Home Posts tagged #mallikarjuna kharge

ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ

ವೈಎಸ್‌ಆರ್ ಸಂಸ್ಥಾಪಕಿ ವೈ. ಎಸ್. ಶರ್ಮಿಳಾ ಕಾಂಗ್ರೆಸ್‌ಗೆ ಸೇರ್ಪಡೆ

ತೆಲಂಗಾಣದಲ್ಲಿ ವೈಎಸ್‌ಆರ್ ಪಕ್ಷವನ್ನು ಸ್ಥಾಪಿಸಿದ್ದ ಹಿಂದಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ರಾಜಶೇಖರ ರೆಡ್ಡಿಯವರ ಮಗಳು ಮತ್ತು ಈಗಿನ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ. ಎಸ್. ಶರ್ಮಿಳಾ ಅವರು ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಸೇರಿದ್ದಲ್ಲದೆ ತಮ್ಮ ಪಕ್ಷವನ್ನು ಕಾಂಗ್ರೆಸ್ಸಿನಲ್ಲಿ

ದಶಕದಲ್ಲಿ ದಲಿತರ ವಿರುದ್ಧ ದೌರ್ಜನ್ಯ 48%ದಷ್ಟು ಹೆಚ್ಚಳ

ಕಳೆದೊಂದು ದಶಕದಲ್ಲಿ ದಲಿತರ ಮೇಲಿನ ಅಪರಾಧಗಳು ಭಾರತದಲ್ಲಿ 48 ಶೇಕಡಾದಷ್ಟು ಹೆಚ್ಚಾಗಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗ್ರಾಫ್ ಪೋಸ್ಟ್ ಮಾಡುವ ಮೂಲಕ ಬಿಜೆಪಿಯ ಸಬ್ ಕ ಸಾಥ್ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ.ಎನ್‍ಸಿಆರ್‍ಬಿ- ರಾಷ್ಟ್ರೀಯ ಅಪರಾಧ ವರದಿಯ ಆಧಾರದ ಮೇಲೆ ಈ ಗ್ರಾಫ್ ತಯಾರಾಗಿದೆ. ದಲಿತರ ಮೇಲೆ 46.12% ಮತ್ತು ಬುಡಕಟ್ಟು ಜನರ ಮೇಲೆ 48.15% ದೌರ್ಜನ್ಯ ಅಧಿಕವಾಗಿರುವುದು ಅಂಕಿಅಂಶದಲ್ಲಿದೆ.ಚುನಾವಣೆ ಮುಗಿದ

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಶಾಸಕ ಪ್ರಿಯಾಂಕ್ ಖರ್ಗೆ

ಸುರತ್ಕಲ್: ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್‍ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ