Home Posts tagged #kundapura (Page 7)

ಸೆ.4ರಂದು ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ “ಅಮೃತಭಾರತಿಗೆ ಸಂಗೀತದಾರತಿ” ಕಾರ್ಯಕ್ರಮ

ಸಂಗೀತ ಭಾರತಿ ಟ್ರಸ್ಟ್ (ರಿ.) ಕುಂದಾಪುರ ಮತ್ತು ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 04, ಬೆಳಗ್ಗೆ 09:30ರಿಂದ ಸಂಜೆ 07:00 ರವರೆಗೆ ಹಿಂದುಸ್ಥಾನಿ ಯುವ ಶಾಸ್ತ್ರೀಯ ಸಂಗೀತೋತ್ಸವ “ಅಮೃತಭಾರತಿಗೆ ಸಂಗೀತದಾರತಿ” ಕಾರ್ಯಕ್ರಮ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಉದಯೋನ್ಮುಖ ಸಂಗೀತ

ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ನೇತೃತ್ವದಲ್ಲಿ : ಕೊಲ್ಲೂರು ಕ್ಷೇತ್ರದಲ್ಲಿ ನಡೆದ ಶತ ಚಂಡಿ ಮಹಾ ಯಾಗ

ಕುಂದಾಪುರ: ಕೊಲ್ಲೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಲೋಕ ಕಲ್ಯಾಣಾರ್ಥವಾಗಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿ ಮಹಾಯಾಗಕ್ಕೆ ಶುಕ್ರವಾರ ಮಧ್ಯಾಹ್ನ ಪೂರ್ಣಾಹುತಿ ನೀಡಲಾಯಿತು.ಕೊಲ್ಲೂರು ದೇವಳದ ಮೂರ್ತಿದಾರಕ ಮೂರ್ತಿ ಕಾಳಿದಾಸ ಭಟ್ ಅವರ ನಿವಾಸದಲ್ಲಿ ನಡೆದ ಶತ ಚಂಡಿ ಯಾಗಕ್ಕೆ ಋತ್ವಿಜರ ಮಂತ್ರ ಪಠಣದೊಂದಿಗೆ ಹೋಮ ಕುಂಡಕ್ಕೆ ವಿವಿಧ ಹವಿಸ್ಸುಗಳನ್ನು ಅರ್ಪಿಸುವ ಮೂಲಕ ಶುಕ್ರವಾರ ಮಧ್ಯಾಹ್ನ

ಕಾಲ್ತೋಡಿ : ಕಾಲುಸಂಕದಿಂದ ಬಿದ್ದು ಮೃತ ಬಾಲಕಿ ಪೋಷಕರಿಗೆ ಸಂಸದ ರಾಘವೇಂದ್ರ ಸಾಂತ್ವಾನ

ಕುಂದಾಪುರ: ಇತ್ತೀಚೆಗೆ ಕಾಲು ಸಂಕದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಕಾಲ್ತೋಡು ಬೋಳಂಬಳ್ಳಿಯ ಮೃತ ಬಾಲಕಿ ಸನ್ನಿಧಿ ಪೋಷಕರು ಸಂಸದ ಬಿವೈ ರಾಘವೇಂದ್ರ ಅವರನ್ನು ಕೊಲ್ಲೂರು ಪ್ರವಾಸಿ ಮಂದಿರಲ್ಲಿ ಗುರುವಾರ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೃತ ಬಾಲಕಿಯ ಪೋಷಕರಿಗೆ ಸಾಂತ್ವನ ತಿಳಿಸಿದ ಅವರು, ಸನ್ನಿಧಿ ಪೋಷಕರಾದ ಪ್ರದೀಪ್ ಮತ್ತು ಸುಮಿತ್ರಾ ಅವರಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದರು. ಈ ವೇಳೆ ಶಾಸಕ ಸುಕುಮಾರ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್

ಕುಂದಾಪುರ : ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಸೊರಬ ನಿವಾಸಿ

ಶಂಕಿತ ನಕ್ಸಲ್ ವಾದಿಗಳ ಪ್ರಕರಣದ ತನಿಖೆ ಸೆಕ್ಷನ್ ನ್ಯಾಯಾಲಯಕ್ಕೆ

ಕುಂದಾಪುರ : ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದ ಶಂಕಿತ ನಕ್ಸಲ್ ವಾದಿಗಳಾದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರ ಮೇಲಿನ 7 ಪ್ರಕರಣಗಳ ವಿಚಾರಣೆಯನ್ನು ಸೆಕ್ಷನ್ ನ್ಯಾಯಾಲಯಕ್ಕೆ ವರ್ಗಾಯಿಸಿ ಬುಧವಾರ ಆದೇಶ ಹೊರಡಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವ್ ಯಡಿಯಾಳ ಕೊಲೆ ಪ್ರಕರಣವೂ ಸೇರಿದಂತೆ ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 11 ಪ್ರಕರಣಗಳಿದ್ದು, ಶಂಕರನಾರಾಯಣ ಠಾಣಾ ವ್ಯಾಪ್ತಿಯ 6 ಹಾಗೂ ಕೊಲ್ಲೂರು ಠಾಣೆ

ಗೃಹಿಣಿಯ ಚಿನ್ನಾಭರಣ ಎಗರಿಸಿದ ಪ್ರಕರಣ ಆರೋಪಿ ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿ

ಕುಂದಾಪುರ: ವಾರದ ಹಿಂದೆ ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ ನಡೆಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿದ ಆರೋಪಿಯನ್ನು ತ್ರಾಸಿಯ ಬಳಿ ಕುಂದಾಪುರ ಗ್ರಾಮಾಂತರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ತ್ರಾಸಿಯ ಭರತ್‍ನಗರ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿರುವ ಬೈಕ್, ಚಿನ್ನದ ಉಂಗುರ ಮತ್ತು ಗುಜ್ಜಾಡಿ ಸೊಸೈಟಿಯೊಂದರಲ್ಲಿ ಚಿನ್ನದ ಕರಿಮಣಿ ಸರ ಅಡವಿರಿಸಿ ಪಡೆದುಕೊಂಡ ನಗದು ಹಣ ಒಟ್ಟು ರೂ.

ಕುಂದಾಪುರ: ಲಕ್ಷಾಂತರ ರೂ. ಮೌಲ್ಯದ ಚಿನ್ನ ಕದ್ದ ಆರೋಪಿ ಅಂದರ್

ಕುಂದಾಪುರ: ಕಟುಂಬಿಕರೆಲ್ಲರೂ ತೀರ್ಥ ಯಾತ್ರೆಗೆ ತೆರಳಿದ್ದ ಸಂದರ್ಭ ಮನೆಯ ಹಿಂಬದಿಯ ಬಾಗಿಲು ಒಡೆದು ಚಿನ್ನಾಭರಣ ಹಾಗೂ ನಗದು ಕಳವುಗೈದು ಪರಾರಿಯಾದ ಕಳ್ಳನನ್ನು ಸೆರೆ ಹಿಡಿಯುವಲ್ಲಿ ಕುಂದಾಪುರ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಮರವಂತೆ ನಿವಾಸಿ, ಪ್ರಸ್ತುತ ಕುಂಭಾಶಿ ವಿನಾಯಕ ನಗರಲ್ಲಿರುವ ಸುಭಾಶ್ಚಂದ್ರ ಆಚಾರ್ಯ (40) ಬಂಧಿತ ಆರೋಪಿ. 8 ಗ್ರಾಂ ತೂಕದ ಚಿನ್ನದ ಬ್ರಾಸ್ಲೈಟ್, 12 ಗ್ರಾಂ ತೂಕದ ಪೆಂಡೇಂಟ್ ಇರುವ ರೋಪ್ ಚೈನ್, 4 ಗ್ರಾಂ, 3 ಗ್ರಾಂ

ಕಾಲುಸಂಕದಿಂದ ಬಿದ್ದ ಬಾಲಕಿಯ ಮೃತದೇಹ ಪತ್ತೆ

ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಶಾಲೆಯಿಂದ ಮನೆಗೆ ವಾಪಾಸಾಗುವ ವೇಳೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯತಪ್ಪಿ ಹರಿಯುವ ನದಿಗೆ ಬಿದ್ದು ನೀರುಪಾಲಾದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ ಪ್ರದೀಪ್ ಪೂಜಾರಿಯವರ ಪುತ್ರಿ, 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ ಕೊನೆಗೂ 48 ಗಂಟೆಯ ಸತತ ಕಾರ್ಯಾಚರಣೆಯ ಬಳಿಕ ಪತ್ತೆಯಾಗಿದೆ. ಕಾಲ್ತೋಡು ಗ್ರಾಮದ ಬಿಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು.

ಕುಂದಾಪುರ : ಸೌಪರ್ಣಿಕ ನದಿಯ ನೀರಿನ ಮಟ್ಟ ಹೆಚ್ಚಳ

ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ ಪ್ರದೇಶಗಳು ಮುಳುಗಡೆ ಭೀತಿಯಲ್ಲಿದೆ. ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿಗಳು ನೆರೆಯಿಂದ ಸಂಪೂರ್ಣ ಜಲಾವೃತವಾಗಿದೆ. ಕುಡಿಯುವ ನೀರಿಗೆ ಜನರ ಆಹಾಕಾರ ಉಂಟಾಗಿದೆ. ನೆರೆ ನೀರು ಜೊತೆ ಕೆಲವೊಂದು ಹಾವುಗಳು

ವೇಯ್ಟ್‍ಲಿಫ್ಟಿಂಗ್ ಕಂಚು ಗೆದ್ದು ಹುಟ್ಟೂರಿಗೆ ಆಗಮಿಸಿದ ಗುರುರಾಜ್

ಕುಂದಾಪುರ: ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ ಹುಟ್ಟೂರಿಗೆ ಆಗಮಿಸಿದ ತಾಲೂಕಿನ ಗುರುರಾಜ್ ಪೂಜಾರಿ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಚಂಡೆ ವಾದನಗಳ ಸಹಿತ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಉಡುಪಿಯಲ್ಲಿ ಜಿಲ್ಲಾಡಳಿತ ವತಿಯಿಂದ ನೀಡಲಾದ ಸನ್ಮಾನವನ್ನು ಸ್ವೀಕರಿಸಿ ಮಧ್ಯಾಹ್ನದ ಬಳಿಕ ಕುಂದಾಪುರಕ್ಕೆ ಬಂದಿದ್ದ ಅವರನ್ನು