ವಾತದ್ವ ಕಂಟೇನರ್ ಚಲಾಯಿಸಿ ಕೆಲಹೊತ್ತು ಆತಂಕ ಸೃಷ್ಠಿಸಿದ ಘಟನೆ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕುರುಚಲು ಹುಲ್ಲು ಸಾಗಿಸುತ್ತಿದ್ದ ಛತ್ತೀಸ್ ಗಡ ಮೂಲದ ನೋಂದಣಿಯ ಕಂಟೇನರ್ ಚಾಲಕ ವಿಪರೀತವಾಗಿ ಮದ್ಯ ಸೇವಿಸಿ ಕಂಟೇನರ್ ಚಲಾಯಿಸಿದ ಪರಿಣಾಮ ಮುಳ್ಳಿಕಟ್ಟೆ ಜಂಕ್ಷನ್ ನಲ್ಲಿ ಇತ್ತೀಚೆಗಷ್ಟೇ ಹೊಸದಾಗಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಅನ್ನು ಬರೋಬ್ಬರಿ
ಕುಂದಾಪುರ: ನದಿದಂಡೆಯಲ್ಲಿ ವಾಯು ವಿಹಾರ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮಗ ಕಾಲು ಜಾರಿ ನದಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲೆಂದು ನದಿಗೆ ಹಾರಿದ ತಾಯಿ ಹಾಗೂ ಮಗ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ನಾಡ ಗ್ರಾಮದ ಚುಂಗಿಗುಡ್ಡೆಯಲ್ಲಿ ಸಂಭವಿಸಿದೆ. ನಾಡ ಗ್ರಾಮದ ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಸಿರಿಯಾ (34) ಹಾಗೂ ಪುತ್ರ ಶಾನ್ ರಿಚ್ಚಿ (11) ಸಾವನ್ನಪ್ಪಿದವರು. ರೋಸಿರಿಯಾ ಅವರು ಹಿಂದೆ ಕುವೈಟ್‌ನಲ್ಲಿ ಜೆಟ್
ಕುಂದಾಪುರ: ಮಗಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಸಾಲ ಕೇಳಲು ಹೋದಾಗ ಮ್ಯಾನೇಜರ್ ಸಮರ್ಪಕ ಮಾಹಿತಿ ನೀಡದೇ ಉಡಾಫೆಯಾಗಿ ನಡೆದುಕೊಂಡಿದ್ದಾರೆಂದು ಆರೋಪಿಸಿ ಹಟ್ಟಿಯಂಗಡಿ ಕರ್ನಾಟಕ ಬ್ಯಾಂಕಿಗೆ ಆಗಮಿಸಿದ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು. ಹಟ್ಟಿಯಂಗಡಿ ನಿವಾಸಿ ನಾಗರಾಜ ಪೂಜಾರಿ ಎನ್ನುವವರು ತಮ್ಮ ಮಗಳ ಉನ್ನತ ವಿದ್ಯಾಭ್ಯಾಸದ ಸಲುವಾಗಿ ಎಜುಕೇಶನ್ ಲೋನ್ ಕೇಳಲು ಮಂಗಳವಾರ ಕರ್ನಾಟಕ ಬ್ಯಾಂಕ್ ಹಟ್ಟಿಯಂಗಡಿ ಶಾಖೆಗೆ ತೆರಳಿದ್ದರು. ಈ ವೇಳೆ ಬ್ಯಾಂಕ್ ಮ್ಯಾನೇಜರ್
ಕುಂದಾಪುರ: ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಆರೊಂಭಗೊಂಡ ದಿನದಿಂದಲೂ ಯಾವ ಸರ್ಕಾವೂ ಕಟ್ಟಡ ಕಾರ್ಮಿಕರ ಹಣದ ಮೇಲೆ ಕಣ್ಣು ಹಾಕಿಲ್ಲ. ಆದರೆ ಇದೀಗ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು ಲೂಟಿ ಮಾಡಲು ಮುಂದಾಗಿದೆ. ಬರೋಬ್ಬರಿ ಎರಡು ಸಾವಿರದ ಅರವತ್ತಾರು ಕೋಟಿ ರೂ. ಹಣವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲು ತಯಾರಿ ನಡೆಸುತ್ತಿದೆ. ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ನಾವು ಬಿಡುವುದಿಲ್ಲ ಎಂದು ತಾಲೂಕು ಕಟ್ಟಡ ಮತ್ತು ಇತರೆ
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖಾಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ ಕಾರಣ ಅನುಷ್ಠಾನ ಕುಂಠಿತವಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಹಣ ನೀಡದೆ ಕೆಲಸ ಆಗುವುದಿಲ್ಲ. ಅಧಿಕಾರಿಗಳು ಈ ಪ್ರವೃತ್ತಿಯಿಂದ ಹೊರಬರಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಬೈಂದೂರಿನಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ
ಕುಂದಾಪುರ : ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪರಿಮಿತಿಯೊಳಗೆ ಕುಂದಾಪುರ ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಸಂಸದರು, ಶಾಸಕರು ಬೇಡಿಕೆ ಇಟ್ಟಿದ್ದಾರೆ. ನಾವೇನು ನಿಮ್ಮ ಬಳಿ ಭಿಕ್ಷೆ ಕೇಳುತ್ತಿಲ್ಲ. ಪ್ರತೀ ಬಾರಿ ಸಭೆಗೆ ಒಬ್ಬೊಬ್ಬ ಅಧಿಕಾರಿಗಳು ಬಂದು ಸುಳ್ಳು ಭರವಸೆಗಳನ್ನು ಕೊಟ್ಟು ಹೋಗುತ್ತೀರಿ. ನಾವೇನು ನಿಮಗೆ ಆಟದ ಗೊಂಬೆಗಳ ಹಾಗೆ ಕಾಣುತ್ತಿದ್ದೇವಾ. ನಿಮ್ಮಲ್ಲಿ ಸಾಧ್ಯವಿಲ್ಲದಿದ್ದರೆ ಹೇಳಿಬಿಡಿ. ನಮ್ಮ ಊರಿನ ಬಗ್ಗೆ ನಮಗೆ ಕಾಳಜಿ ಇದೆ. ನೀವು ಕೇಸು ಹಾಕಿ
ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಒಂದಷ್ಟು ಮಾರ್ಗಸೂಚಿಗಳನ್ನು ಕಳುಹಿಸಿದೆ. ಧಾರ್ಮಿಕ ಆಚರಣೆಯನ್ನು ನಡೆಸುವ ಬಗ್ಗೆ ಸರಕಾರಕ್ಕೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಆಚರಣೆಯ ಜತೆಗೆ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಆಚರಣೆಗಳು ಎಷ್ಟು ವೈಭವವಾಗಿ ನಡೆಯಬೇಕು ಎನ್ನುವುದನ್ನು ಅರಿತು, ಪ್ರಧಾನಿಯವರು ತಿಳಿಸಿದಂತೆ ನಾವೇ ಸ್ವತಃ ಸ್ವಯಂ ನಿಯಂತ್ರಣ ಮಾಡಿಕೊಳ್ಳಬೇಕು. ಸರಕಾರದ
ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ ೨೩ರಂದು ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ ರಾತ್ರಿ ಅತೀಯಾಗಿ ವಾಂತಿಯಾದುದರಿಂದ ಅಸ್ವಸ್ಥತೆಗೊಂಡ ಅಶ್ವಿನಿಯವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಕಡಿಮೆ ರಕ್ತದೊತ್ತಡ ಎಂಬುದಾಗಿ ತಿಳಿಸಿ ಕೂಡಲೇ ಮಣಿಪಾಲ್ ಆಸ್ಪತ್ರೆಗೆ
ಕುಂದಾಪುರ ತಾಲೂಕು ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ. ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ ಮಾರ್ಗದರ್ಶನದಲ್ಲಿ ಡಿಎಸ್ಪಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪ್ರೊಬೆಷನರಿ ಪಿಎಸ್‌ಐ ವಿನಯ್ ಕುಮಾರ್ ಮತ್ತು ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕರಾದ ನಂಜಾನಾಯ್ಕ್ ಎನ್, ನೇತ್ರತ್ವದಲ್ಲಿ ಅಪಾದಿತರಾದ ನಿಶಾನ್ ಮತ್ತು ಪ್ರಥಮ್ ಕುಮಾರ್ ಗಾಂಜಾ ಮಾರಾಟ


















