Home Posts tagged #kundapura (Page 6)

ಶಂಕಿತ ನಕ್ಸಲ್ ವಾದಿಗಳ ಪ್ರಕರಣದ ತನಿಖೆ ಸೆಕ್ಷನ್ ನ್ಯಾಯಾಲಯಕ್ಕೆ

ಕುಂದಾಪುರ : ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದ ಶಂಕಿತ ನಕ್ಸಲ್ ವಾದಿಗಳಾದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರ ಮೇಲಿನ 7 ಪ್ರಕರಣಗಳ ವಿಚಾರಣೆಯನ್ನು ಸೆಕ್ಷನ್ ನ್ಯಾಯಾಲಯಕ್ಕೆ ವರ್ಗಾಯಿಸಿ ಬುಧವಾರ ಆದೇಶ ಹೊರಡಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವ್ ಯಡಿಯಾಳ ಕೊಲೆ ಪ್ರಕರಣವೂ ಸೇರಿದಂತೆ ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ

ಗೃಹಿಣಿಯ ಚಿನ್ನಾಭರಣ ಎಗರಿಸಿದ ಪ್ರಕರಣ ಆರೋಪಿ ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿ

ಕುಂದಾಪುರ: ವಾರದ ಹಿಂದೆ ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ ನಡೆಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿದ ಆರೋಪಿಯನ್ನು ತ್ರಾಸಿಯ ಬಳಿ ಕುಂದಾಪುರ ಗ್ರಾಮಾಂತರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ತ್ರಾಸಿಯ ಭರತ್‍ನಗರ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿರುವ ಬೈಕ್, ಚಿನ್ನದ ಉಂಗುರ ಮತ್ತು ಗುಜ್ಜಾಡಿ ಸೊಸೈಟಿಯೊಂದರಲ್ಲಿ ಚಿನ್ನದ ಕರಿಮಣಿ ಸರ ಅಡವಿರಿಸಿ ಪಡೆದುಕೊಂಡ ನಗದು ಹಣ ಒಟ್ಟು ರೂ.

ಕುಂದಾಪುರ: ಲಕ್ಷಾಂತರ ರೂ. ಮೌಲ್ಯದ ಚಿನ್ನ ಕದ್ದ ಆರೋಪಿ ಅಂದರ್

ಕುಂದಾಪುರ: ಕಟುಂಬಿಕರೆಲ್ಲರೂ ತೀರ್ಥ ಯಾತ್ರೆಗೆ ತೆರಳಿದ್ದ ಸಂದರ್ಭ ಮನೆಯ ಹಿಂಬದಿಯ ಬಾಗಿಲು ಒಡೆದು ಚಿನ್ನಾಭರಣ ಹಾಗೂ ನಗದು ಕಳವುಗೈದು ಪರಾರಿಯಾದ ಕಳ್ಳನನ್ನು ಸೆರೆ ಹಿಡಿಯುವಲ್ಲಿ ಕುಂದಾಪುರ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಮರವಂತೆ ನಿವಾಸಿ, ಪ್ರಸ್ತುತ ಕುಂಭಾಶಿ ವಿನಾಯಕ ನಗರಲ್ಲಿರುವ ಸುಭಾಶ್ಚಂದ್ರ ಆಚಾರ್ಯ (40) ಬಂಧಿತ ಆರೋಪಿ. 8 ಗ್ರಾಂ ತೂಕದ ಚಿನ್ನದ ಬ್ರಾಸ್ಲೈಟ್, 12 ಗ್ರಾಂ ತೂಕದ ಪೆಂಡೇಂಟ್ ಇರುವ ರೋಪ್ ಚೈನ್, 4 ಗ್ರಾಂ, 3 ಗ್ರಾಂ

ಕಾಲುಸಂಕದಿಂದ ಬಿದ್ದ ಬಾಲಕಿಯ ಮೃತದೇಹ ಪತ್ತೆ

ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಶಾಲೆಯಿಂದ ಮನೆಗೆ ವಾಪಾಸಾಗುವ ವೇಳೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯತಪ್ಪಿ ಹರಿಯುವ ನದಿಗೆ ಬಿದ್ದು ನೀರುಪಾಲಾದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ ಪ್ರದೀಪ್ ಪೂಜಾರಿಯವರ ಪುತ್ರಿ, 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ ಕೊನೆಗೂ 48 ಗಂಟೆಯ ಸತತ ಕಾರ್ಯಾಚರಣೆಯ ಬಳಿಕ ಪತ್ತೆಯಾಗಿದೆ. ಕಾಲ್ತೋಡು ಗ್ರಾಮದ ಬಿಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು.

ಕುಂದಾಪುರ : ಸೌಪರ್ಣಿಕ ನದಿಯ ನೀರಿನ ಮಟ್ಟ ಹೆಚ್ಚಳ

ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ ಪ್ರದೇಶಗಳು ಮುಳುಗಡೆ ಭೀತಿಯಲ್ಲಿದೆ. ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿಗಳು ನೆರೆಯಿಂದ ಸಂಪೂರ್ಣ ಜಲಾವೃತವಾಗಿದೆ. ಕುಡಿಯುವ ನೀರಿಗೆ ಜನರ ಆಹಾಕಾರ ಉಂಟಾಗಿದೆ. ನೆರೆ ನೀರು ಜೊತೆ ಕೆಲವೊಂದು ಹಾವುಗಳು

ವೇಯ್ಟ್‍ಲಿಫ್ಟಿಂಗ್ ಕಂಚು ಗೆದ್ದು ಹುಟ್ಟೂರಿಗೆ ಆಗಮಿಸಿದ ಗುರುರಾಜ್

ಕುಂದಾಪುರ: ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ ಹುಟ್ಟೂರಿಗೆ ಆಗಮಿಸಿದ ತಾಲೂಕಿನ ಗುರುರಾಜ್ ಪೂಜಾರಿ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಚಂಡೆ ವಾದನಗಳ ಸಹಿತ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ನೀಡಲಾದ ಸನ್ಮಾನವನ್ನು ಸ್ವೀಕರಿಸಿ ಮಧ್ಯಾಹ್ನದ ಬಳಿಕ ಕುಂದಾಪುರಕ್ಕೆ ಬಂದಿದ್ದ ಅವರನ್ನು

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕನ್ನಡಿಗ ಗುರುರಾಜ ಪೂಜಾರಿಗೆ ಕಂಚು

ಇಂಗ್ಲೆಂಡ್‍ನ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್‍ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ 269 ಕೆಜಿ ಭಾರ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಎರಡನೇ ಬಾರಿ ಭಾರತಕ್ಕೆ ಪದಕ

ಕಡಲ್ಕೊರೆತ, ಸೌಪರ್ಣಿಕಾ ನದಿ ನೆರೆಹಾವಳಿ : ಸಂಕಷ್ಟ ನಿವಾರಣೆಗೆ ವರಾಹ ದೇವರಲ್ಲಿ ಪ್ರಾರ್ಥನೆ

ಬೈಂದೂರು: ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ರಕ್ಕಸ ಅಲೆಗಳ ಕಡಲ್ಕೊರೆತ ಸೌಪರ್ಣಿಕಾ ನದಿಯ ನೆರೆಹಾವಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗಿ ಸಾಕಷ್ಟು ಮುಗ್ಧ ಜೀವಗಳು ಮತ್ತು ಜಾನುವಾರುಗಳು ದಿನದಿಂದ ದಿನಕ್ಕೆ ಸಾವನ್ನಪ್ಪುತ್ತಿವೆ. ಅಪಘಾತಗಳು ಹೆಚ್ಚುತ್ತಿರುವುದರಿಂದ ಜನರು ಭೀತರಾಗಿದ್ದು ಸಂಕಷ್ಟದ ನಿವಾರಣೆಗೆ ಜುಲೈ 28ರಂದು ನಡೆಯುವ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಮಾರಸ್ವಾಮಿ ವರಾಹ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದರ

ಭಾರೀ ಮಳೆಗೆ ಕುಸಿದ ಮೋರಿ : ಹೊಳೆಯ ಪಾಲಾದ ರಸ್ತೆ

ಬೈಂದೂರು ವಿಧಾನಸಭಾ ಕ್ಷೇತ್ರದ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂರಕುಂದ ಸಮೀಪದ ಕಲ್ಮಕ್ಕಿಯಲ್ಲಿ ಕಳೆದ 2-3ದಿನಗಳಿಂದ ಸುರಿದ ಭಾರಿ ಮಳೆಗೆ ರಸ್ತೆಗೇ ಅಳವಡಿಸಿದ್ದ ಮೋರಿ ಕುಸಿದು ಸಂಪರ್ಕ ರಸ್ತೆ ಹೊಳೆಯ ಪಾಲಾಗಿದೆ. ಹಲವಾರು ಮನೆಗೆ ಸಂಪರ್ಕವೇ ಇಲ್ಲದಂತಾಗಿದೆ. ಶಾಸಕರಾದ ಸುಕುಮಾರ ಶೆಟ್ಟಿ ಯವರು ಸ್ಥಳಕ್ಕೆ ಆಗಮಿಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಲ್ಲಿ ಎಸ್ಟಿಮೇಟ್ ಮಾಡಲು ಆದೇಶ ಮಾಡಿದರು.ತಕ್ಷಣಕ್ಕೆ ತುರ್ತು ಅಗತ್ಯ ಕ್ರಮ

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಕೆ. ಗೋಪಾಲ ಪೂಜಾರಿ ಭೇಟಿ : ತಡೆಗೋಡೆಗೆ ಬೇಕಾದ ಅಗತ್ಯ ಕ್ರಮ ವಹಿಸಲು ಮನವಿ

ಕುಂದಾಪುರ: ಕಾಲಿನ ಶಸ್ತೃಚಿಕಿತ್ಸೆಗೊಳಗಾಗಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರೂ ಊರುಗೋಲಿನ ಸಹಾಯದಿಂದ ಮರವಂತೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬಿದರು.ಪಕ್ಷದ ಮುಖಂಡರೊಂದಿಗೆ ಕಡಲ್ಕೊರೆತ ಪ್ರದೇಶ ಮರವಂತೆಗೆ ಭೇಟಿ ನೀಡಿದ ಅವರು, ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆಯಲ್ಲಿ ಮಾತನಾಡಿದ ಸ್ಥಳೀಯರು ಕಳೆದ ಹನ್ನೆರಡು ದಿನಗಳಿಗೂ ಅಧಿಕ