ಕುಂದಾಪುರ: ಸಾಕಷ್ಟು ಬಲಿಷ್ಠವಾಗಿದ್ದ ಬಿಲ್ಲವ ಸಮಾಜ 26 ಉಪಪಂಗಡಗಳಾಗಿ ಹರಿದು ಹಂಚಿ ಹೋಗಿದೆ. ಎಲ್ಲರೂ ಒಗ್ಗೂಡಿದರೆ ನಾವು ಇಡೀ ರಾಜ್ಯವನ್ನೇ ಆಳಬಹುದು. ಆದರೆ ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಶ್ರೀ ಕ್ಷೇತ್ರ ಸಿಗಂಧೂರು ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್. ಆರ್ ಕಳವಳ ವ್ಯಕ್ತಪಡಿಸಿದರು. ನಗರದ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ
ಗಂಗೊಳ್ಳಿಯಲ್ಲಿ ಕಳೆದ ಸೋಮವಾರ ನಡೆದಿದ್ದ ಬೋಟು ಅಗ್ನಿ ದುರಂತ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಈ ಪ್ರದೇಶದಲ್ಲಿ ಯಾವುದೇ ರಾಸಾಯನಿಕ ವಸ್ತುಗಳನ್ನು ಬಳಸಿ ಯಾಂತ್ರಿಕ ದೋಣಿಯ ನಿರ್ಮಾಣಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿದರು. ಕಳೆದ ತುಂಬಾ ಸಮಯದಿಂದ ಕೊಳಚೆ ತ್ಯಾಜ್ಯವನ್ನು ವಿಲೇವಾರಿ ಮಾಡದೇ ಸ್ಥಳೀಯ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. ಅಲ್ಲದೇ ಇಲ್ಲಿ ರಾಸಾಯನಿಕ ಮಿಶ್ರಿತ ಯಾಂತ್ರೀಕೃತ
ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ ಇದರ ಸಹಯೋಗದಲ್ಲಿ ಸುಣ್ಣಾರಿಯ ಪದವಿಪೂರ್ವ ಕಾಲೇಜಿನಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ದೀಪಾವಳಿ, ಗೋಪೂಜೆ, ಬಲೀಂದ್ರ ಕೂಗುವುದು, ತುಳಸಿ ಪೂಜೆ, ಕೃಷಿ ಪರಿಕರ ಮತ್ತು ಸರಸ್ವತಿ ಪೂಜೆ ಆಚರಿಸಲಾಯಿತು. ದೀಪಾವಳಿ, ಸಂದೇಶ ನೀಡಿದ ಕುಂದಗನ್ನಡ ರಾಯಭಾರಿ ಮನು ಹಂದಾಡಿ, ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆಯ ತಿಳಿವಳಿಕ
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ ನಾರಾಯಣ ಗೌಡರ ಆದೇಶದಂತೆ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ನೇತೃತ್ವದಲ್ಲಿ ಉಡುಪಿ ತಾಲೂಕು ಅಧ್ಯಕ್ಷ ಅ,ರಾ ಪ್ರಭಾಕರ್ ಪೂಜಾರಿ ಮುಂದಾಳತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಕೊಲ್ಲೂರಿಗೆ ಭೇಟಿ ನೀಡಿ ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ 70% ಕನ್ನಡ ಹಾಗೂ ಉಳಿದ ಭಾಷೆಗಳಿಗೆ ಶೇಕಡಾ 30/ ಕಡ್ಡಾಯಗೊಳಿಸುವಂತೆ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನ ಉದ್ದೇಶಿಸಿ ಮಾತನಾಡಿದ ಅ.ರಾ
ಕುಂದಾಪುರ ಸಮೀಪದ ಹೇರಿಕುದ್ರು ಎಂಬಲ್ಲಿ ಮಹಾಗಣಪತಿ ಮಾನಸ ಮಂದಿರದಲ್ಲಿ ರಾತ್ರಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅನುಮತಿಸಿದ ಸಮಯ ಮೀರಿ ಮೈಕ್ ಬಳಕೆ ಮಾಡಲಾಗುತ್ತಿದೆ ಎಂಬ ದೂರಿನ ಮೇಲೆ ಆಗಮಿಸಿದ ಪೆÇಲೀಸರು ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ. ಈ ಘಟನೆ ವ್ಯಾಪಕ ಟೀಕೆಗೆ, ಯಕ್ಷಗಾನ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಯಕ್ಷಗಾನ ನಿಲ್ಲಿಸಬಾರದಿತ್ತು, ಖಾಸಗಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಕೆಗೆ ನಿಯಂತ್ರಣ
ಕುಂದಾಪುರ: ಕಂಡ್ಲೂರಿನ ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಕಾರ್ಯವೈಖರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರೊಬರ್ಟ್ ರೆಬೆಲ್ಲೋ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಸರಕಾರಿ ಸೇವೆ ಮಾಡುವುದು ಉತ್ತಮ ಅವಕಾಶ. ಅದರಲ್ಲೂ ಸರಕಾರಿ ವೈದ್ಯ ವೃತ್ತಿ ದೇವರು ಮೆಚ್ಚುವ ಕೆಲಸ.
ಕುಂದಾಪುರ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ರಾಜೇಶ್ ಬೆಳ್ಕೆರೆಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ ಬೆಳಿಗ್ಗೆ ಕುಂದಾಪುರದ ಸಲೀಂ ಅಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಜೇಶ್ ಬೆಳ್ಕೆರೆ ಹಲವು ವರ್ಷದಿಂದ
ಕುಂದಾಪುರ: ಅತಿ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‍ವೊಂದು ಚಾಲಕ ನಿಯಂತ್ರಣ ತಪ್ಪಿ ಅರಾಟೆ ಎಂಬಲ್ಲಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ಪಕ್ಕದ ರಸ್ತೆಗೆ ಉರುಳಿದ ಘಟನೆ ನಡೆದಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಸುಮಾರು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಪ್ರಯಾಣಿಕರನ್ನು ಹೊತ್ತ ಬಸ್ ರಾಷ್ಟ್ರೀಯ
ಕುಂದಾಪುರದ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಚಲೋ ಸೇನಾಪುರ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನೆ ಮೆರವಣಿಗೆ ನಾಡಾ ಗ್ರಾಮ ಪಂಚಾಯತ್‍ನಿಂದ ಆರಂಭಗೊಂಡು ಸೇನಾಪುರ ರೈಲ್ವೇ ನಿಲ್ದಾಣದವರೆಗೆ ಸಾಗಿಬಂದು, ಬಳಿಕ ರೈಲ್ವೇ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಸಂಚಾಲಕ ರಾಜೀವ್
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ದೇವರ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್




























