Home Posts tagged #maani

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತ್ಯು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಬೇಸಿಗೆ ಶಿಬಿರ

ವಿಟ್ಲ: ಮಾಣಿ , ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7 ರಂದು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಪೂರ್ವಾಹ್ನ 9.30ಕ್ಕೆ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಮತ್ತು ಬಾಲವಿಕಾಸ ಟ್ರಸ್ಟ್ ಮಾಣಿಯ ಅಧ್ಯಕ್ಷರೂ ಆಗಿರುವ ಶ್ರೀ ಪ್ರಹ್ಲಾದ ಶೆಟ್ಟಿ .ಜೆ ರವರು ಶಾಲಾ ಆವರಣದಲ್ಲಿ ಹಣ್ಣಿನ

ಮಾಣಿ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್‌ನ ವಾರ್ಷಿಕ ಕಾರ್ಯಕ್ರಮ, ಪದಗ್ರಹಣ ಸಮಾರಂಭ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭವು ಪೆರ್ಲಾಪು ಪ್ರಾಥಾಮಿಕ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ನಿವೃತ್ತ ಪ್ರಾಂಶುಪಾಲರಾದ ಎ ಕೃಷ್ಣಪ್ಪ ಪೂಜಾರಿ ಮಾತನಾಡಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ, ಅವರಲ್ಲಿ ನೈತಿಕ ಗುಣಮಟ್ಟವನ್ನು ಬೆಳೆಸಿ,ಬೇರೆ ಯಾವುದೇ ಆಸ್ತಿಮಾಡಿ ಕೊಡುವ ಅಗತ್ಯವಿಲ್ಲ. ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ ರಿ ಇದರ ಗೌರವಾಧ್ಯಕ್ಷರಾದ ಮೋಹನ್

ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್ – ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್, ಮಾಣಿಯ ವಿದ್ಯಾನಗರದಲ್ಲಿರುವ ಈ ಶಾಲೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಹೆಸರುವಾಸಿಯಾದ ಸಂಸ್ಥೆ. ಇದೀಗ ಈ ಶಾಲೆಯಲ್ಲಿ ನಾಳೆ ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಟ್ರಸ್ಟ್ನ ಅಧ್ಯಕ್ಷ ಪ್ರಹಲ್ಲಾದ್ ಶೆಟ್ಟಿ ಜೆ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಕ್ತಿ ಎಜುಕೇಶನಲ್ ಟ್ರಸ್ಟ್ನ ಸ್ಥಾಪಕ ಡಾ ಕೆಸಿ ನಾಯ್ಕ್,

ಮಾಣಿಯಲ್ಲಿ ನಡೆದ ಗಲಾಟೆ ವಿಚಾರ – ಗಾಯಾಳುಗಳ ಆರೋಗ್ಯ ವಿಚಾರಿಸಿದ ನಳಿನ್, ರಾಜೇಶ್ ನಾಯಕ್

ಮಾಣಿಯಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಹರಿಕೃಷ್ಣ ಬಂಟ್ವಾಳ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಪೊಲೀಸ್ ವರಿಷ್ಟಾಧಿಕಾರಿಯನ್ನು ಪೋನ್ ಮುಖಾಂತರ ಸಂಪರ್ಕ ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ

ಮಾಣಿ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಪೂರ್ಣ ಸುಟ್ಟು ಕರಕಲಾದ ಮನೆ

ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ