ಮಂಡೆಕೋಲು ಗ್ರಾಮದ ಮುರೂರು ಧ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾದವ ಗೌಡರವರು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ
ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟ ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾಗಿ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಶ್ರೀಮತಿ ವಿನುತಾ ಪಾತಿಕಲ್ಲುರವರು ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಹಾಲಿ
ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ “ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.)” ಯ ದಶಮಾನೋತ್ಸವದ ಅಂಗವಾಗಿ ಮಹಿಳಾ ದಿನಾಚರಣೆ ಮತ್ತು” ನಾನೂ ನಾಯಕಿ’ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವು ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದೊಂದಿಗೆ ನಡೆಯಿತು. ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ ನ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಅವರ ಅಧ್ಯಕ್ಷತೆಯಲ್ಲಿ ನಡೆದ
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮವಿಂದು ವಿನೂತನ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಿ ಉತ್ಸವದ ಕಳೆ ಮೇಳೈಸಿದೆ. ಅರೆಭಾಷೆ ಗಡಿನಾಡ ಉತ್ಸವ-2024ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ದೊರಕಿತು. ಕರ್ನಾಟಕ ಅರೆಬಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಸಂಭ್ರಮದಿಂದ ನಡೆಯುತ್ತಿದೆ. ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ ಅದ್ದೂರಿ ಸಮಾರಂಭಕ್ಕೆ
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಗ್ರಾಮದೇವರಾದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಶ್ರೀ ಕ್ಷೇತ್ರದಲ್ಲಿ ಏಪ್ರಿಲ್ 13ರಿಂದ ಮೇ 4ರ ವರೆಗೆ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವರ ಗಂಧ ಮತ್ತು ಅನ್ನ ಪ್ರಸಾದವನ್ನು ಸ್ವೀಕರಿಸಿ ಪುನೀತರಾಗಿದ್ದಾರೆ.
ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ತೆರಳಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್,
ಸುಳ್ಯ: ಅಷ್ಟುದ್ದದ ವೇದಿಕೆ..,ಕಣ್ಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ.., ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ…ಅದರಲ್ಲಿ ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು… ಇದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ ವರ್ಣನೆಯಲ್ಲ. ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾದ
ಸುಳ್ಯ: ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನಲ್ಲದೆ ದುಃಖಿತ ಮನಸ್ಸಿಗೆ ನೆಮ್ಮದಿಯ ಸಾಂತ್ವನ ದೊರೆಯುತ್ತದೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ನಡೆದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಜೀವನದಲ್ಲಿ ಬರುವ ಕಷ್ಟ
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ ತಂತ್ರಿಗಳು ಶುಭ ಹಾರೈಸಿದರು. ಅಲ್ಲದೆ ಕೋಟಿ ಲೇಖನ
ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಗೆ ಒಳಗಾಗಿದ್ದಾರೆ. ಸುಮಾರು 6 ಅಡಿ