Home Posts tagged #kundapura (Page 4)

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

ಕುಂದಾಪುರದಲ್ಲಿ ರವಿವಾರ ಸಂಜೆ ವೇಳೆ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ (42) ರಾಘು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ರವಿವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ

ಕುಂದಾಪುರ: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು

ಸುಳ್ಸೆ ಯಕ್ಷಿಬ್ರಹ್ಮ ನಂದಿಕೇಶ್ವರ ದೈವಸ್ಥಾನ ಸಮೀಪದ ಸುಳ್ಸೆಯರ ಮನೆ ನಿವಾಸಿ ಮಹಾಬಲ ದೇವಾಡಿಗ (55) ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತಪಟ್ಟ ದಂಪತಿಗಳು. ಮಹಾಬಲ ದೇವಾಡಿಗ ಸುಳ್ಸೆ ಕರಣಿಕರ ಮನೆಯಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದು, ಶುಕ್ರವಾರ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಕಳೆದರೂ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಪತ್ನಿ ಲಕ್ಷ್ಮೀ ಅನುಮಾನಗೊಂಡು ಕರಣಿಕರ ಮನೆಗೆ ತೆರಳಿದ್ದರು. ಈ ವೇಳೆ ಕರಣಿಕರ ಮನೆಗೆ ಹೋಗುವ ಕಾಲುದಾರಿಯಲ್ಲಿ ಮುರಿದು

ಕುಂದಾಪುರ|| ಗೋಪಾಡಿ ಅಂಬೇಡ್ಕರ್ ಭವನ ನಿರ್ಮಾಣದ ತನಿಖೆಯಾಗಲಿ: ಗೋಪಾಡಿ ಗ್ರಾಮಸಭೆಯಲ್ಲಿ ದಲಿತ ಮುಖಂಡರ ಆಗ್ರಹ

ಕುಂದಾಪುರ: ದಲಿತ ಸಮುದಾಯದ ಮನೆಗಳೇ ಇಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗಿದ್ದು, ದಲಿತರು ಭವನವನ್ನು ಬಳಸಬಾರದು ಎನ್ನುವ ದೃಷ್ಠಿಯಲ್ಲಿ ನಿರ್ಮಿಸಿದಂತಿದೆ. ಅಂಬೇಡ್ಕರ್ ಭವನ ನಿರ್ಮಾಣದ ಹಿಂದಿನ ಉದ್ದೇಶವೇನು? ಯಾರ ಲಾಭಕ್ಕಾಗಿ ಈ ಕಟ್ಟಡ ನಿರ್ಮಾಣ ಮಾಡಲಾಗಿದೆ ಎನ್ನುವುದರ ಕುರಿತು ಸಮಗ್ರ ತನಿಖೆ ನಡೆಯಲಿ ಎಂದು ದಸಂಸ ಮುಖಂಡ ರಾಜು ಬೆಟ್ಟಿನಮನೆ ಆಗ್ರಹಿಸಿದ್ದಾರೆ. ಗೋಪಾಡಿ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಮಾತನಾಡಿದ

ಕುಂದಾಪುರ: ಚಟುವಟಿಕೆಗಳಿಲ್ಲದೇ ಪಾಳು ಬಿದ್ದಿದೆ ಗೋಪಾಡಿ ಅಂಬೇಡ್ಕರ್ ಭವನ: ತನಿಖೆಗಾಗಿ ದಸಂಸ ಆಗ್ರಹ

ದಲಿತರಿಗಾಗಿಯೇ ಆಳುವ ಸರ್ಕಾರಗಳು ತರುತ್ತಿರುವ ಹೊಸ-ಹೊಸ ಯೋಜನೆಗಳು ಉಳ್ಳವರ ಪಾಲಾಗುತ್ತಿವೆ ಎಂಬ ಆರೋಪಗಳು ಆಗಾಗೆ ಕೇಳಿ ಬರುತ್ತಲೇ ಇವೆ. ಗೋಪಾಡಿಯಲ್ಲಿ ಕಳೆದ ಆರು ವರ್ಷಗಳ ಹಿಂದೆ ನಿರ್ಮಾಣಗೊಂಡ ಅಂಬೇಡ್ಕರ್ ಭವನ ಈ ಆರೋಪಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಈ ಕುರಿತಾದ ಸ್ಪೆಶಲ್ ರಿಪೋರ್ಟ್ ನೋಡಿ. ದಲಿತರ ಸಬಲೀಕರಣಕ್ಕಾಗಿ ಸರ್ಕಾರ ನಾನಾ ಯೋಜನೆಗಳನ್ನು ಹೊರತರುತ್ತಿದೆ. ಅತ್ಯಂತ ತೀರ ಹಿಂದುಳಿದ ದಲಿತ ಸಮಾಜದ ಕಾರ್ಯ ಚಟುವಟಿಕೆಗಳಿಗೆ ಆಯಾ ಗ್ರಾ.ಪಂ ವ್ಯಾಪ್ತಿಯಲ್ಲಿ

ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಅರೆಸ್ಟ್

ಉಡುಪಿ:ಉದ್ಯಮಿಗೆ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರುಬಹುಕೋಟಿ ರೂಪಾಯಿ ವಂಚನೆ ನಡೆಸಿರು ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಸಿಸಿಬಿ ಉಡುಪಿ ಪೊಲೀಸರು ಶ್ರೀ ಕೃಷ್ಣ ಮಠದ ಬಳಿ ಮಿಂಚಿನ ಕಾರ್ಯಚರಣೆ ನಡೆಸಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವಂಚನೆ ಅರೋಪದಲ್ಲಿ ತಲೆಮರೆಸಿಕೊಂಡಿದ್ದ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರ ಕುಂದಾಪುರನನ್ನು ವಶಕ್ಕೆ ಪಡೆದಿದ್ದಾರೆ. ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿ ಜಿಲ್ಲೆಯ,

ಕುಂದಾಪುರ : ನಮ್ಮ ಭೂಮಿ ನಮ್ಮ ಹಕ್ಕು, ಕೃಷಿ ಭೂಮಿಗಾಗಿ ಹಕ್ಕೊತ್ತಾಯ

ಕುಂದಾಪುರ: ಕೊರಗರಿಗೆ ಕೃಷಿ ಭೂಮಿ ಇಲ್ಲದಿರುವುದರಿಂದ ಅವರು ಕೃಷಿಕರಾಗದೇ ಇಂದಿಗೂ ದಯನೀಯ ಸ್ಥಿತಿಯಲ್ಲಿ ಇದ್ದಾರೆ. ಹಲವು ಸರ್ಕಾರಗಳು ನಾನಾ ಯೋಜನೆಗಳನ್ನು ತಂದರೂ ಕೊರಗರಿಗೆ ಕೃಷಿ ಮಾಡಿಕೊಳ್ಳಲು ತುಂಡು ಭೂಮಿಯನ್ನೂ ಕೊಟ್ಟಿಲ್ಲ. ಕೊರಗ ಸಮುದಾಯದ ಮನವಿಗಳು ಕೇವಲ ಕುಂದು ಕೊರತೆ ಸಭೆಗೆ ಮಾತ್ರವೇ ಸೀಮಿತವಾಗಬಾರದು. ಅದು ಕಾರ್ಯರೂಪಕ್ಕೂ ಬರಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ಹೇಳಿದರು. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ

ಬೀಚ್ ಬಳಿ ಅಪಾಯದ ಸೆಲ್ಫಿಯಾಟ: ಮೈಮರೆತವರಿಗೆ ಪಿಎಸ್ಐ ಪಾಠ!

ಕುಂದಾಪುರ: ಅರಶಿನಗುಂಡಿ ಜಲಪಾತ ವೀಕ್ಷಿಸುತ್ತಿದ್ದ ವೇಳೆ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಬೆನ್ನಲ್ಲೇ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ‌. ವಿಶ್ವಪ್ರಸಿದ್ದ‌ ತ್ರಾಸಿ-ಮರವಂತೆ ಬೀಚ್ ಗೆ ಪ್ರವಾಸಿಗರು ಇಳಿಯದಂತೆ ಮುಂಜಾಗ್ರತ ಕ್ರಮವಾಗಿ ಗಂಗೊಳ್ಳಿ ಪೊಲೀಸ್‌ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಕೆಂಪು ಬಣ್ಣದ ರಿಬ್ಬನ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಅಲ್ಲದೇ ಬೀಚ್

ಬೈಂದೂರ್ :ಬಾರ್ ವೊಂದರ ಮುಂಭಾಗದಲ್ಲಿ ತಂಡದಿಂದ ಹಲ್ಲೆ

ಕುಂದಾಪುರ; ಬೈಂದೂರಿನ ಬಾರ್‍ವೂಂದರ ಮುಂಭಾಗದಲ್ಲಿ ಕಂಠಪೂರ್ತಿ ಕುಡಿದು ಪುಡಿ ರೌಡಿಗಳ ತಂಡ ಅಟ್ಟಹಾಸ ಮೆರೆದಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ವಾಹನ ಅಡ್ಡ ಬಂದ ಕಾರಣ ಆರಂಭವಾದ ವಾಗ್ವಾದ, ಪರಸ್ಪರ ಹಲ್ಲೆ ನಡೆಸಿದ್ದಾರೆ. ಟಾಟಾ ಏಸ್ ವಾಹನದಲ್ಲಿದ್ದ ರಮೇಶ್ ದೇವಾಡಿಗ ಹಾಗೂ ರವಿ ಪೂಜಾರಿ ಮೇಲೆ ಪುಡಿ ರೌಡಿಗಳಿಂದ ಹಲ್ಲೆ ನಡೆದಿದೆ ಪಾರ್ಕಿಂಗ್ ನಿಲ್ಲಿಸಿದ ವಾಹನದ ಗಾಜನ್ನು ಹೆಲ್ಮೆಟ್ ಮತ್ತು ಸೋಡಾ ಬಾಟಲಿಗಳಿಂದ ಜಖಂಗೊಳಿಸಿದ್ದಾರೆ. ಪ್ರಕರಣದ ದೃಶ್ಯಾವಳಿ

“90 ಬಿಡಿ ಮನೀಗ್ ನಡಿ” ಸಿನಿಮಾ ಜೂನ್ 29ರಿಂದ ರಾಜ್ಯಾದ್ಯಂತ ಬಿಡುಗಡೆ

ಕುಂದಾಪುರದ ನಾಗರಾಜ್ ಅರೆಹೊಳೆ ನಿರ್ದೇಶನದ ಅಮ್ಮ ಟಾಕೀಸ್ ಬಾಗಲಕೋಟ ಸಂಸ್ಥೆಯಡಿ ರತ್ನಮಾಲಾ ಬಾದರದಿನ್ನಿ ನಿರ್ಮಿಸುತ್ತಿರುವ “90 ಬಿಡಿ ಮನೀಗ್ ನಡಿ” ಚಿತ್ರ ಜೂನ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಇದಾಗಿದ್ದು, ಚಿತ್ರದಲ್ಲಿ ವಿಭಿನ್ನ ಗೆಟಪ್‍ಗಳ ಮೂಲಕ ಈಗಾಗಲೇ ಸುದ್ದಿಯಲ್ಲಿದ್ದಾರೆ. ಕ್ರೈಂ ವರದಿಗಾರರಾಗಿ ಪತ್ರಿಕೆ ಮತ್ತು ವಾಹಿನಿಗಳಲ್ಲಿ ಕೆಲಸ ಮಾಡಿರುವ ಕುಂದಾಪುರ ಮೂಲದ

ಕೊರಗರ ಭೂಮಿ ಸಮಸ್ಯೆ ಮತ್ತು ವಿವಿಧ ಬೇಡಿಕೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಕುಂದಾಪುರ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೊರಗರ ಭೂಮಿ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಸಂಬಂಧಪಟ್ಟಂತೆ ನಾಡ ಗ್ರಾಪಂ ಮುಂಭಾಗ ಧರಣಿ ನಡೆಸುತ್ತಿದ್ದು, ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರ ಸೂಚನೆಯಂತೆ ಸ್ಥಳಕ್ಕೆ ಆಗಮಿಸಿದ ಕುದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ, ಧರಣಿ ನಿರತರಿಗೆ ತಿಳುವಳಿಕೆ ಪತ್ರವನ್ನು ನೀಡಿದರು. ಕೊರಗರ ವಿವಿಧ ಬೇಡಿಕೆಗಳ