ಕೆಎಸ್‌ಆರ್‌ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ನೀಡದ ಸತಾಯಿಸುತ್ತಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಪುತ್ತೂರು, ಸುಳ್ಯ, ಮಡಿಕೇರಿ ಡಿಪೋಗಳ ಬಸ್ ಚಾಲಕರು ಬಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಬಸ್ ಚಾಲಕರು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಪರದಾಡಿದ ಘಟನೆಯೂ ನಡೆಯಿತು. ಕೆಎಸ್‌ಆರ್‌ಟಿಸಿ ಬಸ್‌ಗೆ ಕಾಂಟ್ರಾಕ್ಟ್ ಬೇಸ್‌ನಲ್ಲಿ ಚಾಲಕರನ್ನು ನೇಮಕ
ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ, ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ
ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ
ಮಡಿಕೇರಿ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6ರಂದು ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್
ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಬಳಿಯಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಮಧ್ಯೆ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿದ್ದು, ಮಾಣಿ-ಮೈಸೂರು ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಠಿಯಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಸದ್ಯ ಮುಂಜಾಗರೂಕತೆಯ ಕ್ರಮವಾಗಿ ಈ ಹೆದ್ದಾರಿಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಪರಿಶೀಲನೆ