ಉಡುಪಿಯ ಮಹಾತ್ಮ ಗಾಂಧಿ ಮೈದಾನದಲ್ಲಿ ಗ್ಯಾರೆಂಟಿ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗ್ಯಾರಂಟಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯವರು ಗ್ಯಾರೆಂಟಿ ಯೋಜನೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನೇರವಾಗಿ ಫಲಾನುಭವಿಗಳಿಗೆ ಪ್ರಯೋಜನ ತಿಳಿಸಲು ಈ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಜಿಲ್ಲಾ
ಗಂಗೊಳ್ಳಿಯಲ್ಲಿ ಕಳೆದ ಸೋಮವಾರ ನಡೆದಿದ್ದ ಬೋಟು ಅಗ್ನಿ ದುರಂತ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಈ ಪ್ರದೇಶದಲ್ಲಿ ಯಾವುದೇ ರಾಸಾಯನಿಕ ವಸ್ತುಗಳನ್ನು ಬಳಸಿ ಯಾಂತ್ರಿಕ ದೋಣಿಯ ನಿರ್ಮಾಣಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿದರು. ಕಳೆದ ತುಂಬಾ ಸಮಯದಿಂದ ಕೊಳಚೆ ತ್ಯಾಜ್ಯವನ್ನು ವಿಲೇವಾರಿ ಮಾಡದೇ ಸ್ಥಳೀಯ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. ಅಲ್ಲದೇ ಇಲ್ಲಿ ರಾಸಾಯನಿಕ ಮಿಶ್ರಿತ ಯಾಂತ್ರೀಕೃತ
ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಪಡುಬಿದ್ರಿಯ ನಡಿಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಮತ್ತು
ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ