Home Posts tagged #kundapura (Page 12)

ಜೀವವನ್ನು ಪಣಕ್ಕಿಟ್ಟು ಪರೀಕ್ಷೆ ಬರೆದ ಎಸ್ಸೆಸ್ಸೆಲ್ಸಿ ಮಕ್ಕಳು

ಜಿಟಿ ಜಿಟಿ ಮಳೆ. ತುಂಬಿ ಹರಿಯುತ್ತಿರುವ ಸೌಪರ್ಣಿಕೆ. ಆ ಭಾಗದ ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕೆಂದರೆ ತುಂಬಿ ಹರಿಯುವ ನದಿಯನ್ನು ದೋಣಿ ಮೂಲಕ ದಾಟಿ ಜೀವವನ್ನು ಪಣಕ್ಕಿಟ್ಟು ಪರೀಕ್ಷೆಯನ್ನು ಬರೆಯಬೇಕು. ಆದರೆ ಮಕ್ಕಳ ಸುರಕ್ಷತೆಗಾಗಿ ಖುದ್ದು ಡಿಡಿಪಿಐ ಉಡುಪಿಯಿಂದ ಬಂದು ಪರೀಕ್ಷಾ ಕೇಂದ್ರಕ್ಕೆ ದೋಣಿಯ ಮೂಲಕ ಮಕ್ಕಳನ್ನು ಕರೆದೊಯ್ದ ಅಪರೂಪದ

ಬಸ್ರೂರಿನಲ್ಲಿ ಮನೆಯ ಮೇಲೆ ಬಿದ್ದ ಮರ: ಇಬ್ಬರಿಗೆ ಗಾಯ

ಕುಂದಾಪುರ: ಕರಾವಳಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಕುಂದಾಪುರ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟ ಜೋರಾಗಿದ್ದು ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪಯ್ಯ ಗಾಣಿಗ ಎಂಬವರ ಮನೆಯ ಮೇಲೆ ಧೂಪದ ಮರ ಬಿದ್ದು ಮೇಲ್ಛಾವಣಿ ಕುಸಿದಿದೆ. ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹದಾಕಾರದ ಮರ ಬಿದ್ದ ಪರಿಣಾಮ

ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸುವ ಚಿಂತನೆ: ಸಚಿವ ಅರವಿಂದ್ ಲಿಂಬಾವಳಿ

ಕುಂದಾಪುರ: ಸೈಕ್ಲಾನ್, ಸುನಾಮಿಯಂತಹ ಪ್ರಾಕೃತಿಕ ವಿಕೋಪ ತಡೆ, ಮೀನುಗಳ ಸಂತಾನೋತ್ಪತ್ತಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಕಾಂಡ್ಲಾವನ ಬೆಳೆಸುವುದು ಹಾಗೂ ಸಂರಕ್ಷಣೆಯ ಬಗ್ಗೆ ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.ಅವರು ಕುಂದಾಪುರದ ಪಂಚಗಂಗಾವಳಿ ಹಿನ್ನಿರು ಭಾಗದಲ್ಲಿರುವ ಕಾಂಡ್ಲಾವನ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.ಕರಾವಳಿಯಾದ್ಯಂತ ಕಾಂಡ್ಲಾವನ ಬೆಳೆಸಲು ಅರಣ್ಯ ಇಲಾಖೆಯಿಂದ ಚಿಂತನೆ

ಕುಂದಾಪುರದಲ್ಲಿ ಬೆಲೆ ಏರಿಕೆ ವಿರೋಧಿಸಿ ಸಿಐಟಿಯುನಿಂದ ಪ್ರತಿಭಟನೆ

ಕುಂದಾಪುರ: ಜನಸಾಮಾನ್ಯರಿಗೆ ಸಂಕಷ್ಟ ತಂದೊಡ್ಡುತ್ತಿರುವ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಿ ಎಂದು ಹಲವಾರು ಎಡ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದರೂ ಅದನ್ನು ನಿಯಂತ್ರಿಸುವ ಗೋಜಿಗೆ ಕೇಂದ್ರ, ರಾಜ್ಯ ಸರ್ಕಾರ ಹೋಗಿಲ್ಲ. ಇದು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಅರೆ ಫ್ಯಾಸಿಸ್ಟ್ ಸರ್ಕಾರ ಎನ್ನುವುದನ್ನು ಸಾಬೀತುಪಡಿಸಿದೆ. ಬಿಜೆಪಿ ಕೇವಲ ಕೋಮುವಾದಿ ಪಕ್ಷವಲ್ಲ. ಅದು ಬಡ ಜನರನ್ನು ಲೂಟಿ ಮಾಡುವ ಸರ್ಕಾರ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಉದಯ್ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಮೌನದ ಬಗ್ಗೆ ಅನುಮಾನ ಹುಟ್ಟುತ್ತಿದೆ: ಡಿಕೆಶಿ

ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ ಯಡಮೊಗೆಯ ಹೊಸಬಾಳು ಉದಯ್ ಗಾಣಿಗ ಅವರ ಮನೆಗೆ ಮಂಗಳವಾರ ಸಂಜೆ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪಕ್ಷ, ಜಾತಿ, ಧರ್ಮದ ನೆಲೆಯಲ್ಲಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕನೋರ್ವ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಸಾವನ್ನಪ್ಪಿದವರು. ಅಶೋಕ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ

ಬೈಂದೂರಿನ ನಾಡಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ

ಬೈಂದೂರು ತಾಲೂಕು ನಾಡ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾಥಮಿಕ ಶಾಲೆ ಹೆಮ್ಮುಂಜೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಲಸಿಕೆ ಹಾಕಿಸಿಕೊಳ್ಳಲು ದೂರದಿಂದ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಲಸಿಕೆ ದೊರಕುವಂತೆ ಮಾಡುವಲ್ಲಿ ಪಂಚಾಯತ್ ಸಹಯೋಗದೊಂದಿಗೆ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ನೀಡುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕೆ ನೀಡುವುದರೊಂದಿಗೆ ಲಸಿಕೆ ಮಹತ್ವವನ್ನು ತಿಳಿಸಿದರು. ನಾಡಾ

ರಸ್ತೆಯಲ್ಲಿ ಕೂತು ಅಡುಗೆ ಮಾಡಿದ ಶೋಭಾ ಕರಂದ್ಲಾಜೆ ಈಗ ಎಲ್ಲಿ?: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪ್ರಶ್ನೆ

ಕುಂದಾಪುರ: ಹಿಂದೆ ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಗ್ಯಾಸ್ ಬೆಲೆ 414 ರೂ. ಇದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಕೂತು ಅಡುಗೆ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟಿಸಿದ ಶೋಭಾ ಕರಂದ್ಲಾಜೆಯವರು ಈಗ ಎಲ್ಲಿಗೆ ಹೋಗಿದ್ದಾರೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಪ್ರಶ್ನಿಸಿದ್ದಾರೆ. ಅವರು ಸೋಮವಾರ ಬೆಳಿಗ್ಗೆ ತ್ರಾಸಿ ಜಿಲ್ಲಾಪಂಚಾಯತ್ ವ್ಯಾಪ್ತಿಯ ತ್ರಾಸಿ ಪೆಟ್ರೋಲ್ ಬಂಕ್ ಬಳಿಯಲ್ಲಿ ಬಿಜೆಪಿ ಸರ್ಕಾರದ ತೈಲ ಬೆಲೆ

ದೇಗುಲ ದರ್ಶನಕ್ಕೆ ಸಭೆ ನಡೆಸಿ ತೀರ್ಮಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ದೇವಾಲಯಗಳ ಪ್ರವೇಶಕ್ಕೆ ಒಂದೇ ಸಲ ಅವಕಾಶಗಳನ್ನು ಕೊಟ್ಟರೆ ಜನಜಂಗುಳಿ ಆಗುವ ಸಾಧ್ಯತೆಗಳಿರುವುದರಿಂದ ಸ್ವಲ್ಪ ದಿನಗಳ ಬಳಿಕ ತೆರೆಯಬಹುದಾ ಎಂದು ಸರ್ಕಾರ ಆಲೋಚನೆ ಮಾಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ನಮ ಅಹವಾಲುಗಳನ್ನು ಹೇಳಿ ಆದಷ್ಟು ಬೇಗ ಸಾಮಾಜಿಕ ಅಂತರಗಳನ್ನು ಕಾಯ್ದುಕೊಂಡು ದೇವಸ್ಥಾನಗಳನ್ನು ತೆರೆಯಬಹುದಾ ಎಂದು ಚರ್ಚೆ ನಡೆಸಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು ರಾಜ್ಯ ಮುಜರಾಯಿ ಸಚಿವ

ಲಸಿಕೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ:ಎಲ್ಲವೂ ಪಾರದರ್ಶಕವಾಗಿದೆ: ಸಚಿವ ಕೋಟ ಸ್ಪಷ್ಟನೆ

ಕುಂದಾಪುರ: ಸರ್ಕಾರ ಹೊರಡಿಸಿರುವ ನಿಯಮಗಳ ಪ್ರಕಾರವಾಗಿಯೇ ಲಸಿಕೆ ಹಂಚಿಕೆಯಾಗುತ್ತಿದೆ. ರಾಜಕೀಯ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ಕೆಲವರಿಗೆ ಬಿಜೆಪಿಯವರು ಲಸಿಕೆ ಕೊಡುತ್ತಿದ್ದಾರೆ ಎಂದು ಅನಿಸಿರಬಹುದು. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಲಸಿಕೆ ಹಂಚಿಕೆ ಪಾರದರ್ಶಕವಾಗಿಯೇ ನಡೆಯುತ್ತಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಮಂಗಳವಾರ ತಲ್ಲೂರು ಗ್ರಾ.ಪಂ ನಲ್ಲಿ ನಡೆದ ಕೋವಿಡ್ ಟಾಸ್ಕ್‌ಫೋರ್ಸ್ ಸಭೆಯ