Home Posts tagged #kundapura (Page 5)

ಕುಂದಾಪುರ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕಿಕೊಂಡು ಬಂದು ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯು ನಾಜೂಕಿನಿಂದ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ಬೋನಿನೊಳಗೆ ಹಾಕಿ ಮೇಲೆಕ್ಕೆತ್ತಿ ರಕ್ಷಿಸಲಾಗಿದೆ. ಇದೀಗ ಗುಡ್ಡಿಹೋಟಲ್, ಜಡ್ಡಾಡಿ ಕೋಣ್ಕಿ, ಬಡಾಕೆರೆ

ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶ ಜೆಟ್ಟಿ ಭಾಗ ಕುಸಿತ

ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿಯಾಗುತ್ತಲೇ ಇದ್ದ ಕುಂದಾಪುರದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಸಂಜೆ 5.30 ರ ಹೊತ್ತಿಗೆ ಘಟನೆ ನಡೆದಿದ್ದು, ನಿರಂತರವಾಗಿ

ಕುಂಭಾಶಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

ಕುಂದಾಪುರ: ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಶ್ರೀ ಶ್ರೀ ನಾಗಾಚಲ ಅಯ್ಯಪ್ಪಸ್ವಾಮಿ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾಧಿಕಾರಿಗಳು, ವೇದಮೂರ್ತಿ ಲೋಕೇಶ್ ಅಡಿಗ ಅವರು ಮಾತನಾಡಿ, ಇಂದು ನಡೆಯುವ ದೇವಳದ ಎಲ್ಲಾ ಕಾರ್ಯಕ್ರಮಕ್ಕೂ ಚಾಲನೆ ನೀಡಿ ನವರಾತ್ರಿಯ

ತ್ರಾಸಿ-ಮರವಂತೆ ಬೀಚ್‍ನಲ್ಲಿ ತಿಮಿಂಗಿಲದ ಮೃತದೇಹ ಪತ್ತೆ

ಕುಂದಾಪುರ: ಕೆಲವು ದಿನಗಳ ಹಿಂದೆ ಸತ್ತ ತಿಮಿಂಗಲ ತ್ರಾಸಿ- ಮರವಂತೆ ಕಡಲತೀರದಲ್ಲಿ ಹೆದ್ದಾರಿ ಬದಿಯ ದಡದಲ್ಲಿ ಬಿದ್ದಿದೆ. ಬೆಳಗ್ಗಿನಿಂದಲೇ ತಿಮಿಂಗಿಲ ಕೊಳೆತು ನಾರುತ್ತಿದ್ದರೂ ಇದುವರೆಗೆ ಪ್ರವಾಸೋದ್ಯಮ ಇಲಾಖೆಯಾಗಲೀ ಮೀನುಗಾರಿಕಾ ಇಲಾಖೆಯಾಗಲೀ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲದಿರುವುದು ಹೆದ್ದಾರಿ ಪ್ರಯಾಣಿಕರು ಹಾಗೂ ಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ ತಡರಾತ್ರಿ ಸುಮಾರು 500 ಕೆಜಿ ತೂಕದ ತಿಮಿಂಗಿಲದ ಸತ್ತ ರೀತಿಯಲ್ಲಿ ಕಂಡುಬಂದಿದೆ. ತ್ರಾಸಿ

ಬೈಂದೂರು ವಲಯ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ವತಿಯಿಂದ ನಾವು ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ವಹಿಸಿದ್ದರು.ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಶುಭ ಹಾರೈಸಿದರು. ಸುಮಾರು 10

ಕಡಿಮೆ ಅಂಕಕ್ಕೆ ಮನನೊಂದು ಸೇತುವೆಯಿಂದ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ಪತ್ತೆ

ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣಕ್ಕೆ ಮನನೊಂದು ಸೇತುವೆ ಮೇಲಿನಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಿಕೊಂಡ ನಗರದ ವಡೇರಹೋಬಳಿ ಜೆಎಲ್‍ಬಿ ರಸ್ತೆಯ ನಿವಾಸಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದದ ಸಮುದ್ರತೀರದಲ್ಲಿ ಪತ್ತೆಯಾಗಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಸಾಯೀಶ್ ಶೆಟ್ಟಿ ಸೈಕಲ್‍ನಲ್ಲಿ ಹೇರಿಕುದ್ರು ಸೇತುವೆಯ ಮೇಲೆ ಬಂದು, ಬಳಿಕ ಸೈಕಲ್ ಹಾಗೂ ಮೊಬೈಲ್ ಅನ್ನು ಮೇಲೆ

ಸೆ.4ರಂದು ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ “ಅಮೃತಭಾರತಿಗೆ ಸಂಗೀತದಾರತಿ” ಕಾರ್ಯಕ್ರಮ

ಸಂಗೀತ ಭಾರತಿ ಟ್ರಸ್ಟ್ (ರಿ.) ಕುಂದಾಪುರ ಮತ್ತು ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 04, ಬೆಳಗ್ಗೆ 09:30ರಿಂದ ಸಂಜೆ 07:00 ರವರೆಗೆ ಹಿಂದುಸ್ಥಾನಿ ಯುವ ಶಾಸ್ತ್ರೀಯ ಸಂಗೀತೋತ್ಸವ “ಅಮೃತಭಾರತಿಗೆ ಸಂಗೀತದಾರತಿ” ಕಾರ್ಯಕ್ರಮ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಉದಯೋನ್ಮುಖ ಸಂಗೀತ ಕಲಾವಿದರಿಗೆ ಹಾಗೂ ಕಲೆ, ಸಂಸ್ಕೃತಿ, ಸಂಗೀತಕ್ಕೆ ಹೆಚ್ಚಿನ ಉತ್ತೇಜನ ನೀಡಲೆಂದು ರೂಪಿಸಿದ ಈ

ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ನೇತೃತ್ವದಲ್ಲಿ : ಕೊಲ್ಲೂರು ಕ್ಷೇತ್ರದಲ್ಲಿ ನಡೆದ ಶತ ಚಂಡಿ ಮಹಾ ಯಾಗ

ಕುಂದಾಪುರ: ಕೊಲ್ಲೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಲೋಕ ಕಲ್ಯಾಣಾರ್ಥವಾಗಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿ ಮಹಾಯಾಗಕ್ಕೆ ಶುಕ್ರವಾರ ಮಧ್ಯಾಹ್ನ ಪೂರ್ಣಾಹುತಿ ನೀಡಲಾಯಿತು.ಕೊಲ್ಲೂರು ದೇವಳದ ಮೂರ್ತಿದಾರಕ ಮೂರ್ತಿ ಕಾಳಿದಾಸ ಭಟ್ ಅವರ ನಿವಾಸದಲ್ಲಿ ನಡೆದ ಶತ ಚಂಡಿ ಯಾಗಕ್ಕೆ ಋತ್ವಿಜರ ಮಂತ್ರ ಪಠಣದೊಂದಿಗೆ ಹೋಮ ಕುಂಡಕ್ಕೆ ವಿವಿಧ ಹವಿಸ್ಸುಗಳನ್ನು ಅರ್ಪಿಸುವ ಮೂಲಕ ಶುಕ್ರವಾರ ಮಧ್ಯಾಹ್ನ

ಕಾಲ್ತೋಡಿ : ಕಾಲುಸಂಕದಿಂದ ಬಿದ್ದು ಮೃತ ಬಾಲಕಿ ಪೋಷಕರಿಗೆ ಸಂಸದ ರಾಘವೇಂದ್ರ ಸಾಂತ್ವಾನ

ಕುಂದಾಪುರ: ಇತ್ತೀಚೆಗೆ ಕಾಲು ಸಂಕದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಕಾಲ್ತೋಡು ಬೋಳಂಬಳ್ಳಿಯ ಮೃತ ಬಾಲಕಿ ಸನ್ನಿಧಿ ಪೋಷಕರು ಸಂಸದ ಬಿವೈ ರಾಘವೇಂದ್ರ ಅವರನ್ನು ಕೊಲ್ಲೂರು ಪ್ರವಾಸಿ ಮಂದಿರಲ್ಲಿ ಗುರುವಾರ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೃತ ಬಾಲಕಿಯ ಪೋಷಕರಿಗೆ ಸಾಂತ್ವನ ತಿಳಿಸಿದ ಅವರು, ಸನ್ನಿಧಿ ಪೋಷಕರಾದ ಪ್ರದೀಪ್ ಮತ್ತು ಸುಮಿತ್ರಾ ಅವರಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದರು. ಈ ವೇಳೆ ಶಾಸಕ ಸುಕುಮಾರ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್

ಕುಂದಾಪುರ : ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಸೊರಬ ನಿವಾಸಿ